ETV Bharat / state

ಬೆಂಗಳೂರಿನ ಪಬ್​ಗಳ ಮೇಲೆ ಸಿಸಿಬಿ ದಾಳಿ: ಅಪ್ರಾಪ್ತ ಗ್ರಾಹಕರೇ ಅಧಿಕ - ಸಿಸಿಬಿ ಅಧಿಕಾರಿಗಳು

CCB ride on pubs: ಕಾಲೇಜು ಮುಖ್ಯಸ್ಥರಿಂದ ಬಂದ ದೂರಿನ ಹಿನ್ನೆಲೆ ದಾಳಿ ನಡೆಸಿದ ಸಿಸಿಬಿ.

CCB attack on pubs in Bengaluru
ಬೆಂಗಳೂರಿನ ಪಬ್​ಗಳ ಮೇಲೆ ಸಿಸಿಬಿ ದಾಳಿ
author img

By ETV Bharat Karnataka Team

Published : Sep 9, 2023, 12:47 PM IST

Updated : Sep 9, 2023, 3:21 PM IST

ನಗರ ಪೊಲೀಸ್ ಆಯುಕ್ತ ಬಿ ದಯಾನಂದ್

ಬೆಂಗಳೂರು: ಸಿಲಿಕಾನ್ ಸಿಟಿಯ ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ಹುಕ್ಕಾ ಬಾರ್​ಗಳ ಮೇಲೆ ತಡರಾತ್ರಿ ಸಿಸಿಬಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕೋರಮಂಗಲ, ಇಂದಿರಾನಗರ, ಹೆಚ್ಎಸ್ಆರ್ ಲೇಔಟ್, ಬಾಣಸವಾಡಿ, ಹೆಣ್ಣೂರು ಸೇರಿದಂತೆ ನಗರದ ಹಲವು ಕಡೆ ದಾಳಿ ನಡೆಸಲಾಗಿದೆ.

ದಾಳಿ ವೇಳೆ ಸುಮಾರು ಕಡೆಗಳಲ್ಲಿ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಅಬಕಾರಿ ನಿಯಮಗಳನ್ನು ಉಲ್ಲಂಘಿಸುವ ಮೂಲಕ ಅಪ್ರಾಪ್ತ ವಯಸ್ಸಿನವರಿಗೆ ಧೂಮಪಾನಕ್ಕೆ ಅವಕಾಶ, ಮದ್ಯ ಸರಬರಾಜು ಮಾಡುತ್ತಿರುವುದು ಕಂಡು ಬಂದಿದೆ. ಇದೇ ಸಂದರ್ಭದಲ್ಲಿ ಪಬ್ ಒಂದರಲ್ಲಿ ಪತ್ತೆಯಾದ ಅಪ್ರಾಪ್ತರು ನಾವು ಶಾಸಕರ ಕಡೆಯವರು, ಕಿರುತೆರೆ ಕಲಾವಿದರು ಎಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಪ್ರಸಂಗವೂ ನಡೆದಿದೆ.

ನಾಲ್ಕು ಕಡೆಗಳಲ್ಲಿ ಪಬ್ ಮಾಲೀಕರ ವಿರುದ್ಧ ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಅಬಕಾರಿ ನಿಯಮಗಳ ಉಲ್ಲಂಘನೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ತಿಳಿಸಿದ್ದಾರೆ.

ನಗರದ ಕೆಲವೆಡೆ ಕಾಲೇಜು ವಿದ್ಯಾರ್ಥಿಗಳು ಪಬ್, ಬಾರ್ ಆ್ಯಂಡ್ ರೆಸ್ಟೋರೆಂಟ್ ಮತ್ತು ಹುಕ್ಕಾ ಬಾರ್​ಗಳತ್ತ ಹೋಗುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕಿ ಎಂದು ಕೆಲ ಕಾಲೇಜು ಮುಖ್ಯಸ್ಥರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅವರಿಗೆ ದೂರು ನೀಡಿದ್ದರು. ದೂರನ್ನು ಗಂಭೀರವಾಗಿ ಪರಿಗಣಿಸಿದ ಆಯುಕ್ತರ ಸೂಚನೆಯ ಮೇರೆಗೆ ಸಿಸಿಬಿ ಪೊಲೀಸರು ತಡರಾತ್ರಿ ದಾಳಿ ನಡೆಸಿದ್ದರು.

ಇದನ್ನೂ ಓದಿ : ಕೋಲಾರ: ಕೆಜಿಎಫ್‌ನಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಯುಪಿ ಮೂಲದ ಆರೋಪಿಗಳಿಬ್ಬರ ಬಂಧನ

Last Updated : Sep 9, 2023, 3:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.