ETV Bharat / state

High Court news: ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಕುಟುಂಬಸ್ಥರ ಆಸ್ತಿ ವಿವರ ಸಲ್ಲಿಸದಿರುವುದು ಭ್ರಷ್ಟಾಚಾರಕ್ಕೆ ಸಮ - ಈಟಿವಿ ಭಾರತ್ ಕನ್ನಡ ಸುದ್ದಿ

High Court news: ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ ಕುಟುಂಬಸ್ಥರ ಆಸ್ತಿ ವಿವರ ಸಲ್ಲಿಸದಿರುವುದು ಭ್ರಷ್ಟಾಚಾರಕ್ಕೆ ಸಮಾನವಾಗಲಿದೆ ಎಂದು ಹೈಕೋರ್ಟ್​ ಅಭಿಪ್ರಾಯಪಟ್ಟಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Aug 10, 2023, 10:56 PM IST

ಬೆಂಗಳೂರು : ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ತಮ್ಮ, ತಮ್ಮ ಕುಟುಂಬ ಮತ್ತು ಅವಲಂಬಿತರ ಆಸ್ತಿ ವಿವರಗಳನ್ನು ಮರೆಮಾಚಿದರೆ ಅದೂ ಕೂಡ ಭ್ರಷ್ಟಾಚಾರ ಸಮವಾಗಲಿದ್ದು, ಅನರ್ಹತೆಗೂ ಕಾರಣವಾಗಲಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಗ್ರಾಮ ಪಂಚಾಯ್ತಿ ಸದಸ್ಯರು ಅನರ್ಹತೆಗೆ ಸಂಬಂಧಿಸಿದ ಅರ್ಜಿಯೊಂದರ ವಿಚಾರಣೆ ವೇಳೆ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಕಲಬುರಗಿ ಪೀಠದಲ್ಲಿ ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ಅಲ್ಲದೆ, ಅರ್ಜಿದಾರರು ಆಸ್ತಿ ವಿವರ ಸಲ್ಲಿಸದೇ ಇರುವುದು ಅವರಿಗೆ ಚುನಾವಣೆಯಲ್ಲಿ ಪೂರಕ ಪರಿಣಾಮ ಬೀರಿದೆಯೇ ಎಂಬುದನ್ನು ಹೇಳಲಾಗದು. ಆದರೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯಿದೆ 1993ರ ಅನ್ವಯ ಅಭ್ಯರ್ಥಿ ಆಸ್ತಿ ವಿವರ ಸಲ್ಲಿಸದೇ ಇರುವುದು ಸೆಕ್ಷನ್ 9(1)(ಬಿ) ಪ್ರಕಾರ ಅನರ್ಹತೆಗೆ ದಾರಿ ಮಾಡಿಕೊಡಲಿದೆ ಎಂಬುದಾಗಿ ಪೀಠ ತಿಳಿಸಿದೆ.

ಇದನ್ನೂ ಓದಿ: ಟ್ವಿಟ್ಟರ್​ಗೆ ದಂಡ ವಿಧಿಸಿದ್ದ ಏಕ ಸದಸ್ಯ ಪೀಠದ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠದಿಂದ ತಡೆ

ಪ್ರಸ್ತುತದ ಪ್ರಕರಣದಲ್ಲಿ ಮೂಲ ಅರ್ಜಿದಾರರು ಗೆದ್ದ ಅಭ್ಯರ್ಥಿಯ ಆಯ್ಕೆಯನ್ನು ಅಸಿಂಧುಗೊಳಿಸುವುದು ಮಾತ್ರವಲ್ಲದೆ, ತಮ್ಮನ್ನು ವಿಜಯಿ ಎಂದು ಘೋಷಿಸುವಂತೆ ಕೋರಿದ್ದಾರೆ. ಹಾಗಾಗಿ ಎಲ್ಲ ಸ್ಪರ್ಧಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಬೇಕಿತ್ತು. ಅವರ ಉಪಸ್ಥಿತಿಯಲ್ಲಿಯೇ ಯಾರು ವಿಜಯಿ ಎಂದು ಘೋಷಿಸಬೇಕಾಗುತ್ತಿದೆ. ಇಬ್ಬರೇ ಅಭ್ಯರ್ಥಿಗಳಿದ್ದಾಗ ಒಬ್ಬ ಅಭ್ಯರ್ಥಿ ಅನರ್ಹ ಎಂದು ಘೋಷಿಸಿದರೆ, ಸಹಜವಾಗಿಯೇ ಮತ್ತೊಬ್ಬರು ಅರ್ಹರು ಅಥವಾ ವಿಜಯಿಯಾಗುತ್ತಾರೆ. ಆದರೆ, ಈ ಪ್ರಕರಣದಲ್ಲಿ ಇತರೆ ಸ್ಪರ್ಧಿಗಳಿದ್ದ ಕಾರಣ, ಯಾರು ವಿಜಯಿ ಎಂದು ನಿರ್ಣಯಿಸುವುದು ಕಷ್ಟಕರ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ: ಬೆಂಗಳೂರಿನ ಶೌಚಾಲಯಗಳ ನಿರ್ವಹಣೆ ಕುರಿತು ಸರ್ಕಾರದ ಮೌನ : ಹೈಕೋರ್ಟ್​​ ತರಾಟೆ

ಪ್ರಕರಣದ ಹಿನ್ನೆಲೆ: ಅಬೀದಾ ಬೇಗಂ ಅವರು ಚುನಾವಣೆ ನಂತರ ತಮ್ಮ ಹಾಗೂ ಅವರ ಪತಿಯ ಆಸ್ತಿ ವಿವರವನ್ನು ಸಲ್ಲಿಸಿಲ್ಲ. ಹಾಗಾಗಿ ಅವರನ್ನು ಅನರ್ಹಗೊಳಿಸಬೇಕು ಎಂದು ಮೊಹಮ್ಮದ್ ಇಸ್ಮಾಯಿಲ್ ನ್ಯಾಯಾಲಯದಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅಲ್ಲದೆ, ಬೇಗಂ ಆಯ್ಕೆ ಅಸಿಂಧುಗೊಳಿಸಿ ತಮ್ಮನ್ನು ಆಯ್ಕೆಯಾಗಿದ್ದೇವೆಂದು ಘೋಷಿಸುವಂತೆ ಕೋರಿದ್ದರು. ಅದರಂತೆ ಶಹಾಪೂರ ಜೆಎಫ್‌ಎಂಸಿ ನ್ಯಾಯಾಲಯ 2022ರ ಅ. 31ರಂದು ಅಬಿದಾ ಬೇಗಂ ಆಯ್ಕೆ ರದ್ದುಗೊಳಿಸಿದ್ದರು.

ಇದನ್ನೂ ಓದಿ: ಬೆಂಗಳೂರು-ಕನಕಪುರ ರಸ್ತೆ ಸುರಕ್ಷತೆ ಕಲ್ಪಿಸದ NHAI ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ

ಇದನ್ನು ಪ್ರಶ್ನಿಸಿದ್ದ ಬೇಗಂ, ಇಸ್ಮಾಯಿಲ್ ತಮ್ಮ ಅರ್ಜಿಯಲ್ಲಿ ಎಲ್ಲ ಸ್ಪರ್ಧಿಗಳನ್ನು ಪ್ರತಿವಾದಿಗಳನ್ನಾಗಿ ಮಾಡಿರಲಿಲ್ಲ. ಇದು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯಿದೆ ಸೆಕ್ಷನ್ 15 (2)(ಎ)ಗೆ ವಿರುದ್ಧವಾಗಿದೆ. ಆಸ್ತಿ ವಿವರ ಸಲ್ಲಿಸದೇ ಇರುವುದು ಭ್ರಷ್ಟಾಚಾರವಾಗುವುದಿಲ್ಲ ಮತ್ತು ಅದೇ ಕಾರಣಕ್ಕೆ ಅನರ್ಹಗೊಳಿಸಲಾಗದು ಎಂದು ವಾದಿಸಿದ್ದರು.

ಇದನ್ನೂ ಓದಿ: ವಿಪಕ್ಷ ನಾಯಕರಿಲ್ಲದ ಪರಿಣಾಮ ಪಿಸಿಎ ಸದಸ್ಯರ ನೇಮಕ್ಕೆ ವಿಳಂಬ: ರಾಜ್ಯ ಸರ್ಕಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.