ಬೆಂಗಳೂರು: ಸ್ಯಾಂಡಲ್ವುಡ್ಗೆ ಡ್ರಗ್ಸ್ ಮಾಫಿಯಾ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು, ಆರೋಪಿಗಳು ಪಾರ್ಟಿ ಮಾಡಿದ್ದ ಹೋಟೆಲ್, ಪಬ್, ರೆಸಾರ್ಟ್ಗಳಿಗೆ ನೋಟಿಸ್ ಜಾರಿ ಮಾಡಿ ಶಾಕ್ ನೀಡಿದ್ದಾರೆ. ನಗರದಲ್ಲಿರುವ ಹಲವಾರು ಪ್ರತಿಷ್ಠಿತ ಸ್ಟಾರ್ ಹೋಟೆಲ್ಗಳಲ್ಲಿ ನಟಿ ರಾಗಿಣಿ, ಸಂಜನಾ ಹಾಗೂ ಪಾರ್ಟಿ ಆಯೋಜಕ ವಿರೇನ್ ಖನ್ನಾ ಹಲವಾರು ಮಂದಿಯನ್ನ ಸೇರಿಸಿ ತಡರಾತ್ರಿಯವರೆಗೆ ಪಾರ್ಟಿ ಮಾಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಸದ್ಯ ಆರೋಪಿಗಳು ಪಾರ್ಟಿ ಮಾಡಿರುವ ಪ್ರತಿಯೊಂದು ಸಿಸಿಟಿವಿ ಫೂಟೇಜ್ಗಳನ್ನ ನೀಡುವಂತೆ ಹೋಟೆಲ್, ಪಬ್, ರೆಸಾರ್ಟ್ ಸಿಬ್ಬಂದಿಗೆ ತಿಳಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದ ದಿನದಿಂದ ಯಾವುದೇ ಹೋಟೆಲ್ಗಳಾಗಲಿ, ಪಬ್ಗಳಾಗಲಿ ಪ್ರಕರಣಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗಳನ್ನು ಸಿಸಿಬಿಗೆ ಕೊಟ್ಟಿಲ್ಲ. ಹೀಗಾಗಿ ಪೊಲೀಸರು ಆದಷ್ಟು ಬೇಗ ತಂದು ಕೊಡುವಂತೆ ಖಡಕ್ ಎಚ್ಚರಿಕೆ ನೀಡಿದ್ದು, ಇದರಿಂದ ಅನೇಕರ ಬಣ್ಣ ಬಯಲಾಗುವ ಸಾಧ್ಯತೆ ಇದೆ.
ಈಗಾಗಲೇ ತನಿಖೆ ವೇಳೆ ಆರೋಪಿಗಳು ಪ್ರತಿಷ್ಠಿತ ಸ್ಟಾರ್ ಹೋಟೆಲ್ಗಳಲ್ಲಿ ಪಾರ್ಟಿ ಮಾಡಿ ಡ್ರಗ್ಸ್ ಸೇವನೆ ಹಾಗೂ ಸೇಲ್ ಮಾಡಿರುವ ವಿಚಾರ ಬಾಯಿ ಬಿಟ್ಟಿದ್ದಾರೆ. ಹೀಗಾಗಿ ಸಿಸಿಬಿ ಅಧಿಕಾರಿಗಳು ನೀಡಿರುವ ನೋಟಿಸ್ಗೆ ಹೋಟೆಲ್, ಪಬ್ನವರು ಉತ್ತರ ನೀಡುವುದು ಅನಿವಾರ್ಯವಾಗಿದೆ.