ಬೆಂಗಳೂರು: ಬಿಬಿಎಂಪಿ ಜಂಟಿ ಆಯುಕ್ತ ನಾಗರಾಜ್ ಅವರ ಕಾರಿನ ಚಾಲಕ ಮದ್ಯದ ನಶೆಯಲ್ಲಿ ನಿಯಂತ್ರಣ ತಪ್ಪಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿಯಾಗಿಲ್ಲ.
ಚಾಲಕ ಶಿವಕುಮಾರ್ ಎಂಬಾತ ಕೆಲಸ ಮುಗಿಸಿಕೊಂಡು ಮದ್ಯ ಸೇವಿಸಿ ಆರ್.ಆರ್. ನಗರದಲ್ಲಿರುವ ತಮ್ಮ ಮನೆಗೆ ಹಿಂತಿರುಗಿದ್ದ ವೇಳೆ ನಿಯಂತ್ರಣ ತಪ್ಪಿ ಎದುರು ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದ್ದಾರೆ. ಅಪಘಾತದಲ್ಲಿ ಕಾರಿನ ಮುಂಭಾಗ ಹಾನಿಯಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಬ್ಯಾಟರಾಯನಪುರ ಸಂಚಾರಿ ಪೊಲೀಸರು ಚಾಲಕ ಶಿವಕುಮಾರ್ ಹಾಗೂ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತಪಾಸಣೆ ವೇಳೆ ಚಾಲಕ ಮದ್ಯ ಸೇವನೆ ಮಾಡಿರುವುದು ಖಚಿತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ರಾಯಚೂರಿನಲ್ಲಿ ಗೂಡ್ಸ್ ವಾಹನ ಬೈಕ್ ಮಧ್ಯೆ ಭೀಕರ ಅಪಘಾತ.. ಮೂವರ ದುರ್ಮರಣ