ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿದೆ.
2016ರ ಜೂನ್ನಲ್ಲಿ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡನನ್ನು ಕೊಲೆ ಮಾಡಲಾಗಿತ್ತು. ಈ ಕೊಲೆ ರಾಜಕೀಯವಾಗಿ ಭಾರಿ ಸದ್ದು ಮಾಡಿತ್ತು. ಆ ವೇಳೆ ಪ್ರತಿಪಕ್ಷ ಸ್ಥಾನದಲ್ಲಿದ್ದ ಬಿಜೆಪಿ ಇದು ರಾಜಕೀಯ ಪ್ರೇರಿತ ಕೊಲೆ ಎಂದು ಆರೋಪಿಸಿತ್ತು. ಈ ಕೊಲೆ ಹಿಂದೆ ಕಾಂಗ್ರೆಸ್ ನ ಮಾಜಿ ಸಚಿವ ಹಾಗೂ ಶಾಸಕ ವಿನಯ್ ಕುಲಕರ್ಣಿ ಹೆಸರು ತಳಕು ಹಾಕಿಕೊಂಡಿತ್ತು. ಈ ಸಂಬಂಧ ಬಿಜೆಪಿ, ವಿನಯ್ ಕುಲಕರ್ಣಿ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆಯನ್ನೂ ನಡೆಸಿತ್ತು. ಪ್ರಕರಣವನ್ನು ಸಿಬಿಐಗೆ ನೀಡುವಂತೆ ಅಂದಿನ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿತ್ತು. ಜೊತೆಗೆ ಪೊಲೀಸ್ ತನಿಖೆ ಪಕ್ಷಪಾತವಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಪ್ರಕರಣವನ್ನು ಸಿಬಿಐಗೆ ನೀಡುವಂತೆ ಯೋಗೇಶ್ ಗೌಡ ಅವರ ಸಹೋದರ ಹೈಕೋರ್ಟ್ ಮೊರೆ ಹೋಗಿದ್ದರು.
ಫೋನ್ ಟ್ಯಾಪಿಂಗ್, ಐಎಂಎ ವಂಚನೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿರುವ ಬಿಜೆಪಿ ಸರ್ಕಾರ ಇದೀಗ ಯೋಗೀಶ್ ಗೌಡ ಕೊಲೆ ಪ್ರಕರಣವನ್ನೂ ಸಿಬಿಐ ತನಿಖೆಗೆ ನೀಡಿದೆ.