ಬೆಂಗಳೂರು: ಬೆಂಗಳೂರು ಗ್ರಾಮಾಂತರ ಎಸ್ಪಿಯಾಗಿ ರವಿ ಡಿ. ಚನ್ನಣ್ಣನವರ್ ಅವರು ಮುಂದುವರೆಯುವಂತೆ ಸಿಎಟಿ ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ ಎಸ್ಪಿ ಶಿವಕುಮಾರ್ ಸ್ಥಾನಕ್ಕೆ ರವಿ ಡಿ. ಚನ್ನಣ್ಣನವರ್ ಅವರನ್ನ ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಆದರೆ ಇದನ್ನು ಪ್ರಶ್ನಿಸಿ ಎಸ್ಪಿ ಶಿವಕುಮಾರ್, ತನ್ನನ್ನ ರೆಗ್ಯೂಲರ್ ಟ್ರಾನ್ಸಫರ್ ಮಾಡಲಾಗಿದೆ ಎಂದು ಸಿಎಟಿ (ಕೇಂದ್ರಿಯ ಆಡಳಿತಾತ್ಮಕ ನ್ಯಾಯಧಿಕರಣ) ಮೊರೆ ಹೋಗಿದ್ದರು. ಇದೀಗ ನ್ಯಾಯಾಲಯವು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ.ಡಿ. ಚನ್ನಣ್ಣನವರ್ ವರ್ಗಾವಣೆ ಕ್ರಮ ಸರಿ ಇದೆ ಎಂದು ಹೇಳಿದೆ.
ದಾಖಲೆ ಪರಿಶೀಲನೆ ನಡೆಸಿದಾಗ ರವಿ ಡಿ. ಚನ್ನಣ್ಣನವರ್ ವರ್ಗಾವಣೆ ಕ್ರಮವು ಸರಿ ಇದೆ ಹೇಳಿರುವ ಸಿಎಟಿ, ಕೋರ್ಟ್ಗೆ ತಪ್ಪು ಮಾಹಿತಿ ನೀಡಿರುವ ಬಗ್ಗೆ ಎಸ್ಪಿ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ.
ಚುನಾವಣೆ ಸಂದರ್ಭದಲ್ಲಿ ಬೆಂ. ಗ್ರಾಮಾಂತರ ಎಸ್ಪಿಯಾಗಿ ಶಿವಕುಮಾರ್ ಅವರನ್ನ ತಾತ್ಕಾಲಿಕವಾಗಿ ನೇಮಕ ಮಾಡಲಾಗಿತ್ತು. ನಂತರ ಇತ್ತೀಚೆಗೆ ರವಿ ಡಿ. ಚನ್ನಣ್ಣನವರ್ ಅವರನ್ನ ಸರ್ಕಾರ ಎಸ್ಪಿಯಾಗಿ ವರ್ಗಾವಣೆ ಮಾಡಿತ್ತು.