ಜಮೀನಿನಲ್ಲಿ ಚಿನ್ನ ಸಿಕ್ಕಿದೆ ಎಂದು ನಕಲಿ ಚಿನ್ನ ಮಾರುತ್ತಿದ್ದ ಆರೋಪಿಗಳ ಬಂಧನ - ನಕಲಿ ಚಿನ್ನ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ತಮ್ಮ ಜಮೀನಿನಲ್ಲಿ ಚಿನ್ನ ಸಿಕ್ಕಿದೆ ಎಂದು ನಕಲಿ ಚಿನ್ನ ತೋರಿಸಿ ಮಾರಾಟ ಮಾಡಲು ಮುಂದಾಗಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು: ಅಸಲಿ ಚಿನ್ನದ ಸೋಗಿನಲ್ಲಿ ನಕಲಿ ಚಿನ್ನ ಮಾರಾಟ ಮಾಡಲು ಮುಂದಾಗಿದ್ದ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಡ್ಯದ ಸಂತೆಮಳ ಗ್ರಾಮದ ನಿವಾಸಿಗಳಾದ ಅರ್ಜುನ್ ಹಾಗೂ ಮತ್ತೊಬ್ಬ ಬಂಧಿತ ಆರೋಪಿಗಳು. ಬಂಧಿತರಿಂದ 1,298 ಗ್ರಾಂ ನಕಲಿ ಚಿನ್ನ ಹಾಗೂ ಒಂದು ಮೊಬೈಲ್ ಪೋನ್ ಜಪ್ತಿ ಮಾಡಿಕೊಳ್ಳಲಾಗಿದೆ.
ಅಸಲಿ ಚಿನ್ನದ ಸೋಗಿನಲ್ಲಿ ಎಸ್.ಜೆ. ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್ಜ್ವೊಂದರ ಬಳಿ ತಮ್ಮ ಜಮೀನಿನಲ್ಲಿ ಚಿನ್ನ ಸಿಕ್ಕಿದೆ ಎಂದು ನಕಲಿ ಚಿನ್ನ ತೋರಿಸಿ ಅಭಿಷೇಕ್ ಎಂಬುವರಿಗೆ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿಸಿಬಿ ವಿಶೇಷ ವಿಚಾರಣಾ ದಳ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಎಸ್.ಜೆ. ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.