ETV Bharat / state

ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಕೊಲೆ ಯತ್ನ ಪ್ರಕರಣ: ಐವರ ಬಂಧನ, ಹತ್ಯೆಗೆ 6 ತಿಂಗಳ ಹಿಂದೆ ಸ್ಕೆಚ್‌ - Case of Secretary of Cams Sasikumar murder case news

ಶಶಿಕುಮಾರ್​ನನ್ನು ಮುಗಿಸಲೇಬೇಕೆಂಬ ತೀರ್ಮಾನಿಸಿದ್ದ ರವಿ ಅಂಡ್ ಗ್ಯಾಂಗ್ 29ರಂದು ರಾತ್ರಿ ಕೊಲೆ ಮಾಡಲು ನಿರ್ಧರಿಸಿದ್ದರು. ಪ್ರತಿದಿನ ಸಾಕುನಾಯಿಯನ್ನ ವಾಕ್ ಮಾಡಲು ಕರೆದುಕೊಂಡು ಬರುವಾಗ ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು. ಆದರೆ, ಆ ದಿನ ರಾತ್ರಿ ಬೇಗನೇ ಜಾಲಹಳ್ಳಿಯಿಂದ ಗಾಂಧಿನಗರ ನಿವಾಸಕ್ಕೆ ಹೋಗಲು ಕಾರು ಹತ್ತಿದ್ದ ಶಶಿಕುಮಾರ್‌ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು..

Case of Secretary of Cams Sasikumar murder case news
ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಕೊಲೆ ಯತ್ನ ಪ್ರಕರಣ
author img

By

Published : Aug 8, 2021, 9:21 PM IST

Updated : Aug 8, 2021, 10:57 PM IST

ಬೆಂಗಳೂರು : ಖಾಸಗಿ‌ ಶಾಲೆಗಳ‌ ಒಕ್ಕೂಟ ಕಾರ್ಯದರ್ಶಿ (ಕ್ಯಾಮ್ಸ್) ಶಶಿಕುಮಾರ್ ಮೇಲೆ ನಡೆದಿದ್ದ ಕೊಲೆ‌ ಯತ್ನ‌ ಪ್ರಕರಣ ಭೇದಿಸಿರುವ ಜಾಲಹಳ್ಳಿ ಪೊಲೀಸರು ಈ ಸಂಬಂಧ ಐವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಕೊಲೆ‌ ಯತ್ನ ಪ್ರಕರಣ ದಾಖಲಿಸಿಕೊಂಡ ಜಾಲಹಳ್ಳಿ‌‌ ಇನ್ಸ್‌ಪೆಕ್ಟರ್ ಗುರುಪ್ರಸಾದ್ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಾದ ದಿಲೀಪ್, ಅಭಿಷೇಕ್, ಕಾರ್ತಿಕ್, ಭರತ್ ಹಾಗೂ ಪವನ್ ಎಂಬುವರನ್ನ ಬಂಧಿಸಿದಾರೆ.

ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ಕೊಲೆ ಯತ್ನ ಪ್ರಕರಣ

ಒಂದು‌‌ ಪಿಸ್ತೂಲ್, ಮೂರು ಜೀವಂತ ಗುಂಡುಗಳು, ಮಾರಕಾಸ್ತ್ರಗಳು, ಡ್ರ್ಯಾಗರ್, ಪೆಪ್ಪರ್ ಸ್ಪ್ರೇ ಬಾಟೆಲ್ ಹಾಗೂ ಎರಡು ದ್ವಿಚಕ್ರ ವಾಹನ ಜಪ್ತಿ ಮಾಡಿದ್ದಾರೆ.‌ ಕೃತ್ಯದಲ್ಲಿ ಪ್ರಮುಖ ಆರೋಪಿ ಲಗ್ಗೆರೆ ರವಿ ಸೇರಿ ಆರು ಮಂದಿ ಭಾಗಿಯಾಗಿ ತಲೆಮರೆಸಿಕೊಂಡಿದ್ದು, ಶೀಘ್ರದಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸಲಾಗುವುದು ಎಂದು ನಗರ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ‌.

ಅಂದು ಆಗಿದ್ದೇನು?
ಕ್ಯಾಮ್ಸ್ ಕಾರ್ಯದರ್ಶಿಯಾಗಿರುವ ಶಶಿಕುಮಾರ್ ಕಳೆದ ತಿಂಗಳು 29ರ ರಾತ್ರಿ 9 ಗಂಟೆ‌ ಸುಮಾರಿಗೆ ಜಾಲಹಳ್ಳಿ ನಿವಾಸ ಬಳಿ ಕಾರಿನಿಂದ‌ ಇಳಿಯುತ್ತಿದ್ದಾಗ ದುಷ್ಕರ್ಮಿಗಳು ಏಕಾಏಕಿ ಶಶಿಕುಮಾರ್ ಮೇಲೆ ಹಲ್ಲೆಗೆ ಯತ್ನಿಸಿದ್ದರು.‌ ಕೂಡಲೇ ಕಾರಿನಲ್ಲಿ ಕುಳಿತಕೊಂಡ ಶಶಿಕುಮಾರ್‌ಗೆ ಸಣ್ಣಪುಟ್ಟ ಗಾಯವಾಗಿತ್ತು. ಜೀವ ರಕ್ಷಣೆಗಾಗಿ ತಮ್ಮ ಬಳಿಯಿದ್ದ ಪಿಸ್ತೂಲ್ ತೆಗೆಯುತ್ತಿದ್ದಂತೆ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದರು.

ಮಾಹಿತಿ ಆಧರಿಸಿ ಸ್ಥಳಕ್ಕೆ‌ ಪೊಲೀಸರು ಬಂದು ಮಾಹಿತಿ ಕಲೆ ಹಾಕಿ ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿಗಳ‌ ಪತ್ತೆಗಾಗಿ ಎಸಿಪಿ ಅರುಣ್ ನಾಗೇಗೌಡ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್ ಗುರುಪ್ರಸಾದ್ ಸಾರಥ್ಯದಲ್ಲಿ ನಾಲ್ಕು ವಿಶೇಷ ತಂಡ ರಚಿಸಿ ಚುರುಕಿನಿಂದ ತನಿಖೆ ನಡೆಸಿ ಐದು ಮಂದಿ ಆರೋಪಿಗಳ ಬಂಧನಕ್ಕೆ ಕಾರಣವಾಗಿದೆ‌.

ಕೊಲೆ ಯತ್ನಕ್ಕೆ ಕಾರಣವೇನು?

2014ರಿಂದ ಕರ್ನಾಟಕ ವಿದ್ಯಾರ್ಥಿ ಪೋಷಕರ ಸಂಘದಲ್ಲಿ ಗುರುತಿಸಿಕೊಂಡಿದ್ದ ಲಗ್ಗೆರೆ ರವಿ ರಾಜಗೋಪಾಲನಗರ ಠಾಣೆಯ ರೌಡಿಶೀಟರ್ ಆಗಿ ಕುಖ್ಯಾತಿ ಪಡೆದಿದ್ದ. 2019ರಲ್ಲಿ ವಿಜಯನಗರ ಠಾಣಾ ವ್ಯಾಪ್ತಿಯ ಶಾಲೆಯೊಂದರ ಪ್ರಿನ್ಸಿಪಾಲ್ ಆಗಿದ್ದ ವೀರಭದ್ರಪ್ಪ ಎಂಬುವರ ಅಪಹರಣ ಸೇರಿದಂತೆ ಏಳಕ್ಕಿಂತ ಹೆಚ್ಚು ಪ್ರಕರಣ ದಾಖಲಾಗಿವೆ.

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ರವಿ ಜೈಲು ಸೇರಿದ್ದ. ಇನ್ನೊಂದಡೆ ಖಾಸಗಿ ಶಾಲೆಗಳ ಮಾಲೀಕರಿಂದ ಹಫ್ತಾ ವಸೂಲಿ ನಿಂತಿದ್ದರಿಂದ ಹಾಗೂ ಮರಳಿ ಹಣ ಪಡೆಯಲು ಯೋಜನೆ ರೂಪಿಸಿದ್ದ. ಅಲ್ಲದೆ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮುಗಿಸಿದರೆ ಇತರೆ ಖಾಸಗಿ ಶಾಲೆಗಳ ಮಾಲೀಕರು ಹಫ್ತಾ ನೀಡುತ್ತಾರೆ ಎಂದು ಭಾವಿಸಿದ್ದ.

ಇದೇ ದುರುದ್ದೇಶದಿಂದ ಜೈಲಿನಲ್ಲಿದ್ದ ಎರಡನೇ ಆರೋಪಿ ದಿಲೀಪ್‌ನ ಪರಿಚಯಿಸಿಕೊಂಡು ಸಂಚು ರೂಪಿಸಿದ್ದ. ರವಿ ಅಣತಿಯಂತೆ ದಿಲೀಪ್ ಸಹಚರರಿಗೆ ವಿಷಯ ತಿಳಿಸಿದ್ದಾನೆ‌. ಜಾಮೀನು ಪಡೆದು ಹೊರ ಬಂದಿದ್ದ ಆರೋಪಿಗಳು ಶಶಿಕುಮಾರ್‌ನ ಕೊಲೆ ಮಾಡಲು ಸಂಚು ರೂಪಿಸಿದ್ದರು.

ಕೊಲೆ ಮಾಡಲು ಆರು ತಿಂಗಳ ಹಿಂದೆಯೇ ಪ್ಲ್ಯಾನ್ :

ಶಶಿಕುಮಾರ್ ಹತ್ಯೆ ಮಾಡಲು ನಿರ್ಧರಿಸಿದ ಆರೋಪಿಗಳು ಜಾಲಹಳ್ಳಿಯ ಮುತ್ಯಾಲನಗರದಲ್ಲಿ ರವಿ ಮಾಡಿದ್ದ ಬಾಡಿಗೆ ಮನೆಯಲ್ಲಿ ಉಳಿದುಕೊಂಡಿದ್ದರು. ನಿರಂತರವಾಗಿ ಶಶಿಕುಮಾರ್ ಚಲನವಲನದ ಬಗ್ಗೆ ನಿಗಾವಹಿಸಿದ್ದರು. ಕಳೆದ ತಿಂಗಳು 29ರಂದು ಜಾಲಹಳ್ಳಿ ಬಳಿ ಹತ್ಯೆ ಮಾಡಲು ಮುಂದಾಗಿದ್ದರು.

ದಾಳಿಯಲ್ಲಿ ಶಶಿಕುಮಾರ್ ಬಳಿಯಿದ್ದ ಲೈಸೆನ್ಸ್ ಪಿಸ್ತೂಲ್ ಕಂಡು ಕ್ಷಣಾರ್ಧದಲ್ಲಿ ಸ್ಥಳದಿಂದ ಎಸ್ಕೇಪ್ ಆಗಿದ್ದರು. ಬಂಧನ ಭೀತಿಯಿಂದ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಕೋಲಾರ, ಮಾಲೂರು ಸೇರಿದಂತೆ ಇನ್ನಿತರ ಕಡೆಗಳಲ್ಲಿ ತಲೆಮರೆಸಿಕೊಂಡಿದ್ದರು ಎಂದು ಡಿಸಿಪಿ ತಿಳಿಸಿದ್ದಾರೆ.

ಮನೆಯಲ್ಲಿ‌ ಪಿಸ್ತೂಲ್ ಇದ್ದರೂ ಬಳಸಲಿಲ್ಲ :

ಶಶಿಕುಮಾರ್​ನನ್ನು ಮುಗಿಸಲೇಬೇಕೆಂಬ ತೀರ್ಮಾನಿಸಿದ್ದ ರವಿ ಅಂಡ್ ಗ್ಯಾಂಗ್ 29ರಂದು ರಾತ್ರಿ ಕೊಲೆ ಮಾಡಲು ನಿರ್ಧರಿಸಿದ್ದರು. ಪ್ರತಿದಿನ ಸಾಕುನಾಯಿಯನ್ನ ವಾಕ್ ಮಾಡಲು ಕರೆದುಕೊಂಡು ಬರುವಾಗ ಹತ್ಯೆ ಮಾಡಲು ಸಂಚು ರೂಪಿಸಲಾಗಿತ್ತು. ಆದರೆ, ಆ ದಿನ ರಾತ್ರಿ ಬೇಗನೇ ಜಾಲಹಳ್ಳಿಯಿಂದ ಗಾಂಧಿನಗರ ನಿವಾಸಕ್ಕೆ ಹೋಗಲು ಕಾರು ಹತ್ತಿದ್ದ ಶಶಿಕುಮಾರ್‌ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದರು.

ಅಲ್ಲದೆ ಆರೋಪಿ‌ ದಿಲೀಪ್ ಉಳಿದುಕೊಂಡಿದ್ದ ಮನೆಯಲ್ಲಿ ಕಂಟ್ರಿಮೇಡ್ ಪಿಸ್ತೂಲ್‌ನಲ್ಲಿ ಮೂರು ಸಜೀವ ಗುಂಡುಗಳಿದ್ದರೂ ಇದನ್ನು ಬಳಸಲು ಬರದ ಕಾರಣ ಮಾರಕಾಸ್ತ್ರ ಮೊರೆ ಹೋಗಿದ್ದರು. ಪತ್ತೆಯಾಗಿರುವ ಪಿಸ್ತೂಲ್ ಬಗ್ಗೆ ತಲೆಮರೆಸಿಕೊಂಡಿರುವ ಆರೋಪಿಗಳ ಬಂಧನ ಬಳಿಕ ವಿಷಯ ಬಯಲಾಗಲಿದೆ ಎಂದು‌ ಪೊಲೀಸರು ತಿಳಿಸಿದ್ದಾರೆ.

Last Updated : Aug 8, 2021, 10:57 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.