ETV Bharat / state

ವಿದ್ಯಾರ್ಥಿ ವೀಸಾದಲ್ಲಿ ಬಂದು ಮಾದಕ ವಸ್ತು ಮಾರಾಟ, ನೈಜೀರಿಯಾ ಪ್ರಜೆ ಬಂಧನ

ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ಮೂಲದ ಆರೋಪಿ ಜಾನ್ ನೆರೋನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

CCB arrested Nigeria based man under drugs case
ಡ್ರಗ್ಸ್ ಪ್ರಕರಣದಲ್ಲಿ ವ್ಯಕ್ತಿಯ ಬಂಧನ
author img

By

Published : Jun 19, 2022, 2:24 PM IST

ಬೆಂಗಳೂರು: ವಿದ್ಯಾರ್ಥಿ ವೀಸಾದಲ್ಲಿ ದೇಶಕ್ಕೆ ಬಂದು ಮಾದಕ ವಸ್ತು ಮಾರಾಟ ದಂಧೆಯಲ್ಲಿ ತೊಡಗಿದ್ದ ನೈಜೀರಿಯಾ ಮೂಲದ ಆರೋಪಿಯನ್ನು ಸಿಸಿಬಿಯ ಮಾದಕ ವಸ್ತು ನಿಗ್ರಹ ದಳ ಬಂಧಿಸಿದೆ. ಜಾನ್ ನೆರೋ ಬಂಧಿತ ಆರೋಪಿ.

ಎಂಟು ವರ್ಷಗಳ ಹಿಂದೆ ವಿದ್ಯಾರ್ಥಿ ವೀಸಾ ಪಡೆದು ಭಾರತಕ್ಕೆ ಬಂದಿದ್ದ ಆರೋಪಿ ಓದು ಮುಗಿದ ಬಳಿಕ ಹಣ ಗಳಿಸಲು ಮಾದಕ ದಂಧೆಗಿಳಿದಿದ್ದ. ವೀಸಾ ಅವಧಿ ಉಲ್ಲಂಘಿಸಿದ ಕಾರಣಕ್ಕೆ ಈ ಹಿಂದೆ ಸಂಪಿಗೆಹಳ್ಳಿ ಪೊಲೀಸರಿಂದ ಬಂಧನವಾಗಿ ಶಿಕ್ಷೆ ಅನುಭವಿಸಿದ್ದ. ಹೊರಬಂದ ಮೇಲೂ ಸ್ವದೇಶಕ್ಕೆ ಮರಳದೇ ಮತ್ತದೇ ಮಾದಕ ವಸ್ತು ದಂಧೆ ಮುಂದುವರಿಸಿದ್ದಾನೆ.

ಇದನ್ನೂ ಓದಿ: ಮದುವೆಗೆ ತೆರಳುತ್ತಿದ್ದ ವಾಹನ ಅಪಘಾತ: ಓರ್ವ ಮಹಿಳೆ ಸಾವು, ನಾಲ್ವರು ಗಂಭೀರ

ವಿದ್ಯಾರಣ್ಯಪುರ ವ್ಯಾಪ್ತಿಯಲ್ಲಿ ಆರೋಪಿ ಮಾದಕ ವಸ್ತುಗಳ ಮಾರಾಟ ನಡೆಸುತ್ತಿದ್ದ ಎಂಬ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, 1.5 ಲಕ್ಷ ರೂ. ಮೌಲ್ಯದ ಎಂಡಿಎಂಎ ಕ್ರಿಸ್ಟಲ್ಸ್, ಲ್ಯಾಪ್ ಟಾಪ್, ಎರಡು ಮೊಬೈಲ್ ವಶಕ್ಕೆ ಪಡೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.