ಬೆಂಗಳೂರು: ಡಕಾಯಿತಿಗೆ ಹೊಂಚು ಹಾಕಿದ್ದ ಮೂವರು ರೌಡಿಶೀಟರ್ಗಳು ಸೇರಿದಂತೆ ಆರು ಜನರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ರೌಡಿಶೀಟರ್ಗಳಾದ ಪ್ರವೀಣ ,ವಿನೋದ್, ಶರವಣ, ನಾಗೇಂದ್ರ, ಪವನ್, ದಿಲೀಪ್ ಎಂಬುವವರನ್ನು ಸಿಸಿಬಿ ಬಂಧಿಸಿದೆ. ಈ ಗ್ಯಾಂಗ್ ಹೆಚ್ಎಎಲ್ ಠಾಣಾ ವ್ಯಾಪ್ತಿಯಲ್ಲಿ ದರೋಡೆ ಮಾಡಲು ಸಜ್ಜಾಗಿತ್ತು. ಈ ಕುರಿತಂತೆ ಖಚಿತ ಮಾಹಿತಿ ಪಡೆದ ಸಿಸಿಬಿ, ಆರೋಪಿಗಳನ್ನು ಬಂಧಿಸಿ ಅವರಿಂದ ಮಾರಾಕಾಸ್ತ್ರಗಳನ್ನು ವಶಕ್ಕೆ ಪಡೆದಿದೆ.
ಓದಿ: ರೆಪೋ ದರದಲ್ಲಿ ಮತ್ತೆ ಯಥಾಸ್ಥಿತಿ ಕಾಯ್ದಿರಿಸಿದ ಆರ್ಬಿಐ..
ಈ ಸಂಬಂಧ ಹೆಚ್ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.