ETV Bharat / state

ಆಕ್ಷೇಪಾರ್ಹ ಪದ ಬಳಕೆ ಆರೋಪ: ನಟ ಉಪೇಂದ್ರ ವಿರುದ್ಧ ಮತ್ತೊಂದು ಎಫ್ಐಆರ್

FIR filed against actor Upendra: ಸಮುದಾಯವೊಂದರ ಭಾವನೆಗಳಿಗೆ ನೋವುಂಟಾಗುವಂತೆ ಮಾತನಾಡಿದ ಆರೋಪದಡಿ ನಿನ್ನೆಯಷ್ಟೇ ನಟ ಉಪೇಂದ್ರ ವಿರುದ್ಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಎಸ್​ಸಿ - ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅವರ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.

Actor Upendra
ನಟ ಉಪೇಂದ್ರ
author img

By

Published : Aug 14, 2023, 11:43 AM IST

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಉಪೇಂದ್ರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕರ್ನಾಟಕ ರಣಧೀರ ಪಡೆಯ ರಾಜ್ಯಾಧ್ಯಕ್ಷ ಭೈರಪ್ಪ ಹರೀಶ್ ಕುಮಾರ್ ನೀಡಿರುವ ದೂರಿನ ಆಧಾರದ ಮೇಲೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಸ್​ಸಿ - ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ: ತಮ್ಮ ಲೈವ್ ವಿಡಿಯೋದಲ್ಲಿ ಸಮುದಾಯವೊಂದರ ಭಾವನೆಗಳಿಗೆ ನೋವುಂಟಾಗುವಂತೆ ಮಾತನಾಡಿದ ಆರೋಪದಡಿ ನಿನ್ನೆಯಷ್ಟೇ ಉಪೇಂದ್ರ ವಿರುದ್ಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್‌ ನೀಡಿದ ದೂರಿನ ಅನ್ವಯ ಎಫ್‌ಐಆರ್ ದಾಖಲಾಗಿತ್ತು. ಇದೀಗ ಉಪೇಂದ್ರ ವಿರುದ್ಧ ಮತ್ತೊಂದು ದೂರು ದಾಖಲಾಗಿದ್ದು, ಎಸ್​ಸಿ-ಎಸ್​ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಇತ್ತೀಚಿಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯ ಲೈವ್​ನಲ್ಲಿ ಮಾತನಾಡಿದ್ದ ಉಪೇಂದ್ರ ಸಮುದಾಯವೊಂದರ ಕುರಿತು ಆಕ್ಷೇಪಾರ್ಹ ಪದ ಬಳಸಿದ್ದರು. ಬಳಿಕ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ತಕ್ಷಣ ಎಚ್ಚೆತ್ತ ಉಪೇಂದ್ರ ವಿಡಿಯೋ ಡಿಲೀಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆಯಾಚಿಸಿದ್ದರು.

ನೋಟಿಸ್ ಜಾರಿ: ಪ್ರಕರಣ ಸಂಬಂಧ ಉಪೇಂದ್ರ ಅವರಿಗೆ ನೋಟಿಸ್​ ನೀಡಲಾಗುವುದು ಎಂದು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ. ಉಪೇಂದ್ರ ಅವರ ನಿವಾಸಕ್ಕೆ ತೆರಳಿ ಪೊಲೀಸರು ನೋಟಿಸ್​ ನೀಡುವ ಸಾಧ್ಯತೆ ಇದೆ.

ಪ್ರಕರಣದ ಹಿನ್ನೆಲೆ: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪದಡಿ ನಟ, ನಿರ್ದೇಶಕ ಉಪೇಂದ್ರ ವಿರುದ್ಧ ಪ್ರಥಮ ವರ್ತಮಾನ ವರದಿ (ಎಫ್ಐಆರ್) ದಾಖಲಾಗಿದೆ. ಜಾತಿಯೊಂದರ ಭಾವನೆಗಳಿಗೆ ಧಕ್ಕೆಯಾಗುವ ಪದ ಬಳಸಿದ್ದಾರೆ ಎಂದು ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಧುಸೂದನ್ ಅವರು ಈ ದೂರು ನೀಡಿದ್ದರು.

ಇತ್ತೀಚಿಗೆ ತಮ್ಮ ಸಾಮಾಜಿಕ ಜಾಲತಾಣ ಖಾತೆಯ ನೇರಪ್ರಸಾರದಲ್ಲಿ ಮಾತನಾಡಿದ್ದ ಉಪೇಂದ್ರ ಸಮುದಾಯವೊಂದರ ಕುರಿತು ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು ಎಂದು ಆರೋಪಿಸಲಾಗಿದೆ. ರಾಜ್ಯಾದ್ಯಂತ ಅಭಿಮಾನಿಗಳನ್ನು ಹೊಂದಿರುವ ನಟನನ್ನು ಅನುಕರಿಸುವ ಸಾಧ್ಯತೆಗಳಿದ್ದು, ಸಾರ್ವಜನಿಕ ಸ್ವಾಸ್ಥ್ಯ ಹಾಳಾಗುತ್ತದೆ. ಆದ್ದರಿಂದ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿತ್ತು.

ಇದನ್ನೂ ಓದಿ: Upendra: ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಪದ ಬಳಕೆ ಆರೋಪ; ಉಪೇಂದ್ರ ವಿರುದ್ಧ FIR

ಹೇಳಿಕೆಗೆ ಕ್ಷಮೆ ಯಾಚಿಸಿದ ಉಪೇಂದ್ರ: ಇಂದು ಫೇಸ್‌ಬುಕ್ ಮತ್ತು ಇನ್ಸ್‌ಟಾಗ್ರಾಮ್ ನೇರ ಪ್ರಸಾರದಲ್ಲಿ ಮಾತನಾಡಿದ ಉಪೇಂದ್ರ, ಬಾಯ್ತಪ್ಪಿ ಒಂದು ಗಾದೆ ಮಾತು ಬಳಸಿದ್ದೆ. ಅದರಿಂದ ಹಲವರ ಭಾವನೆಗಳಿಗೆ ಧಕ್ಕೆ ಉಂಟಾಗಿರುವುದು ಕಂಡುಬಂದಿದೆ. ತಕ್ಷಣವೇ ಆ ಲೈವ್ ವಿಡಿಯೋವನ್ನು ನನ್ನ ಸಾಮಾಜಿಕ ಜಾಲತಾಣಗಳಿಂದ ಡಿಲೀಟ್ ಮಾಡಿದ್ದೇನೆ. ನನ್ನ ಮಾತಿಗೆ ಕ್ಷಮೆ ಇರಲಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: Upendra: 'ನನ್ನ ಕ್ಷಮೆ ಸ್ವೀಕರಿಸುವ ದೊಡ್ಡತನವೂ ಇಲ್ಲವಾಯಿತೇ? ಯಾಕೆ ಇಷ್ಟೊಂದು ದ್ವೇಷ?': ಉಪೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.