ETV Bharat / state

ಮಾಜಿ ಮೇಯರ್ ಸಂಪತ್ ರಾಜ್​ಗೆ ಸಿಸಿಬಿ ನೋಟಿಸ್: ವಿಚಾರಣೆಗೆ ಹಾಜರಾಗೋದು ಬಹುತೇಕ ಡೌಟ್​! - ಸಂಪತ್ ರಾಜ್​ಗೆ ಸಿಸಿಬಿ ನೋಟಿಸ್

ಬೆಂಗಳೂರು ಗಲಭೆ ಪ್ರಕರಣ ಸಂಬಂಧ ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗಲು ಮಾಜಿ‌ ಮೇಯರ್ ಸಂಪತ್ ರಾಜ್​ಗೆ ನೋಟಿಸ್ ನೀಡಲಾಗಿತ್ತು. ಆದರೆ ಕೊರೊನಾ‌ ಹಿನ್ನೆಲೆಯಲ್ಲಿ ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆಗೆ ದಾಖಲಾಗಿರುವುದರಿಂದ ನಾಳೆ ವಿಚಾರಣೆಗೆ ಗೈರಾಗುವ ಸಾಧ್ಯತೆಯಿದೆ. ಹೀಗಾಗಿ ಸಿಸಿಬಿ ಪೊಲೀಸರು ಮತ್ತೊಂದು ದಿನ ನೋಟಿಸ್ ನೀಡಿ ವಿಚಾರಣೆಗೆ ಕರೆಸಿಕೊಳ್ಳಲಿದ್ದಾರೆ.

Sampath Raj
ಸಂಪತ್ ರಾಜ್
author img

By

Published : Sep 17, 2020, 5:56 PM IST

ಬೆಂಗಳೂರು: ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ ಸಂಬಂಧ ಮಾಜಿ‌ ಮೇಯರ್ ಸಂಪತ್ ರಾಜ್​ಗೆ ಸಿಸಿಬಿ ಮತ್ತೆ ನೋಟಿಸ್ ಜಾರಿ ಮಾಡಿದೆ. ಆದರೆ ಮಾಜಿ ಮೇಯರ್​ಗೆ ಕೊರೊನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾಳೆ ವಿಚಾರಣೆಗೆ ಹಾಜರಾಗುವುದು ಬಹುತೇಕ ಅನುಮಾನವಾಗಿದೆ.

ನಿನ್ನೆ ನೋಟಿಸ್ ನೀಡಲು ಮನೆ ಬಳಿ ಸಿಸಿಬಿ ಪೊಲೀಸರು ಹೋಗಿದ್ದರು. ಆದರೆ ಸಂಪತ್ ರಾಜ್ ಮನೆಯಲ್ಲಿ ಇಲ್ಲದ ಕಾರಣಕ್ಕೆ ವಾಪಸ್ ಬಂದು ವಾಟ್ಸಾಪ್ ಮೂಲಕ ನೋಟಿಸ್ ಕಳುಹಿಸಿದ್ದರು. ನೋಟಿಸ್ ನೀಡಿದ್ದರೂ ಸಂಪತ್ ರಾಜ್ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಾಗಿತ್ತು. ಆದರೆ ಕೊರೊನಾ‌ ಹಿನ್ನೆಲೆಯಲ್ಲಿ ಹೆಬ್ಬಾಳದ ಬ್ಯಾಪಿಸ್ಟ್ ಆಸ್ಪತ್ರೆಗೆ ದಾಖಲಾಗಿರುವುದರಿಂದ ನಾಳೆ ವಿಚಾರಣೆಗೆ ಗೈರಾಗುವ ಸಾಧ್ಯತೆಯಿದೆ. ಹೀಗಾಗಿ ಸಿಸಿಬಿ ಪೊಲೀಸರು ಮತ್ತೊಂದು ದಿನ ನೋಟಿಸ್ ನೀಡಿ ವಿಚಾರಣೆಗೆ ಕರೆಸಿಕೊಳ್ಳಲಿದ್ದಾರೆ.

ಗಲಭೆ ಪ್ರಕರಣದಲ್ಲಿ ಕಳೆದ ಆಗಸ್ಟ್ 18ರಂದು ಸಂಪತ್ ರಾಜ್ ಹಾಗೂ ಫ್ರೇಜರ್ ಟೌನ್ ವಾರ್ಡ್ ಕಾರ್ಪೋರೇಟರ್ ಜಾಕೀರ್ ಹುಸೇನ್​ಗೆ ಸಿಸಿಬಿ ತನಿಖಾಧಿಕಾರಿಗಳು ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಒಳಪಡಿಸಿದ್ದರು. ಈ ವೇಳೆ ಸಂಪತ್ ರಾಜ್ ಬಳಸುತ್ತಿದ್ದ ಐಫೋನ್ ವಶಕ್ಕೆ‌ ಪಡೆದುಕೊಂಡಿದ್ದರು.‌ ರಿಟ್ರೈವ್​ಗಾಗಿ ತಿರುವನಂತಪುರದಲ್ಲಿರುವ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ‌ಇದರ ವರದಿ ಇನ್ನಷ್ಟೇ ಬರಬೇಕಿದೆ.

ಶಾಸಕ ಅಖಂಡ ಶ್ರೀನಿವಾಸ್ ಸಂಬಂಧಿ ನವೀನ್, ಧರ್ಮವೊಂದರ ಪ್ರವಾದಿ ವಿರುದ್ಧ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ. ಇದರಿಂದ ಅಸಮಾಧಾನಗೊಂಡ ಗಲಭೆಕೋರರು ಕಾವಲ್ ಬೈರಸಂದ್ರದಲ್ಲಿರುವ ಶಾಸಕರ ಮ‌ನೆ, ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಠಾಣೆಗಳನ್ನು ಧ್ವಂಸಗೊಳಿಸಿದ್ದರು. ಗಲಭೆ ಹಿಂದೆ ಸಂಪತ್ ರಾಜ್ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ರಾಜಕೀಯ ವೈಷಮ್ಯ ಹಿನ್ನೆಲೆಗೆ ಗಲಭೆಗೆ ಪ್ರಚೋದನೆ ನೀಡಿದ ಆರೋಪವಿದೆ‌. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಂಪತ್ ರಾಜ್ ಪುಲಕೇಶಿ ನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು‌. ಪ್ರಕರಣದಲ್ಲಿ ಮಾಜಿ ಮೇಯರ್ ಆಪ್ತ ಅರುಣ್​ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.