ಬೆಂಗಳೂರು: ಅತಿ ವೇಗವಾಗಿ ಬಂದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್ಗೆ ಡಿಕ್ಕಿಯಾಗಿರುವ ಘಟನೆ ನಗರದ ರಾಜಭವನ ರಸ್ತೆಯಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಸಂಭವಿಸಿದೆ. ಚಾಲಕನ ಅಜಾಗರೂಕತೆಯಿಂದ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.
ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಆಕಾಶವಾಣಿ ಕಚೇರಿಯ ಕಾಂಪೌಂಡ್ಗೆ ಡಿಕ್ಕಿಯಾಗಿದೆ. ಪರಿಣಾಮ ಕಲ್ಲಿನ ಕಾಂಪೌಂಡ್ ಜಖಂಗೊಂಡಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಚಾಲಕ ಪಾರಾಗಿದ್ದಾನೆ. ಹೈಗ್ರೌಂಡ್ಸ್ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ: ನೂರಾರು ಅಡಕೆ ಸಸಿ ಕಡಿದುಹಾಕಿ ಕಿಡಿಗೇಡಿಗಳ ವಿಕೃತಿ