ETV Bharat / state

ನಿಯಂತ್ರಣ ತಪ್ಪಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು, ಮೂವರಿಗೆ ಗಾಯ - car collide to a pedestrians at kattariguppe

ನಿಯಂತ್ರಣ ತಪ್ಪಿದ ಕಾರೊಂದು ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಘಟನೆ ಕತ್ತರಿಗುಪ್ಪೆಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಈ ಅಪಘಾತದಲ್ಲಿ ಒಬ್ಬ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಸಹಾಯಕ‌ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದ ಕಾರು ಚಾಲಕ ಮುಕೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ.

Car collide to a pedestrians fastly
ನಿಯಂತ್ರಣ ತಪ್ಪಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಕಾರು
author img

By

Published : May 20, 2022, 3:45 PM IST

ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಪಾದಚಾರಿಗಳಿಗೆ ಡಿಕ್ಕಿ ಹೊಡೆದ‌‌ ಪರಿಣಾಮ‌ ಒಬ್ಬ ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಬನಶಂಕರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಂದು ಬೆಳಗ್ಗೆ 7 ಗಂಟೆ ವೇಳೆ ಕತ್ತರಿಗುಪ್ಪೆ ಬಳಿ ಈ‌ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಸುರೇಶ್ ಸಾವಿಗೀಡಾದರೆ, ಸಚಿನ್, ಶಿವರಾಜ್ ಹಾಗೂ ಶೈಲೇಂದ್ರ ಎಂಬುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ನಿಯಂತ್ರಣ ತಪ್ಪಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಕಾರು

ಘಟನೆಗೆ ಕಾರಣರಾದ ಮುಕೇಶ್ ಎಂಬಾತನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ. ಧಾರಾವಾಹಿಯೊಂದರ ಸಹಾಯಕ‌ ನಿರ್ದೇಶಕನಾಗಿ ಕೆಲಸ ಮಾಡುತ್ತಿದ್ದ ಮುಕೇಶ್ ಇಂದು‌‌‌ ಶೂಟಿಂಗ್ ಮುಗಿಸಿಕೊಂಡು ಕತ್ತರಿಗುಪ್ಪೆ‌ ಜಂಕ್ಷನ್ ನಿಂದ ಇಟ್ಟಮಡು ಜಂಕ್ಷನ್​ ಕಡೆ ಕಾರಿನಲ್ಲಿ ವೇಗವಾಗಿ ಬಂದಿದ್ದಾರೆ. ಜೊತೆಗೆ ಪಾರ್ಕ್ ಮಾಡಲಾಗಿದ್ದ ಕಾರಿಗೆ ಗುದ್ದಿದ್ದರಿಂದ ಎರಡು ಕಾರುಗಳು ಜಖಂಗೊಂಡಿವೆ. ಗಾಯಗೊಂಡಿದ್ದ ನಾಲ್ವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಈ ಪೈಕಿ ಸುರೇಶ್ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಭೀಕರ ಅಪಘಾತ: ಡೀಸೆಲ್ ಟ್ಯಾಂಕರ್, ಟ್ರಕ್ ​ನಡುವೆ ಡಿಕ್ಕಿಯಾಗಿ 9 ಜನರ ಸಜೀವ ದಹನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.