ಬೆಂಗಳೂರು: ಸ್ಪಾ ಮತ್ತು ಸಲೂನ್ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಮಹಿಳೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸ್ಪಾದಲ್ಲಿದ್ದ ಇತರೆ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಸ್ವಪ್ನ ಬಂಧಿತ ಆರೋಪಿಯಾಗಿದ್ದು, ಯೂನಿಕ್ಸ್ ಸ್ಪಾ ಆ್ಯಂಡ್ ಸಲೂನ್ನಲ್ಲಿ ಮಹಿಳೆಯರನ್ನಿಟ್ಟುಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದಳು ಎನ್ನಲಾಗ್ತಿದೆ. ಈ ಬಗ್ಗೆ ಹಲವರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ, ಇಬ್ಬರು ಮಹಿಳೆಯರನ್ನು ರಕ್ಷಣೆ ಮಾಡಿದ್ದಾರೆ.
ಬಂಧಿತೆಯಿಂದ ಒಂದು ಮೊಬೈಲ್, ಒಂದು ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.