ETV Bharat / state

ಅಮಲಿನಲ್ಲಿ ದುರ್ವರ್ತನೆ ಆರೋಪ: ಮತ್ತೆ ಸುದ್ದಿಯಾದ ಫ್ಯಾಷನ್ ಡಿಸೈನರ್ ಪುತ್ರ.. ಜಾಮೀನಿನ ಮೇಲೆ ಬಿಡುಗಡೆ

author img

By ETV Bharat Karnataka Team

Published : Oct 27, 2023, 12:16 PM IST

Updated : Oct 27, 2023, 1:24 PM IST

ಮದ್ಯದ ಅಮಲಿನಲ್ಲಿ ದುರ್ವರ್ತನೆ ಪ್ರದರ್ಶಿಸಿದ ಆರೋಪದಡಿ ಪ್ರಮುಖ ಫ್ಯಾಷನ್​ ಡಿಸೈನರ್​ರೊಬ್ಬರ ಪುತ್ರ​​ ಆ್ಯಡಂ ಬಿದ್ದಪ್ಪ ವಿರುದ್ಧ ಪ್ರಕರಣ ದಾಖಲಾಗಿದೆ.

Etv Bharatallegation-on-fashion-designer-prasad-bidapa-son-for-misbehavior
ಮದ್ಯದ ಅಮಲಿನಲ್ಲಿ ಪುಂಡಾಟಿಕೆ ಆರೋಪ: ಮತ್ತೆ ಸುದ್ದಿಯಾದ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರ ಆ್ಯಡಂ

ಬೆಂಗಳೂರು: ಮದ್ಯದ ಅಮಲಿನಲ್ಲಿ ದುರ್ವರ್ತನೆ ಪ್ರದರ್ಶಿಸಿ ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ ಆರೋಪದಡಿ ಫ್ಯಾಷನ್ ಡಿಸೈನರ್ ಪ್ರಸಾದ್ ಬಿದ್ದಪ್ಪ ಪುತ್ರ ಆ್ಯಡಂ ಬಿದ್ದಪ್ಪ ವಿರುದ್ಧ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಕ್ಟೋಬರ್ 25ರಂದು ರಾತ್ರಿ ಅಪಾಯಕಾರಿಯಾಗಿ ಕಾರು ಚಲಾಯಿಸಿಕೊಂಡು ಬಂದು ರಾಹುಲ್ ಎಂಬಾತನನ್ನು ಅಡ್ಡಗಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುವ ಆರೋಪದ ಕುರಿತು ಪ್ರಕರಣ ದಾಖಲಾಗಿದೆ. ಅಕ್ಟೋಬರ್ 25ರಂದು ಯಲಹಂಕದ ರೈಲ್ ವೀಲ್ ಫ್ಯಾಕ್ಟರಿ ಬಳಿ ಈ ಘಟನೆ ನಡೆದಿತ್ತು.

ಪೊಲೀಸರಿಗೆ ಕೊಟ್ಟ ದೂರಿನಲ್ಲಿರೋದು ಹೀಗೆ: ’’ಮದ್ಯದ ಅಮಲಿನಲ್ಲಿ ಅಪಾಯಕಾರಿಯಾಗಿ ಕಾರು ಚಾಲನೆ ಮಾಡುತ್ತಿದ್ದ ಆ್ಯಡಂ ಕಂಡು ಹಿಂದಿನಿಂದ ನನ್ನ ಕಾರಿನಲ್ಲಿ ಬರುತ್ತಿದ್ದ ನಾನು ಹಾರ್ನ್ ಮಾಡಿ ಮುಂದೆ ತೆರಳಿದ್ದೆ. ಅಷ್ಟಕ್ಕೇ ನನ್ನ ಕಾರು ಓವರ್ ಟೇಕ್ ಮಾಡಿಕೊಂಡು ಬಂದ ಆ್ಯಡಂ, ಯಲಹಂಕದ ರೈಲ್ವೆ ವೀಲ್ ಫ್ಯಾಕ್ಟರಿ ಬಳಿ ಅಡ್ಡಗಟ್ಟಿ ಗಲಾಟೆ ಮಾಡಿದ್ದರು. ಆಗ ನಾನು ಪೊಲೀಸ್ ಸಹಾಯವಾಣಿಗೆ ಕರೆ ಮಾಡಿದೆ. ಸ್ಥಳಕ್ಕೆ ಬಂದ ಪೊಲೀಸರೊಂದಿಗೂ ಸಹ ಆ್ಯಡಂ ಬಿದ್ದಪ್ಪ ವಾಗ್ವಾದ ನಡೆಸಿದ್ದರು. ಜೊತೆಗೆ ನನಗೆ ಪ್ರಭಾವಿ ವ್ಯಕ್ತಿಗಳು ಗೊತ್ತು ಎಂದು ಆ್ಯಡಂ ಜೀವ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ರಾಹುಲ್ ಆರೋಪಿಸಿದ್ದಾರೆ. ರಾಹುಲ್​ ಸಹಾಯವಾಣಿಗೆ ಕರೆ ಮಾಡಿದ ಆಧಾರದ ಮೇಲೆ ಸ್ಥಳಕ್ಕೆ ಬಂದ ಯಲಹಂಕ ಸಂಚಾರಿ ಪೊಲೀಸರು ಆ್ಯಡಂನ ಕಾರು ವಶಕ್ಕೆ ಪಡೆದಿದ್ದಾರೆ.

ಠಾಣಾ ಜಾಮೀನಿನ ಮೇಲೆ ಆ್ಯಡಂ ಬಿಡುಗಡೆ: ಮತ್ತೊಂದು ಕಡೆ ಯಲಹಂಕ ನ್ಯೂಟೌನ್ ಪೊಲೀಸರು, ರಾಹುಲ್ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಳಿಕ ಠಾಣಾ ಜಾಮೀನಿನ ಆಧಾರದಲ್ಲಿ ಆ್ಯಡಂ ಬಿದ್ದಪ್ಪನನ್ನ ಬಿಡುಗಡೆಗೊಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮೊದಲ ಪತ್ನಿಗೆ ವಿಚ್ಛೇದನ ನೀಡುವಂತೆ ಒತ್ತಾಯಿಸಿದ 2ನೇ ಪತ್ನಿಯ ಕೊಂದ ಚಾರ್ಟರ್ಡ್ ಅಕೌಂಟೆಂಟ್‌ ಗಂಡ!

ಇಂತಹದ್ದೇ ಪ್ರಕರಣವೊಂದರಲ್ಲಿ ಜೈಲರ್ ಖಳನಾಯಕನ​​ ಬಂಧನ: ಇತ್ತೀಚಿಗೆ, ಜೈಲರ್​ ಚಿತ್ರದಲ್ಲಿ ವಿಲನ್​ ಪಾತ್ರದಲ್ಲಿ ನಟಿಸಿ ಖ್ಯಾತಿ ಪಡೆದಿದ್ದ ವಿನಾಯಕನ್​ ಅವರನ್ನು ಪೊಲೀಸರು ಬಂಧಿಸಿದ್ದರು. ಆ ಬಳಿಕ ಅವರನ್ನು ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಮದ್ಯದ ಅಮಲಿನಲ್ಲಿ ಪೊಲೀಸ್​ ಠಾಣೆಯಲ್ಲಿ ಗಲಾಟೆ ಸೃಷ್ಟಿಸಿದ್ದ ಆರೋಪದಡಿ ​ಅವರನ್ನು ಬಂಧಿಸಲಾಗಿತ್ತು ಎಂದು ಕೇರಳದ ಪೊಲೀಸ್​ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದರು. ವಿನಾಯಕನ್ ವಾಸವಿದ್ದ ಅಪಾರ್ಟ್‌ಮೆಂಟ್ ನಿವಾಸಿಗಳು ತಮಗೆ ತೊಂದರೆ ನೀಡುತ್ತಿದ್ದಾರೆ ಎಂದು ನೀಡಿದ ದೂರಿನ ಮೇರೆಗೆ ಎರ್ನಾಕುಲಂ ಟೌನ್ ನಾರ್ತ್ ಪೊಲೀಸ್ ಠಾಣೆಗೆ ಅವರನ್ನು ಕರೆಸಲಾಗಿತ್ತು. ಈ ವೇಳೆ ಮದ್ಯದ ಅಮಲಿನಲ್ಲಿದ್ದ ವಿನಾಯಕನ್​ ತಾಳ್ಮೆ ಕಳೆದುಕೊಂಡು ಪೊಲೀಸ್​ ಠಾಣೆಯಲ್ಲಿ ಗಲಾಟೆ ಸೃಷ್ಟಿಸಿದ್ದಕ್ಕಾಗಿ ಪೊಲೀಸ್​ ಅಧಿಕಾರಿಗಳು ನಟನನ್ನು ಬಂಧಿಸಿದ್ದರು.

Last Updated : Oct 27, 2023, 1:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.