ETV Bharat / state

ಅವಮಾನಿಸುವ ಉದ್ದೇಶವಿಲ್ಲದೆ ಜಾತಿ ಹೆಸರಿನಲ್ಲಿ ನಿಂದಿಸಿದಲ್ಲಿ ಎಸ್​ಸಿ, ಎಸ್​ಟಿ ಕಾಯ್ದೆಯಡಿ ಅಪರಾಧವಾಗುವುದಿಲ್ಲ: ಹೈಕೋರ್ಟ್

ಉದ್ದೇಶ ರಹಿತ ಜಾತಿ ನಿಂದನೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಅಪರಾಧವಾಗುವುದಿಲ್ಲ ಎಂದು ಹೈಕೋರ್ಟ್​ ಅಭಿಪ್ರಾಯ

high court
ಹೈಕೋರ್ಟ್
author img

By

Published : Jan 30, 2023, 8:58 PM IST

Updated : Jan 30, 2023, 9:06 PM IST

ಬೆಂಗಳೂರು : ಅವಮಾನಿಸುವ ಮತ್ತು ಟೀಕಿಸುವ ಉದ್ದೇಶವಿಲ್ಲದೆ ಜಾತಿ ಹೆಸರನ್ನು ಪ್ರಸ್ತಾಪಿಸಿ ನಿಂದಿಸಿದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಕಾಯ್ದೆಯ ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ಹೈಕೋರ್ಟ್ ತಿಳಿಸಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನೇಕಲ್‌ನ ಸೂರ್ಯನಗರದ ವಾಸಿ ವಿ.ಶಶಿಕುಮಾರ್ ತಮ್ಮ ವಿರುದ್ಧದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಅಂಗೀಕರಿಸಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಪೀಠ ಈ ಆದೇಶ ಮಾಡಿದೆ.

ನ್ಯಾಯಾಲಯ ಅರ್ಜಿದಾರರ ವಿರುದ್ಧದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯ್ದೆ ಸೆಕ್ಷನ್ 3(1)(ಆರ್) ಮತ್ತು (ಎಸ್) ಅಡಿ ಆರೋಪಗಳನ್ನು ರದ್ದುಗೊಳಿಸಿದೆ. ಆದರೆ ಭಾರತೀಯ ದಂಡ ಸಂಹಿತೆ ಕಲಂ ಅಡಿ ಪ್ರಕರಣ ಮುಂದುವರಿಕೆಗೆ ಅನುಮತಿ ನೀಡಿದೆ. ಸಂತ್ರಸ್ತನ ಜಾತಿ ಹೆಸರನ್ನು ಹಿಡಿದು ಬೈಯ್ದಾಕ್ಷಣ ಅದು ಅಪರಾಧವಾಗುವುದಿಲ್ಲ, ಆ ಜಾತಿಯ ಹೆಸರನ್ನು ಆತನನ್ನು ನಿಂದಿಸುವ ಉದ್ದೇಶಕ್ಕೆ ಬಳಸಿದಾಗ ಮಾತ್ರ ಅದು ಅಪರಾಧವಾಗಲಿದೆ. ಈ ಪ್ರಕರಣದಲ್ಲಿ ಘಟನೆ ನಡೆದ ತಕ್ಷಣ ನೀಡಿದ ದೂರಿನಲ್ಲಿ ಜಾತಿ ನಿಂದನೆ ವಿಚಾರ ಪ್ರಸ್ತಾಪವೇ ಆಗಿಲ್ಲ ಮತ್ತು ದೂರುದಾರರೂ ಸಹ ದೂರಿನಲ್ಲಿ ಅದನ್ನು ಹೇಳಿಲ್ಲ. ಆರೋಪ ಮಾಡಿರುವುದು ಜೀವ ಬೆದರಿಕೆ ಅಷ್ಟೇ ಎಂದು ನ್ಯಾಯಾಲಯ ಹೇಳಿದೆ.

ಅಲ್ಲದೆ, ಜಾತಿ ನಿಂದನೆ ಆರೋಪಗಳಿಗೆ ಸಂಬಂಧಿಸಿದಂತೆ ಜಗಳ ನಡೆದಾಗ ಎರಡೂ ಕಡೆಯವರ ನಡುವೆ ಮಾತಿಗೆ ಮಾತು ನಡೆದಿವೆ. ಆರೋಪಿ ಅವರ ಜಾತಿಯ ಹೆಸರು ಬಳಸಿದ್ದಾರೆಂದು ಹೇಳಲಾಗಿದೆ. ಆದರೆ ಆತ ಉದ್ದೇಶಪೂರ್ವಕವಾಗಿ ಅಥವಾ ಅಪಮಾನ ಮಾಡಲೆಂದೇ ಜಾತಿ ನಿಂದನೆ ಮಾಡಿದ್ದಾನೆ ಎನ್ನುವುದಕ್ಕೆ ಯಾವುದೇ ವಿವರಗಳಿಲ್ಲ. ಜತೆಗೆ ಕಾಯಿದೆಯ ಉದ್ದೇಶ ಪರಿಶಿಷ್ಟ ಜಾತಿ ಅಥವಾ ಪಂಗಡಕ್ಕೆ ಸೇರಿದ ವ್ಯಕ್ತಿಯನ್ನು ಅಪಮಾನಿಸಿ ಉದ್ದೇಶಪೂರ್ವಕವಾಗಿ ಆತನ ಜಾತಿ ಹಿಡಿದು ನಿಂದಿಸಿದರೆ ಆಗ ಮಾತ್ರ ಕಾಯಿದೆಯ ಅನ್ವಯ ಕ್ರಮ ಕೈಗೊಳ್ಳಬಹುದಾಗಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಆದರೆ ಈ ಪ್ರಕರಣದಲ್ಲಿ ಆರೋಪ ಪಟ್ಟಿ ಮತ್ತು ಸಾಕ್ಷಿಗಳ ಹೇಳಿಕೆಯಲ್ಲಿ ಎಲ್ಲೂ ಏಕೆ ಜಾತಿ ನಿಂದನೆ ಮಾಡಲಾಯಿತು, ಹೇಗೆ ಮಾಡಲಾಯಿತು ಎಂಬ ಬಗ್ಗೆ ಉಲ್ಲೇಖಿಸಿಲ್ಲ. ಜತೆಗೆ ಉದ್ದೇಶ ಪೂರ್ವಕವಾಗಿ ನಿಂದನೆ ಮಾಡಲೇಬೇಕೆಂದು ನಿಂದನೆ ಮಾಡಿರುವುದಕ್ಕೆ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ಹಾಗಾಗಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿಯ ಪ್ರಕರಣ ಊರ್ಜಿತವಾಗದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ನಮ್ಮ ಕಕ್ಷಿದಾರರು ಜಾತಿ ನಿಂದನೆ ಮಾಡಬೇಕು ಎಂಬ ಉದ್ದೇಶದಿಂದ ಜಾತಿ ನಿಂದನೆ ಮಾಡಿಲ್ಲ, ಕ್ರಿಕಟ್ ಆಟದಲ್ಲಿ ಜಗಳವಾದಾಗ ಸುಮ್ಮನೆ ಆ ಪದ ಬಳಕೆಯಾಗಿರಬಹುದು, ಅದೇ ಕಾರಣದಕ್ಕೆ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯಿದೆಯಡಿ ದೂರು ದಾಖಲಿಸಿರುವುದು ಸರಿಯಾದ ಪದವಲ್ಲ. ಹೀಗಾಗಿ ಪ್ರಕರಣ ರದ್ದುಗೊಳಸಬೇಕು ಎಂದು ಮನವಿ ಮಾಡಿದ್ದರು.

ಪ್ರಕರಣದ ಹಿನ್ನೆಲೆ ಏನು?: ಜಯಮ್ಮ ಎಂಬುವರು 2020ರ ಜೂ.14ರಂದು ಪೊಲೀಸರಿಗೆ ದೂರು ನೀಡಿ, ತನ್ನ ಮಗ ಮತ್ತು ಆತನ ಸ್ನೇಹಿತರು ಕ್ರಿಕೆಟ್ ಆಡುತ್ತಿದ್ದಾಗ ಎರಡು ತಂಡಗಳ ನಡುವೆ ಜಗಳ ನಡೆದಿದೆ. ಆ ವೇಳೆ ತನ್ನ ಮಗನನ್ನು ಹಿಡಿದು ಹೊಡೆದಿದ್ದಾರೆ ಎಂದು ದೂರು ನೀಡಿದ್ದರು. ದೂರು ದಾಖಲಿಸಿಕೊಂಡಿದ್ದ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲಾರಂಭಿಸಿದ್ದರು. ಆ ವೇಳೆ ಕೇವಲ ಥಳಿಸಿದ್ದಲ್ಲದೆ ದೂರುದಾರರ ಮಗನನ್ನು ಅವ್ಯಾಚ ಶಬ್ಧಗಳಿಂದ ನಿಂದಿಸಲಾಗಿತ್ತು ಎಂಬ ಅಂಶ ಹೊರಬಂದಿತು. ಆಗ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪಂಗಡ ದೌರ್ಜನ್ಯ ತಡೆ ಕಾಯ್ದೆಯಡಿಯೂ ಆರೋಪಗಳನ್ನು ಪ್ರಕರಣದಲ್ಲಿ ಸೇರಿಸಿದರು.

ನಂತರ ಪೊಲೀಸರು ತನಿಖೆ ನಡೆಸಿ, ಅರ್ಜಿದಾರರು ಮತ್ತಿತರ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 143, 147, 323, 324, 365, 506 ಮತ್ತು 149ರಡಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡ ಕಾಯ್ದೆಯ ಸೆಕ್ಷನ್ 3(1)(ಆರ್)ಮತ್ತು(ಎಸ್)ರಡಿ ಆರೋಪಪಟ್ಟಿ ಸಲ್ಲಿಸಿದ್ದರು. ಪ್ರಕರಣ ಸಂಬಂಧ ಸೆಷನ್ಸ್ ನ್ಯಾಯಾಲಯ ಕಾಗ್ನಿಜೆನ್ಸ್ ಪಡೆದು ವಿಚಾರಣೆ ಕೈಗೆತ್ತಿಕೊಂಡಿತ್ತು. ಹಾಗಾಗಿ ಅರ್ಜಿದಾರರು ಪ್ರಕರಣ ರದ್ದು ಕೋರಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ತಾತ್ಕಾಲಿಕ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್

Last Updated : Jan 30, 2023, 9:06 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.