ಬೆಂಗಳೂರು: ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಇಂಜೆಕ್ಷನ್ ಮಾರುವವರ ಮೇಲೆ ದಾಳಿ ಮುಂದುವರೆಸಿರುವ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಇದೀಗ ಮತ್ತಿಬ್ಬರನ್ನು ಬಂಧಿಸಿದ್ದು, ಇಂಜೆಕ್ಷನ್ ವಶಕ್ಕೆ ಪಡೆದಿದೆ.
ಆರೋಪಿಗಳು ಬಸವೇಶ್ವರ ನಗರದಲ್ಲಿ ಹೆಚ್ಚಿನ ಬೆಲೆಗೆ ಈ ಔಷಧ ಮಾರಾಟ ಮಾಡುತ್ತಿದ್ದರು.
ಇದನ್ನೂ ಓದಿ: ಕೊಡಗು: ಮರಗಳ ಅಕ್ರಮ ಸಾಗಾಟದಲ್ಲಿ ಅರಣ್ಯ ಸಿಬ್ಬಂದಿ ಶಾಮೀಲು ಆರೋಪ
ಆರೋಪಿಗಳಾದ ಸಂತೋಷ್ ಮತ್ತು ಸುನಿಲ್‌ನಿಂದ 08 ಇಂಜೆಕ್ಷನ್ ವಶಪಡಿಸಿಕೊಳ್ಳಲಾಗಿದೆ. ಒಬ್ಬ ಆರೋಪಿ ಪ್ರತಿಷ್ಠಿತ ಖಾಸಗಿ ಆಸ್ಪತ್ರೆ ಸಿಬ್ಬಂದಿಯಾಗಿದ್ದು ಮತ್ತೋರ್ವ ಆಂಬ್ಯುಲೆನ್ಸ್ ಚಾಲಕನಾಗಿದ್ದಾನೆ.
ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.