ETV Bharat / state

ಅಂತಾರಾಷ್ಟ್ರೀಯ ಡ್ರಗ್ ಪೆಡ್ಲರ್​ಗಳ ಜೊತೆ ಸಂಪರ್ಕ : ಇಬ್ಬರು ನೈಜಿರಿಯನ್ ಪ್ರಜೆಗಳನ್ನು ಬಂಧಿಸಿದ ಸಿಸಿಬಿ - International Drug Peddler

ಮಾದಕ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದ ಆರೋಪಿ ಜಿಯೋ ಎಮಾಕೊ ನಗರದಲ್ಲಿ ಐಟಿ-ಬಿಟಿ ಉದ್ಯೋಗಿಗಳು, ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಈ ಸಂಬಂಧ ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದಾರೆ..

ccb
ಕೇಂದ್ರ ಅಪರಾಧ ವಿಭಾಗ
author img

By

Published : Oct 27, 2021, 9:23 PM IST

ಬೆಂಗಳೂರು : ಅಂತಾರಾಷ್ಟ್ರೀಯ ಡ್ರಗ್‌ ಪೆಡ್ಲರ್‌ಗಳ ಜತೆ ಸಂಪರ್ಕ ಇಟ್ಟುಕೊಂಡು ನಗರಕ್ಕೆ ಮಾದಕ ವಸ್ತುಗಳನ್ನು ತರಿಸಿ ಮಾರಾಟ ಮಾಡುತ್ತಿದ್ದ ನೈಜಿರಿಯಾ ಪ್ರಜೆಯನ್ನು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

ನೈಜಿರಿಯಾದ ಜಿಯೋ ಎಮಾಕೊ(32) ಎನ್ನುವ ಬಂಧಿತ ಆರೋಪಿಯಿಂದ 20 ಲಕ್ಷ ರೂ. ಮೌಲ್ಯದ 200 ಗ್ರಾಂ ಎಂಡಿಎಂಎ-ಎಕ್ಸ್ಟಸಿ ಮಾತ್ರೆಗಳು ಮತ್ತು 100 ಗ್ರಾಂ ಎಂಡಿಎಂಎ ಕ್ರಿಸ್ಟಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿ ಐದು ವರ್ಷಗಳ ಹಿಂದೆ ವ್ಯವಹಾರಿಕ ವೀಸಾ ಪಡೆದು ಬೆಂಗಳೂರಿಗೆ ಬಂದಿದ್ದಾನೆ. ರಾಮಮೂರ್ತಿನಗರದ ಒಎಂಬಿಆರ್ ಲೇಔಟ್‌ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ನಗರದಲ್ಲಿ ಸಣ್ಣ-ಪುಟ್ಟ ವ್ಯವಹಾರ ಮಾಡಿಕೊಂಡಿದ್ದ. ಜತೆಗೆ ಗೋವಾ ಮೂಲದ ವ್ಯಕ್ತಿಯೊಬ್ಬನಿಂದ ಡ್ರಗ್ಸ್​ಗಳನ್ನು ತರಿಸುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪೋಲೆಂಡ್ ಮೂಲದ ವ್ಯಕ್ತಿಯೊಬ್ಬ ಪೋಸ್ಟ್​ ಮೂಲಕ ಗೋವಾದಲ್ಲಿರುವ ವ್ಯಕ್ತಿಗೆ ಕಳುಹಿಸುತ್ತಿದ್ದ. ನಂತರ ಗೋವಾದಿಂದ ಬೆಂಗಳೂರು ಸೇರಿ ಭಾರತದ ಕೆಲವೊಂದು ನಗರಗಳಲ್ಲಿರುವ ಸಬ್ ಪೆಡ್ಲರ್‌ಗಳಿಗೆ ಸರಬರಾಜು ಮಾಡುತ್ತಿದ್ದ ಎಂಬುದನ್ನು ಆರೋಪಿ ವಿಚಾರಣೆಯಲ್ಲಿ ಹೇಳಿಕೆ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾದಕ ವಸ್ತುಗಳನ್ನು ತರಿಸಿಕೊಳ್ಳುತ್ತಿದ್ದ ಆರೋಪಿ ಜಿಯೋ ಎಮಾಕೊ ನಗರದಲ್ಲಿ ಐಟಿ-ಬಿಟಿ ಉದ್ಯೋಗಿಗಳು, ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ. ಈ ಸಂಬಂಧ ರಾಮಮೂರ್ತಿನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೇಳಿದ್ದಾರೆ.

ಓದಿ: ಮಂಡ್ಯ: ಮಾರಕಾಸ್ತ್ರಗಳಿಂದ ಕೊಚ್ಚಿ ಆಟೋ ಚಾಲಕನ ಹತ್ಯೆ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.