ETV Bharat / state

ಡಿನೋಟಿಫಿಕೇಶನ್ ಪ್ರಕರಣ.. ಸಿಎಂ ಬಿಎಸ್​​ವೈ, ಕಟ್ಟಾ ಸುಬ್ರಹ್ಮಣ್ಯ ನಾಯ್ಡುಗೆ ಸಂಕಷ್ಟ

ಕೆಲ ವರ್ಷಗಳ ಕಾಲ ಪ್ರಕರಣದ ವಿಚಾರಣೆ ನಡೆಸಿದ್ದ ಲೋಕಾಯುಕ್ತ ನ್ಯಾಯಾಲಯ 2016ರ ಜುಲೈ 25ರಂದು ಆರೋಪಿಗಳ ವಿರುದ್ಧ ಕಾಗ್ನಿಸೆನ್ಸ್ ತೆಗೆದುಕೊಳ್ಳಲು ನಿರಾಕರಿಸಿ, ಚಾರ್ಚ್‌ಶೀಟ್ ರದ್ದುಪಡಿಸಿ ಆದೇಶಿಸಿತ್ತು..

cm-bsy-and-katta-subramanya-naydu
ಸಿಎಂ ಬಿಎಸ್​​ವೈ, ಕಟ್ಟಾ ಸುಬ್ರಹ್ಮಣ್ಯಗೆ ಸಂಕಷ್ಟ
author img

By

Published : Mar 17, 2021, 7:30 PM IST

ಬೆಂಗಳೂರು : ನಗರದ ಹೂವಿನಾಯಕನಹಳ್ಳಿ ಡಿನೋಟಿಫಿಕೇಷನ್ ಪ್ರಕರಣದ ಆರೋಪಿಗಳ ವಿರುದ್ಧ ಸಲ್ಲಿಸಿರುವ ದೋಷಾರೋಪಪಟ್ಟಿ ಪ್ರಕಾರ ಮುಂದಿನ ಕಾನೂನು ಕ್ರಮ ಜರುಗಿಸುವಂತೆ ಹೈಕೋರ್ಟ್, ಲೋಕಾಯುಕ್ತ ಕೋರ್ಟ್​ಗೆ ಆದೇಶಿಸಿದೆ.

ಓದಿ: ವಿನಯ್ ಕುಲಕರ್ಣಿಗೆ ಜಾಮೀನು ನಿರಾಕರಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್

ಇದರಿಂದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡುಗೆ ಸಂಕಷ್ಟ ಎದುರಾಗಿದೆ. ಡಿನೋಟಿಫಿಕೇಷನ್ ಪ್ರಕರಣದಿಂದ ಬಿ ಎಸ್ ಯಡಿಯೂರಪ್ಪ ಹಾಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರನ್ನು ಕೈಬಿಟ್ಟು ಲೋಕಾಯುಕ್ತ ಕೋರ್ಟ್ ಹೊರಡಿಸಿದ್ದ ಆದೇಶ ರದ್ದುಕೋರಿ ಉದ್ಯಮಿ ಆಲಂ ಪಾಷಾ ಸಲ್ಲಿಸಿದ್ದ ಅರ್ಜಿಯನ್ನು ನ್ಯಾ. ಜಾನ್ ಮೈಕೆಲ್ ಕುನ್ಹಾ ಅವರಿದ್ದ ಪೀಠ ವಿಚಾರಣೆ ನಡೆಸಿತು.

ಸುದೀರ್ಘ ವಾದ-ಪ್ರತಿವಾದ ಆಲಿಸಿದ ಪೀಠ, ಈ ಹಿಂದೆ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ದೋಷಾರೋಪಪಟ್ಟಿ ಮೇರೆಗೆ ಮುಂದಿನ ಕಾನೂನು ಪ್ರಕ್ರಿಯೆಗಳನ್ನು ಮುಂದುವರೆಸುವಂತೆ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಆದೇಶಿಸಿ, ಅರ್ಜಿ ಇತ್ಯರ್ಥಪಡಿಸಿತು.

ಪ್ರಕರಣದ ಹಿನ್ನೆಲೆ : ನಗರದ ಹೂವಿನಾಯಕನಳ್ಳಿ ಗ್ರಾಮದಲ್ಲಿ ಕೈಗಾರಿಕಾ ಉದ್ದೇಶಗಳಿಗೆ ಕೆಐಎಡಿಬಿ ವಶಪಡಿಸಿಕೊಂಡಿದ್ದ 20 ಎಕರೆ ಭೂಮಿಯನ್ನು ಅಕ್ರಮವಾಗಿ ಡಿನೋಟಿಫೈ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಉದ್ಯಮಿ ಆಲಂಪಾಷಾ 2011ರ ಆಗಸ್ಟ್ 20ರಂದು ಲೋಕಾಯುಕ್ತ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ದೂರಿನ ವಿಚಾರಣೆ ನಡೆಸಿದ್ದ ನ್ಯಾಯಾಲಯ ತನಿಖೆ ಮಾಡಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಿತ್ತು.

ಎಫ್ಐಆರ್ ದಾಖಲಿಸಿಕೊಂಡು ತನಿಖೆ ನಡೆಸಿದ್ದ ಲೋಕಾಯುಕ್ತ ಪೊಲೀಸರು 2012ರ ಮೇ 21ರಂದು ಬಿಎಸ್​​ವೈ ಹಾಗೂ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ವಿರುದ್ಧ 77 ಪುಟಗಳ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಕೆಲ ವರ್ಷಗಳ ಕಾಲ ಪ್ರಕರಣದ ವಿಚಾರಣೆ ನಡೆಸಿದ್ದ ಲೋಕಾಯುಕ್ತ ನ್ಯಾಯಾಲಯ 2016ರ ಜುಲೈ 25ರಂದು ಆರೋಪಿಗಳ ವಿರುದ್ಧ ಕಾಗ್ನಿಸೆನ್ಸ್ ತೆಗೆದುಕೊಳ್ಳಲು ನಿರಾಕರಿಸಿ, ಚಾರ್ಚ್‌ಶೀಟ್ ರದ್ದುಪಡಿಸಿ ಆದೇಶಿಸಿತ್ತು.

ಈ ಹಿನ್ನೆಲೆ ದೂರುದಾರ ಆಲಂಪಾಷಾ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ದೋಷಾರೋಪಪಟ್ಟಿ ರದ್ದುಪಡಿಸಿದ ಲೋಕಾಯುಕ್ತ ನ್ಯಾಯಾಲಯದ ಆದೇಶ ರದ್ದುಗೊಳಿಸಬೇಕು. ದೋಷಾರೋಪಪಟ್ಟಿ ಪ್ರಕಾರ ಮುಂದಿನ ಪ್ರಕ್ರಿಯೆ ಕೈಗೊಳ್ಳಲು ಲೋಕಾಯುಕ್ತ ನ್ಯಾಯಾಲಯಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.