ETV Bharat / state

ದತ್ತಪೀಠದಲ್ಲಿ ಪೂಜೆಗೆ ಹಿಂದೂ-ಮುಸ್ಲಿಮರಿಗೆ ಅವಕಾಶ: ಸಂಪುಟ ಉಪಸಮಿತಿ ವರದಿ ಶಿಫಾರಸಿಗೆ ಒಪ್ಪಿಗೆ

ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ದತ್ತಪೀಠ ಸಂಬಂಧ ಪೂಜಾ ಕೈಂಕರ್ಯ ಸಂಬಂಧ ಸಂಪುಟ ಉಪಸಮಿತಿಯ ವರದಿಯ ಶಿಫಾರಸಿಗೆ ಅನುಮೋದನೆ ನೀಡಲಾಗಿದೆ.

ಬಾಬಾಬುಡನ್ ಗಿರಿ ಇನಾಂ ದತ್ತಾತ್ರೇಯ ಪೀಠ
ಬಾಬಾಬುಡನ್ ಗಿರಿ ಇನಾಂ ದತ್ತಾತ್ರೇಯ ಪೀಠ
author img

By

Published : Jul 1, 2022, 6:07 PM IST

ಬೆಂಗಳೂರು: ದತ್ತ ಪೀಠದಲ್ಲಿ ಪೂಜೆ ನೆರವೇರಿಸುವ ಸಂಬಂಧ ಕಾನೂನು ಸಚಿವ ಮಾಧುಸ್ವಾಮಿ ನೇತೃತ್ವದ ಸಚಿವ ಸಂಪುಟ ಉಪಸಮಿತಿ ವರದಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ದೊರೆತಿದೆ. ವರದಿಯಲ್ಲಿನ ಶಿಫಾರಸುಗಳನ್ನು ಹೈಕೋರ್ಟ್​ಗೆ ಸಲ್ಲಿಸಲು ತೀರ್ಮಾನಿಸಲಾಗಿದೆ.

ಬಾಬಾಬುಡನ್‌ಗಿರಿ ಇನಾಂ ದತ್ತಾತ್ರೇಯ ಪೀಠದಲ್ಲಿ ಹಿಂದೂ ಸಂಪ್ರದಾಯದ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಮುಸ್ಲಿಂ ಸಮುದಾಯದ ಮುಜಾವರ್ ನೇಮಿಸಿ ರಾಜ್ಯ ಸರ್ಕಾರ 2018 ರ ಮಾ. 19ರಂದು ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ಶ್ರೀ ಗುರು ದತ್ತಾತ್ರೇಯ ದೇವಸ್ಥಾನ ಸಂವರ್ಧನಾ ಸಮಿತಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು.

ಸರ್ಕಾರದ ಆದೇಶವನ್ನು ರದ್ದುಪಡಿಸಿ 2021ರ ಫೆ 28ರಂದು ಆದೇಶಿಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠ, ನ್ಯಾ.ನಾಗಮೋಹನ್‌ದಾಸ್ ಸಮಿತಿಯ ವರದಿಯನ್ನು ಪರಿಗಣನೆಗೆ ತೆಗೆದುಕೊಳ್ಳದೆ ಪ್ರಕರಣವನ್ನು ಕಾನೂನು ರೀತಿ ಹೊಸದಾಗಿ ಪರಿಶೀಲಿಸಬೇಕು ಎಂದು ಸರ್ಕಾರಕ್ಕೆ ಸೂಚನೆ ನೀಡಿತ್ತು. ಏಕಸದಸ್ಯಪೀಠದ ಆದೇಶ ಪ್ರಶ್ನಿಸಿ ಷಾ ಖಾದ್ರಿ ಮೇಲ್ಮನವಿ ಸಲ್ಲಿಸಿದ್ದರು.

ಏಕಸದಸ್ಯ ಪೀಠದ ಆದೇಶ ಪಾಲನೆ ಮಾಡಲು ರಾಜ್ಯ ಸರ್ಕಾರ ಮೂವರು ಸಚಿವರನ್ನೊಳಗೊಂಡ ಸಚಿವ ಸಂಪುಟದ ಉಪ ಸಮಿತಿ ರಚಿಸಿತ್ತು. ಈ ಉಪ ಸಮಿತಿಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರ, ಗೃಹ ಹಾಗೂ ಮುಜರಾಯಿ ಇಲಾಖೆ ಸಚಿವರಿದ್ದರು. ಸಮಿತಿ ಈಗಾಗಲೇ ಸ್ಥಳಕ್ಕೆ ಭೇಟಿ ಕೊಟ್ಟು ಎರಡೂ ಕಡೆಯ ಸಂಬಂಧಪಟ್ಟವರೊಂದಿಗೆ ಸಮಾಲೋಚನೆ ನಡೆಸಿದೆ. ಎರಡೂ ಪಕ್ಷಗಾರರ ನಡುವಿನ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವ ನಿಟ್ಟಿನಲ್ಲಿ 6 ವಾರಗಳಲ್ಲಿ ತೀರ್ಮಾನ ತೆಗೆದುಕೊಳ್ಳುವುದಾಗಿ ಕೋರ್ಟ್​ಗೆ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಕರಣದ ವಿಚಾರಣೆ 6 ವಾರ ಮುಂದೂಡಲಾಗಿತ್ತು.

ವರದಿಯ ಶಿಫಾರಸುಗಳು:

- ವಾರ್ಷಿಕ ಧಾರ್ಮಿಕ ಕಾರ್ಯಕ್ರಮಗಳ ದಿನಚರಿ ರೂಪಿಸಲು ವ್ಯವಸ್ಥಾಪನಾ ಸಮಿತಿಗೆ ಜವಾಬ್ದಾರಿ

- ದರ್ಗಾ ಪೂಜೆ ಹಾಗೂ ದತ್ತಪೀಠದಲ್ಲಿ ಪೂಜೆ ಸಲ್ಲಿಸಲು ಎರಡು ಸಮುದಾಯಕ್ಕೆ ಅವಕಾಶ

- ವ್ಯವಸ್ಥಾಪನಾ ಸಮಿತಿಗೆ ಅರ್ಚಕ ಹಾಗೂ ಮುಜಾವರ ನೇಮಕಾತಿ ಜವಾಬ್ದಾರಿ

- ವ್ಯವಸ್ಥಾಪನಾ ಸಮಿತಿಯಿಂದ ಊರೂಸ್ ಹಾಗೂ ಪೂಜಾ ಪುನಸ್ಕಾರಗಳ ಮೇಲ್ವಿಚಾರಣೆ

- ಪೂಜೆ ಮಾಡಲು ಅರ್ಚಕರು ಹಾಗೂ ಮುಜಾವರರಿಗೆ ಅವಕಾಶ

ಇದನ್ನೂ ಓದಿ: ಬಿಎಂಟಿಸಿಗೆ ಶೀಘ್ರದಲ್ಲೇ ವಿದ್ಯುತ್ ಚಾಲಿತ ಬಸ್: ಸಿಎಂ ಬೊಮ್ಮಾಯಿ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.