ETV Bharat / state

ಡಿಕೆಶಿ ಕುಟುಂಬದ ವಿರುದ್ಧದ ತನಿಖೆಯೇ ಪ್ರಶ್ನಾರ್ಹ.. ವಕೀಲರ ವಾದ

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್​ ಕುಟುಂಬಸ್ಥರನ್ನು ಸಿಬಿಐ ತನಿಖೆ ನಡೆಸುತ್ತಿರುವುದು ಪ್ರಶ್ನಾರ್ಹ ಎಂದು ಡಿ ಕೆ ಶಿವಕುಮಾರ್​ ಪರ ವಕೀಲರು ಹೇಳಿದ್ದಾರೆ.

cbi-investigation-against-dk-shivakumars-family-is-questionable-lawyers-argue
ಡಿಕೆಶಿ ಕುಟುಂಬದ ವಿರುದ್ಧದ ತನಿಖೆಯೇ ಪ್ರಶ್ನಾರ್ಹ: ವಕೀಲರ ವಾದ
author img

By

Published : Jul 22, 2023, 6:44 AM IST

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಶಿವಕುಮಾರ್ ಕುಟುಂಬಸ್ಥರ ಮೇಲೂ ಆರೋಪ ಹೊರಿಸಿ ತನಿಖೆ ನಡೆಸುತ್ತಿರುವ ಸಿಬಿಐ ಕ್ರಮ ಪ್ರಶ್ನಾರ್ಹವಾಗಿದೆ ಎಂದು ಶಿವಕುಮಾರ್ ಪರ ವಕೀಲರು ವಾದ ಮಂಡಿಸಿದ್ದಾರೆ. ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ ಸಂಬಂಧ ತಮ್ಮ ವಿರುದ್ಧ ಸಿಬಿಐ ದಾಖಲಿಸಿರುವ ಎಫ್‌ಐಆರ್ ಮತ್ತು ಆ ಕುರಿತ ತನಿಖೆ ರದ್ದುಪಡಿಸುವಂತೆ ಕೋರಿ ಡಿ ಕೆ ಶಿವಕುಮಾರ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ ನಟರಾಜನ್ ಅವರ ಪೀಠದ ಮುಂದೆ ಶಿವಕುಮಾರ್ ಪರ ವಕೀಲ ಸಂದೇಶ್ ಚೌಟ ವಾದ ಮಂಡಿಸಿದರು.

ಅಲ್ಲದೆ, ಪ್ರಕರಣದಲ್ಲಿ ಸಿಬಿಐ ದಾಖಲಿಸಿರುವ ಆರೋಪ ಪಟ್ಟಿಯಲ್ಲಿ ಅರ್ಜಿದಾರರ ಕುಟುಂಬಸ್ಥರ ಹೆಸರು ಉಲ್ಲೇಖಿಸಿಲ್ಲ. ಆದರೂ, ಕುಟುಂಬದ ಸದಸ್ಯರ ಮೇಲೂ ಆರೋಪ ಹೊರಿಸಲಾಗಿದೆ. ಕುಟುಂಬದ ಸದಸ್ಯರು ಗಳಿಸಿರುವ ಆದಾಯವನ್ನೂ ಶಿವಕುಮಾರ್ ಅವರ ವೈಯಕ್ತಿಕ ಆದಾಯವೆಂದು ತನಿಖಾಧಿಕಾರಿಗಳು ಪರಿಗಣಿಸಿದ್ದಾರೆ. ಆ ಮೂಲಕ ಅರ್ಜಿದಾರರು ನಿಗದಿಗಿಂತ ಹೆಚ್ಚಿನ ಆದಾಯ ಸಂಪಾದನೆ ಮಾಡಿದ್ದಾರೆ ಎಂಬುದಾಗಿ ಹೇಳುತ್ತಿದ್ದಾರೆ. ಕುಟುಂಬ ಸದಸ್ಯರ ಆದಾಯ ಪರಿಗಣಿಸಲು ಕಾನೂನಿನಲ್ಲಿ ಅವಕಾಶ ಇಲ್ಲ ಎಂದು ವಾದ ಮಂಡಿಸಿದರು.

ಇದನ್ನೂ ಓದಿ : ಶಾಸಕರಾಗಿ ಸಿಎಂ ಸಿದ್ದರಾಮಯ್ಯ ಆಯ್ಕೆ ಅಸಿಂಧುಗೊಳಿಸಲು ಕೋರಿ ಹೈಕೋರ್ಟ್​​ಗೆ ಅರ್ಜಿ

ಅಲ್ಲದೆ, ಸಿಬಿಐ ದಾಖಲಿಸಿದ ಎಫ್‌ಐಆರ್‌ನಲ್ಲಿ ಅರ್ಜಿದಾರರ ಹೆಸರನ್ನು ಉಲ್ಲೇಖಿಸಿಲ್ಲ. ಪ್ರಮುಖ ಆರೋಪಿಯ ಅವಲಂಬಿತರು ಯಾರು ಎಂಬುದು ತಿಳಿಸಿಲ್ಲ. ಶಿವಕುಮಾರ್ ಅವರು ಸಾರ್ವಜನಿಕ ಸೇವಕರಾಗಿದ್ದಾರೆ. ಸಾರ್ವಜನಿಕ ಸೇವಕನ ವೆಚ್ಚ ಯಾವುದು ಎಂಬೆಲ್ಲಾ ಅಂಶಗಳು ಎಫ್‌ಐಆರ್ ವಿವರಿಸಿಲ್ಲ. ವಿವರವಾದ ಅಂಶಗಳಿಲ್ಲದೇ ಎಫ್‌ಐಆರ್ ದಾಖಲಿಸಲು ಆಗುವುದಿಲ್ಲ ಎಂದರು.

ಇನ್ನು ಆದಾಯ ಪರಿಶೀಲನಾ ಅವಧಿ ಯಾವುದು?. ಆ ಅವಧಿ ಯಾವಾಗ ಕೊನೆಗೊಂಡಿದೆ?. ಸೇರಿದಂತೆ ಇನ್ನಿತರ ಪ್ರಾಥಮಿಕ ಅಂಶಗಳು ತನಿಖಾ ವರದಿಯಲ್ಲಿ ಉಲ್ಲೇಖಗೊಂಡಿಲ್ಲ. ನಿಯಮದ ಪ್ರಕಾರ ಈ ಪ್ರಕರಣವನ್ನು ಪೊಲೀಸ್ ವರಿಷ್ಠಾಧಿಕಾರಿ ಶ್ರೇಣಿಯ ಅಧಿಕಾರಿಗೆ ತನಿಖಾ ಜವಾಬ್ದಾರಿ ವಹಿಸಬೇಕು. ಆದರೆ, ಈ ಕೇಸ್​ನಲ್ಲಿ ತನಿಖಾ ಅಧಿಕಾರವನ್ನು ಉಪ ಪೊಲೀಸ್ ವರಿಷ್ಠಾಧಿಕಾರಿಗೆ ನೀಡಲಾಗಿದೆ. ಇದು ಸಹ ಅನುಮಾನಾಸ್ಪದವಾಗಿದ್ದು, ಕೇಸ್ ಡೈರಿಯನ್ನು ತರಿಸಿಕೊಂಡು ನ್ಯಾಯಾಲಯ ಪರಿಶೀಲನೆ ನಡೆಸಬೇಕು ಎಂದು ಕೋರಿದರು.

ಡಿಕೆಶಿ ಪರ ವಕೀಲರ ವಾದಕ್ಕೆ ಸಿಬಿಐ ಪರ ವಕೀಲ ಪಿ ಪ್ರಸನ್ನಕುಮಾರ್ ಆಕ್ಷೇಪಿಸಿದರು. ದಿನದ ಕಲಾಪ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ನ್ಯಾಯಪೀಠವು ವಿಚಾರಣೆಯನ್ನು ಜು.26ಕ್ಕೆ ಮುಂದೂಡಿತು.

ಇದನ್ನೂ ಓದಿ : ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಏಕ ಸದಸ್ಯ ತನಿಖಾ ಆಯೋಗ ನೇಮಿಸಿ ಸರ್ಕಾರ ಆದೇಶ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.