ETV Bharat / state

ನಾಳೆ ನಿಗದಿಯಾಗಿದ್ದ ಸಚಿವ ಸಂಪುಟ ಸಭೆ ಶುಕ್ರವಾರಕ್ಕೆ ಮುಂದೂಡಿಕೆ

ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ.

CM and cabinet ministers
ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು
author img

By

Published : May 31, 2023, 2:12 PM IST

ಬೆಂಗಳೂರು: ಗುರುವಾರ ನಿಗದಿಯಾಗಿದ್ದ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಸಲು ತೀರ್ಮಾನ ಮಾಡಲಾಗಿದೆ. ಹಾಗಾಗಿ ನಾಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಘೋಷಣೆಯಾಗುವುದಿಲ್ಲ.

ಐದು ಗ್ಯಾರಂಟಿ ಯೋಜನೆಗಳ ಜಾರಿ ಹಿನ್ನೆಲೆಯಲ್ಲಿ ಇಂದು ಎಲ್ಲಾ ಸಚಿವರುಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಹಿರಿಯ ಅಧಿಕಾರಿಗಳ ಜತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಇನ್ನೂ ಗೊಂದಲದಲ್ಲೇ ಇದೆ ಎನ್ನಲಾಗಿದೆ. ಹಾಗಾಗಿ ಕ್ಯಾಬಿನೆಟ್ ಸಭೆಯನ್ನು ಶುಕ್ರವಾರಕ್ಕೆ ಮುಂದೂಡಲಾಗಿದೆಯೇ ಎಂಬ ಪ್ರಶ್ನೆ ಮೂಡಿದೆ.

ನಾಳೆಯೂ ಕೂಡಾ ಅಧಿಕಾರಿಗಳ ಜತೆ ಸಿಎಂ ಸಭೆ ನಡೆಸಿ ಶುಕ್ರವಾರ ನಡೆಯುವ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆಸಿ ನಂತರ ಗ್ಯಾರಂಟಿ ಯೋಜನೆ ಅನುಷ್ಠಾನದ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಬೆಳಗಾವಿ ಪ್ರವಾಸದಲ್ಲಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಸಭೆಗೆ ಗೈರಾಗಿದ್ದರು.

ಇದನ್ನೂ ಓದಿ: ಐದು ಗ್ಯಾರಂಟಿಗಳಿಗೆ ಕ್ಯಾಬಿನೆಟ್​ನಲ್ಲೇ ಒಪ್ಪಿಗೆ ಸಿಕ್ಕಿದೆ : ಸಚಿವ ಕೆಜೆ ಜಾರ್ಜ್

ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ, ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್‌ನ ಗೃಹಜ್ಯೋತಿ, ಪಡಿತರ ವ್ಯವಸ್ಥೆಯಲ್ಲಿ ಪ್ರತಿ ವ್ಯಕ್ತಿಗೆ 10 ಕೆ.ಜಿ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆ ಜತೆಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣ ಯೋಜನೆ ಹಾಗೂ ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಯನ್ನು ಜಾರಿ ಮಾಡುವುದಾಗಿ ಘೋಷಣೆ ಮಾಡಿತ್ತು.

ಜೂನ್ 1 ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಐದು ಯೋಜನೆಗಳ ರೂಪುರೇಷೆಗಳು, ಮಾರ್ಗಸೂಚಿಗಳನ್ನು ಅಂತಿಮಗೊಳಿಸಲಾಗುತ್ತದೆ ಎನ್ನಲಾಗಿತ್ತು. ಮುಖ್ಯಮಂತ್ರಿ ಅವರು ಐದು ಇಲಾಖೆಯ ಮುಖ್ಯಸ್ಥರು ಹಾಗೂ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಯೋಜನೆ ಅನುಷ್ಠಾನಕ್ಕೆ ವೆಚ್ಚವಾಗುವ ಹಣದ ಮಾಹಿತಿಯನ್ನು ಪಡೆದುಕೊಂಡಿದ್ದರು. ಈ ಸಭೆಯಲ್ಲಿ ಭಾಗಿಯಾಗಿದ್ದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಹಾಗೂ ಹಣಕಾಸು ಇಲಾಖೆಯ ಅಧಿಕಾರಿಗಳು ಈ ಐದು ಗ್ಯಾರಂಟಿ ಯೋಜನೆ ಜಾರಿಗೆ ವಾರ್ಷಿಕ 50 ಸಾವಿರ ಕೋಟಿ ರೂ. ಬೇಕಾಗುತ್ತದೆ ಎಂದು ಹೇಳಿದ್ದರು.

ಈ ಐದು ಗ್ಯಾರಂಟಿ ಯೋಜನೆಗಳನ್ನು ಯಾರಿಗೆಲ್ಲಾ ನೀಡಬೇಕು?, ಯಾವ ಯಾವ ಮಾರ್ಗಸೂಚಿಗಳನ್ನು ರೂಪಿಸಬೇಕು ಎಂಬ ಬಗ್ಗೆಯೂ ಮುಖ್ಯಮಂತ್ರಿಗಳು ಸಚಿವರೊಂದಿಗೆ ಚರ್ಚೆ ನಡೆಸುತ್ತಿದ್ದಾರೆ. ಈ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಚಿವರುಗಳ ಸಲಹೆಗಳನ್ನು ಮುಖ್ಯಮಂತ್ರಿಗಳು ಸಭೆಯಲ್ಲಿ ಆಲಿಸಲಿದ್ದು, ಅಂತಿಮವಾಗಿ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿ ಯೋಜನೆಗಳ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಜಾರಿ ಮಾಡುವ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ ಈಗ ಸಚಿವ ಸಂಪುಟ ಸಭೆಯನ್ನು ಮುಂದೂಡಲಾಗಿದೆ.

ಇದನ್ನೂ ಓದಿ: 5 ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಚಿವರ ಸಭೆ ಕರೆದ ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.