ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಉಮೇದುವಾರಿಕೆ ರದ್ದುಗೊಳಿಸುವಂತೆ ಒತ್ತಾಯಿಸಿ ರಾಜ್ಯ ಚುನಾವಣಾ ಆಯೋಗಕ್ಕೆ ಸಾಮಾಜಿಕ ಕಾರ್ಯಕರ್ತ ಬಿ.ಎಸ್.ಗೌಡ ಎಂಬುವವರು ದೂರು ನೀಡಿದ್ದಾರೆ.
ಮಂಡ್ಯದಲ್ಲಿ ಪ್ರಮಾಣಪತ್ರ ಸಲ್ಲಿಸುವಾಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆ.ನಿಖಿಲ್ ಎಂದು ಹೆಸರು ನಮೂದಿಸಿದ್ದಾರೆ. ರಾಮನಗರದ ಕೇತಗಾನಹಳ್ಳಿ ಮತದಾರರ ಪಟ್ಟಿಯಲ್ಲಿ ನಿಖಿಲ್ ಕುಮಾರಸ್ವಾಮಿ ಅಂತಾ ಇದೆ. ಅದರೆ, ಪ್ರಮಾಣಪತ್ರ ಸಲ್ಲಿಸುವಾಗ ಕೆ.ನಿಖಿಲ್ ಅಂತಾ ನಮೂದಿಸಿದ್ದಾರೆ. ಕಾನೂನು ಪ್ರಕಾರ ಪ್ರಮಾಣಪತ್ರ ಸಲ್ಲಿಸುವಾಗ ಮತದಾರರ ಪಟ್ಟಿಯಲ್ಲಿ ಹೆಸರು ಏನಿದೆಯೋ ಆ ಹೆಸರನ್ನೇ ಕೊಡಬೇಕು. ಆದರೆ, ಈ ನಿಯಮವನ್ನು ನಿಖಿಲ್ ಉಲ್ಲಂಘಿಸಿದ್ದು, ಇವರ ನಾಮಪತ್ರ ತಿರಸ್ಕರಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿರುವುದಾಗಿ ಅವರು ತಿಳಿಸಿದ್ದಾರೆ.