ETV Bharat / state

ಸಿಎಂ ಪುತ್ರ ವಿಜಯೇಂದ್ರಗೆ ಬಿಗ್ ರಿಲೀಫ್​.. ಸಿಬಿಐ ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

author img

By

Published : Jan 21, 2021, 6:49 PM IST

ಪ್ರಕರಣದ ಕುರಿತು ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ. ಹಾಗಿದ್ದೂ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದಾರೆ. ಎಫ್‌ಐಆರ್ ದಾಖಲಾಗದೆ ಯಾವುದೇ ಪ್ರಕರಣದ ತನಿಖೆ ವರ್ಗಾವಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟಿತು.

CM SON Vijayendra
ಸಿಎಂ ಪುತ್ರ ವಿಜಯೇಂದ್ರ

ಬೆಂಗಳೂರು: ರಾಮಲಿಂಗಮ್ ಕನ್‌ಸ್ಟ್ರಕ್ಷನ್ ಕಂಪನಿಯಿಂದ ಹಣ ವಸೂಲಿ ಮಾಡಿದ ಆರೋಪ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಮತ್ತು ಮೊಮ್ಮಗ ಶಶಿಧರ ಮರಡಿ ವಿರುದ್ಧದ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಿರಾಕರಿಸಿದೆ.

ಈ ಕುರಿತು ಜನಾಧಿಕಾರ ಸಂಘರ್ಷ ಪರಿಷತ್‌ ಮುಖ್ಯಸ್ಥ ಆದರ್ಶ ಆರ್. ಐಯ್ಯರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ, ಅರ್ಜಿ ವಜಾಗೊಳಿಸಿ ತೀರ್ಪು ನೀಡಿದೆ.

ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠ, ಪ್ರಕರಣದ ಕುರಿತು ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ. ಹಾಗಿದ್ದೂ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದಾರೆ. ಎಫ್‌ಐಆರ್ ದಾಖಲಾಗದೆ ಯಾವುದೇ ಪ್ರಕರಣದ ತನಿಖೆ ವರ್ಗಾವಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ. ಇಂತಹ ಸಂದರ್ಭದಲ್ಲಿ ಅರ್ಜಿದಾರರ ಮನವಿಯಂತೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು.

ಅಲ್ಲದೆ ಎಫ್‌ಐಆರ್ ದಾಖಲಿಸಿಲ್ಲ ಎಂಬ ಬಗ್ಗೆ ಅರ್ಜಿದಾರರು ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ (ಸಿಆರ್‌ಪಿಸಿ) ನಿಯಮಗಳ ಅನುಸಾರ ಪರಿಹಾರ ಕಂಡುಕೊಳ್ಳಬಹುದಾಗಿದೆ. ಹೀಗಾಗಿ ಅರ್ಜಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ತಿಳಿಸಿ ಇತ್ಯರ್ಥಪಡಿಸಿ ಆದೇಶಿಸಿತು.

ಅರ್ಜಿದಾರರ ಕೋರಿಕೆ ಏನಾಗಿತ್ತು..?

ಮುಖ್ಯಮಂತ್ರಿ ಪುತ್ರ ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ ಹಾಗೂ ಕೆಲ ಅಧಿಕಾರಿಕಾರಿಗಳು ರಾಮಲಿಂಗಮ್ ಕನ್‌ಸ್ಟ್ರಕ್ಷನ್ ಕಂಪನಿಯಿಂದ ಅಕ್ರಮವಾಗಿ ಹಣ ವಸೂಲಿ ಮಾಡಿದ್ದಾರೆ ಎಂದು 2020ರ ಸೆ.2 ಮತ್ತು 17ರಂದು ಖಾಸಗಿ ಸುದ್ದಿವಾಹಿನಿ ಆರೋಪ ಮಾಡಿತ್ತು.

ಈ ಪ್ರಕರಣ ಅತ್ಯಂತ ಗಂಭೀರವಾಗಿದ್ದು, ಭ್ರಷ್ಟಾಚಾರಕ್ಕೆ ಸಂಬಂಧಿಸಿದೆ. ಜತೆಗೆ ಸರ್ಕಾರದ ಆಡಳಿತ ಯಂತ್ರ ಮತ್ತು ಮುಖ್ಯಮಂತ್ರಿಗಳ ಕುಟುಂಬದವರ ವಿರುದ್ಧದ ಆರೋಪವಾಗಿದೆ. ಈ ಸಂಬಂಧ ಸೆ.25ರಂದು ಪೊಲೀಸರಿಗೆ ಹಾಗೂ ಎಸಿಬಿಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ.

ಆದ್ದರಿಂದ ಈ ಕುರಿತು ಸಿಬಿಐ ತನಿಖೆಗೆ ಆದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದರು.

ಇದನ್ನೂ ಓದಿ: ಸಿಎಂ ಪುತ್ರ ವಿಜಯೇಂದ್ರ ವಿರುದ್ಧ ಭ್ರಷ್ಟಾಚಾರ ಆರೋಪ: ಸಿಬಿಐ ತನಿಖೆ ಕೋರಿ ಪಿಐಎಲ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.