ETV Bharat / state

ಸರ್ಕಾರದ ಆದೇಶ ಉಲ್ಲಂಘಿಸಿ ಪ್ರತಿಭಟನೆ : ವಾಟಾಳ್ ನಾಗರಾಜ್ ವಿರುದ್ಧ ಪ್ರಕರಣ ದಾಖಲು

ನಿಗದಿತ ಸ್ಥಳ ಹೊರತುಪಡಿಸಿ ಬೇರೆಡೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ..

Case filed against Vatal nagaraj for protest
ವಾಟಾಳ್ ನಾಗರಾಜ್ ವಿರುದ್ಧ ಪ್ರಕರಣ ದಾಖಲು
author img

By

Published : Mar 23, 2022, 12:03 PM IST

ಬೆಂಗಳೂರು : ನಗರದಲ್ಲಿ ದೈನಂದಿನ ಚಟುವಟಿಕೆಗಳಿಗೆ ಅಡಚಣೆಯಾಗದಂತೆ ಪ್ರತಿಭಟನೆಗೆ ಸ್ಥಳ ನಿಗದಿಪಡಿಸಿ ಸರ್ಕಾರದ ಆದೇಶವಿದ್ದರೂ ಸಹ ಬೇರೆಡೆ ಪ್ರತಿಭಟನೆ ನಡೆಸಿದ ಕಾರಣ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್‌ರ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರತಿಭಟನೆ ನಡೆಸುವ ಬಗ್ಗೆ ಈ ಹಿಂದೆಯೇ ಹೈಕೋರ್ಟ್​ ನಿರ್ದೇಶನ ನೀಡಿತ್ತು.

ಕರ್ನಾಟಕ ಉನ್ನತ ನ್ಯಾಯಾಲಯದ ನಿರ್ದೇಶನದಂತೆ ನಗರದಲ್ಲಿ ಪ್ರತಿಭಟನೆಗೆ ಫ್ರೀಡಂ ಪಾರ್ಕ್​ನಲ್ಲಿ ಸ್ಥಳ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಆದರೆ, ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಿಸುವಂತೆ ಒತ್ತಾಯಿಸಿ ಮಾರ್ಚ್ 18ರಂದು ಮೈಸೂರು ಬ್ಯಾಂಕ್ ಸರ್ಕಲ್​ನಲ್ಲಿ ವಾಟಾಳ್ ನಾಗರಾಜ್ ಏಕಾಂಗಿ ಪ್ರತಿಭಟನೆ ನಡೆಸಿದ್ದರು.

ಹೀಗಾಗಿ, ನಿಗದಿತ ಸ್ಥಳ ಹೊರತುಪಡಿಸಿ ಬೇರೆಡೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ವಾಟಾಳ್ ನಾಗರಾಜ್ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮೂವರು ಹೆಂಡ್ತಿಯರ ಗಂಡನ ಕೊಲೆ ಪ್ರಕರಣ: ಪತಿಯ ಹತ್ಯೆಗೆ 10 ಲಕ್ಷ ಸುಪಾರಿ ಕೊಟ್ಟಿದ್ದು ಎರಡನೇ ಪತ್ನಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.