ಬೆಂಗಳೂರು: ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡುವಂತೆಯೂ ಸಿಎಂ ಸೂಚನೆ ಕೊಟ್ಟಿದ್ದಾರೆ.
ಚಿತ್ರದುರ್ಗ ಜಿಲ್ಲಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಘಟನೆಗೆ ಯಾರೇ ಕಾರಣರಾಗಿದ್ದರೂ ಕ್ರಮ ಜರುಗಿಸುವಂತೆ ಸೂಚಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಅಧಿಕೃತ ಟ್ವಿಟ್ಟರ್ ಖಾತೆಯಿಂದ ಬುಧವಾರ ಟ್ವೀಟ್ ಮಾಡಲಾಗಿದೆ.
ಪ್ರಕರಣದ ಹಿನ್ನೆಲೆ ಏನು?: ಕಲುಷಿತ ನೀರು ಸೇವಿಸಿ ಇಬ್ಬರು ಮೃತಪಟ್ಟಿದ್ದು, 36 ಮಂದಿ ಅಸ್ವಸ್ಥಗೊಂಡಿದ್ದಾರೆ. ಚಿತ್ರದುರ್ಗದ ಹೊರವಲಯದ ಕವಾಡಿಗರಹಟ್ಟಿ ನಿವಾಸಿಗಳಾದ ಮಂಜುಳಾ (23 ) ಮತ್ತು ಯುವಕ ರಘು (27) ಮೃತಪಟ್ಟಿದ್ದಾರೆ. ನಿನ್ನೆ (ಆ.1ರಂದು) ಈ ಘಟನೆ ನಡೆದಿದ್ದು, ನಗರಸಭೆಯಿಂದ ಪೂರೈಕೆಯಾಗುವ ನೀರನ್ನು ಸೇವಿಸದಂತೆ ಸ್ಥಳೀಯ ನಿವಾಸಿಗಳಿಗೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
-
ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ @siddaramaiah ಅವರು ಆದೇಶಿಸಿದ್ದಾರೆ.
— CM of Karnataka (@CMofKarnataka) August 2, 2023 " class="align-text-top noRightClick twitterSection" data="
ಚಿತ್ರದುರ್ಗ ಜಿಲ್ಲಾಧಿಕಾರಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡು, ತಪ್ಪಿತಸ್ಥ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡುವಂತೆ…
">ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ @siddaramaiah ಅವರು ಆದೇಶಿಸಿದ್ದಾರೆ.
— CM of Karnataka (@CMofKarnataka) August 2, 2023
ಚಿತ್ರದುರ್ಗ ಜಿಲ್ಲಾಧಿಕಾರಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡು, ತಪ್ಪಿತಸ್ಥ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡುವಂತೆ…ಚಿತ್ರದುರ್ಗದ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಘಟನೆ ಕುರಿತು ತನಿಖೆ ನಡೆಸುವಂತೆ ಮುಖ್ಯಮಂತ್ರಿ @siddaramaiah ಅವರು ಆದೇಶಿಸಿದ್ದಾರೆ.
— CM of Karnataka (@CMofKarnataka) August 2, 2023
ಚಿತ್ರದುರ್ಗ ಜಿಲ್ಲಾಧಿಕಾರಿಗಳ ಜೊತೆ ದೂರವಾಣಿ ಮೂಲಕ ಮಾತನಾಡಿ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡು, ತಪ್ಪಿತಸ್ಥ ಅಧಿಕಾರಿಯನ್ನು ಕೂಡಲೇ ಅಮಾನತು ಮಾಡುವಂತೆ…
ತೀವ್ರ ವಾಂತಿ ಬೇದಿಯಿಂದ ಅಸ್ವಸ್ಥರಾದ ಕೆಲವರನ್ನು ಪ್ರಸ್ತುತ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳನ್ನು ದಾವಣಗೆರೆ ನಗರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಕವಾಡಿಗರ ಹಟ್ಟಿಯಲ್ಲಿ ಸ್ಥಳಕ್ಕೆ ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ನೀರು ಕಲುಷಿತಕ್ಕೆ ನಿಖರವಾದ ಕಾರಣವನ್ನು ಕಂಡು ಹಿಡಿಯಲು ಅಸ್ವಸ್ಥಗೊಂಡವರು ಕುಡಿದ ನೀರು, ಮಲ-ಮೂತ್ರ ಮಾದರಿಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
ಈ ಘಟನೆಗೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆಗೆ ನೀರಗಂಟಿ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಆದರೆ, ಲ್ಯಾಬ್ ರಿಪೋರ್ಟ್ ಬಂದ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪೊಲೀಸರು ಹೇಳುತ್ತಿದ್ದಾರೆ.
ಇದನ್ನೂ ಓದಿ: ದಾವಣಗೆರೆಯಲ್ಲಿ ನಾಲ್ಕು ಮದುವೆಯಾಗಿ ವಂಚಿಸಿದ ಆರೋಪ.. ಪತ್ನಿಯರ ಕೈಗೆ ಸಿಕ್ಕಿಬಿದ್ದ ಸಲ್ಮಾನ್ ಖಾನ್ಗೆ ರಸ್ತೆಯಲ್ಲೇ ಧರ್ಮದೇಟು