ಬೆಂಗಳೂರು : ಪೆಟ್ರೋಲ್, ಡೀಸೆಲ್ ಏರಿಕೆಗೆ ತತ್ತರಿಸಿರುವ ಲಾರಿ ಮಾಲೀಕರು ಹಲವು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಇಂದು ದೇಶವ್ಯಾಪಿ ರಾಷ್ಟ್ರೀಯ ಟ್ರೇಡರ್ಸ್ ಯೂನಿಯನ್ ವತಿಯಿಂದ ಲಾರಿ ಮುಷ್ಕರಕ್ಕೆ ಕರೆ ನೀಡಲಾಗಿದೆ.
ರಾಜ್ಯದಲ್ಲಿ ಲಾರಿ ಮುಷ್ಕರಕ್ಕೆ ಬೆಂಬಲ ನೀಡಲಾಗಿದೆ. ಇಂದು ರಾಜ್ಯದಲ್ಲಿ ಲಾರಿಗಳನ್ನ ರೋಡಿಗೆ ಇಳಿಸದಿರಲು ಲಾರಿ ಮಾಲೀಕರು ನಿರ್ಧರಿಸಿದ್ದಾರೆ. ಕೇಂದ್ರ ಸರ್ಕಾರದ ಜಿಎಸ್ಟಿ ವೇ ಬಿಲ್, ಪೆಟ್ರೋಲ್, ಡೀಸೆಲ್ ಏರಿಕೆ ತಡೆ ಸೇರಿ ಹಲವು ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿದ್ದಾರೆ.
ಮುಷ್ಕರದ ಹಿನ್ನೆಲೆ ರಾಜ್ಯದ ಲಾರಿಗಳು ಸ್ತಬ್ಧವಾಗಲಿವೆ. ತಮ್ಮ ವಹಿವಾಟು ಸ್ಥಗಿತಗೊಳಿಸಿ ಬಂದ್ ಮಾಡಲು ಲಾರಿ ಮಾಲೀಕರು ನಿರ್ಧರಿಸಿದ್ದಾರೆ. ಸರ್ಕಾರ ತಮ್ಮ ಬೇಡಿಕೆಗಳನ್ನ ಈಡೇರಿಸದಿದ್ರೆ ಅನಿರ್ದಿಷ್ಟವಾಧಿ ಮುಷ್ಕರಕ್ಕೆ ಕರೆ ನೀಡಲು ಚಿಂತನೆ ನಡೆಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಲಾರಿ ಸಂಚಾರ ಸ್ಥಗಿತಗೊಳಿಸಿ ಟ್ರೇಡರ್ಸ್ಗೆ ಬೆಂಬಲ ನೀಡಲಾಗುತ್ತೆ. ಇನ್ನು, ಲಾರಿ ಸಂಚಾರ ಸ್ಥಗಿತದಿಂದ ಅಗತ್ಯ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.