ETV Bharat / state

ಬೆಂಬಲ ಬೆಲೆಯೊಂದಿಗೆ ವರ್ಷವಿಡೀ ಕೊಬ್ಬರಿ ಖರೀದಿಗೆ ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಸಂಪುಟ ಉಪಸಮಿತಿ ತೀರ್ಮಾನ - ಹಲವು ಬೆಳೆಗಳ ಬೆಲೆ ಸ್ಥಿರೀಕರಣ

ವಿಧಾನಸೌಧದ ಸಮಿತಿ ಕೊಠಡಿಯಲ್ಲಿಂದು ಕೃಷಿ ಸಚಿವ ಎನ್​. ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಿತು. ಹಲವು ಬೆಳೆಗಳ ಬೆಲೆ ಸ್ಥಿರೀಕರಣ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.

ಕೃಷಿ ಸಚಿವ ಎನ್​ ಚಲುವರಾಯಸ್ವಾಮಿ
ಕೃಷಿ ಸಚಿವ ಎನ್​ ಚಲುವರಾಯಸ್ವಾಮಿ
author img

By ETV Bharat Karnataka Team

Published : Aug 31, 2023, 10:12 PM IST

ಬೆಂಗಳೂರು : ಕೊಬ್ಬರಿ ಸರ್ವಋತು ಬೆಳೆಯಾಗಿರುವುದರಿಂದ ವರ್ಷಪೂರ್ತಿ ಬೆಂಬಲ‌ ಬೆಲೆ ನೀಡಿ ಖರೀದಿಸಲು‌ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಬೆಲೆ ಸ್ಥಿರೀಕರಣ ಸಚಿವ ಸಂಪುಟ ಉಪ ಸಮಿತಿ ತೀರ್ಮಾನಿಸಿದೆ.

ಕಾನೂನು ‌ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್.ಮುನಿಯಪ್ಪ, ಸಹಕಾರ ಸಚಿವ ಕೆ.ಎನ್.ರಾಜಣ್ಣ, ಸಕ್ಕರೆ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಚಿವ ಶಿವಾನಂದ ಪಾಟೀಲ್ ಅವರನ್ನೊಳಗೊಂಡ ಸಚಿವ ಸಂಪುಟ ಉಪ ಸಮಿತಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಂಡಿದೆ.

ನಿಗದಿತ 54,750 ಮೆಟ್ರಿಕ್ ಟನ್ ಕೊಬ್ಬರಿ ಖರೀದಿ ಸಂಪೂರ್ಣ ಗುರಿ ಸಾಧಿಸಬೇಕು. ತೆಂಗನ್ನೂ ಬೆಂಬಲ ಬೆಲೆಯೊಂದಿಗೆ ಖರೀದಿಸಬೇಕೆಂದು ಕೇಂದ್ರಕ್ಕೆ ಮನವಿ ಸಲ್ಲಿಸಲು ತೀರ್ಮಾನಿಸಲಾಯಿತು. ಕೇರಳ ಮಾದರಿಯಲ್ಲಿ ರಾಜ್ಯದಲ್ಲಿಯೂ ಕೊಬ್ಬರಿ ಉತ್ಪನ್ನಗಳ ಮೌಲ್ಯವರ್ಧನೆಗೆ ಗಮನ ಹರಿಸಬೇಕು ಎಂದೂ ಸಮಿತಿ ಸಲಹೆ ನೀಡಿತು. ಕೃಷಿ ಆವರ್ತ ನಿಧಿಗೆ ಖಾಯಂ ಅನುದಾನ ಒದಗಿಸಬೇಕು. ಅದರ ಒಟ್ಟು ಪ್ರಮಾಣ ಏರಿಕೆಯಾಗುತ್ತಾ ಹೋಗಬೇಕು ಎಂದು ಸಮಿತಿ ಸದಸ್ಯರು ಒಮ್ಮತದ ಅಭಿಪ್ರಾಯ ವ್ಯಕ್ತಪಡಿಸಿದರು.

ಮಧ್ಯವರ್ತಿಗಳಿಗೆ ಲಾಭ ಮಾಡದೆ ರೈತರಿಗೆ ಅನುಕೂಲವಾಗುವಂತೆ ಸಕಾಲದಲ್ಲಿ ಮಾರುಕಟ್ಟೆ ಮಧ್ಯಪ್ರವೇಶ ಮಾಡಬೇಕು ಹಾಗೂ ಖರೀದಿಸಿದ ಉತ್ಪನ್ನಗಳಿಗೆ ತಕ್ಷಣ ಹಣ ನೀಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಚಾಮರಾಜನಗರ ರೈತರಿಂದ ಅರಿಶಿಣ ಖರೀದಿಸಿ ಹಣ ನೀಡಿಕೆ ವಿಳಂಬ ಮಾಡಿದ್ದ ಪ್ರಕರಣಗಳಲ್ಲಿ 53 ರೈತರಿಗೆ ಬಡ್ಡಿ ಸೇರಿಸಿ ನೀಡುವಂತೆ ಸಮಿತಿ ಸೂಚನೆ ನೀಡಿತು.

ಮುಂಬರುವ ಜನವರಿಯಿಂದ ಬೆಂಬಲ ಬೆಲೆಯೊಂದಿಗೆ ಭತ್ತ, ರಾಗಿ, ಜೋಳ ಖರೀದಿಸಬೇಕು. ಈ ಹಿಂದೆ ಆದಂತೆ ಯಾವುದೇ ಲೋಪಗಳಾಗದೆ ರೈತರಿಗೆ ಅನುಕೂಲ ಮಾಡಿ, ನಿಯಮಾನುಸಾರ ಖರೀದಿಸಬೇಕು ಎಂದು ಸಚಿವ ಸಂಪುಟ ಉಪ ಸಮಿತಿ ತಿಳಿಸಿದೆ.

ಈರುಳ್ಳಿ ರಫ್ತಿನ ಮೇಲೆ ಅಧಿಕ ತೆರಿಗೆ ವಿಧಿಸಿರುವುದರಿಂದ ರೈತರಿಗೆ ಉತ್ತಮ ದರ ಪಡೆಯುವ ಅವಕಾಶ ತಪ್ಪಿದೆ. ಈ ಬಗ್ಗೆ ಕೇಂದ್ರ ಕ್ರಮ ವಹಿಸಬೇಕು ಎಂದು ಒತ್ತಾಯಿಸಲು ಸಮಿತಿ ನಿರ್ಣಯಿಸಿತು. ಆವರ್ತ ನಿಧಿ ಬಳಸಿ ಬೇರೆ ಬೇರೆ ಇಲಾಖೆಗಳು ಖರೀದಿ ಮಾಡಿದ್ದು, ಅದನ್ನು ಆದಷ್ಟು ಬೇಗ ಮರುಪಾವತಿ ಮಾಡಬೇಕು. ಇದಕ್ಕೆ ಹಣಕಾಸು ಇಲಾಖೆ ಮಧ್ಯಪ್ರವೇಶ ಮಾಡಿ ನೆರವಾಗಬೇಕು. ಇನ್ನು ಮುಂದೆ ಆವರ್ತ ನಿಧಿ ಬಳಸಿದರೆ ಅದಕ್ಕೆ ಸೂಕ್ತ ಬಡ್ಡಿ ಪಾವತಿ ಮಾಡಿ ಹಿಂದಿರಿಗಿಸಬೇಕು ಎಂದು ಸಂಬಂದಪಟ್ಟ ಏಜೆನ್ಸಿಗಳು, ಇಲಾಖೆಗಳಿಗೆ ಸೂಚನೆ ನೀಡಲು ಉಪ ಸಮಿತಿ ತೀರ್ಮಾನಿಸಿತು. ಪಡಿತರ ಆಹಾರ ಸಾಮಗ್ರಿ ಖರೀದಿ ಪ್ರಕ್ರಿಯೆಯಲ್ಲಿ ಕೇಂದ್ರದ ಸಂಸ್ಥೆಗಳ ಜೊತೆಗೆ ರಾಜ್ಯದ ಸಂಸ್ಥೆಗಳಿಗೂ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸಲು ಸಮಿತಿ ಸಲಹೆ ನೀಡಿತು.

ಇದನ್ನೂ ಓದಿ: ಬೆಂಬಲ ಬೆಲೆಯಡಿ ಕೊಬ್ಬರಿ ಖರೀದಿ ಪ್ರಕ್ರಿಯೆ.. ರೈತರನ್ನು ಇಕ್ಕಟ್ಟಿಗೆ ಸಿಲುಕಿಸಿದ ನೆಫೆಡ್ ನಿಯಮಾವಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.