ಬೆಂಗಳೂರು: ಬ್ರಿಗೇಡ್ ರಸ್ತೆ, ಬಂಬೂ ಬಜಾರ್ ಹಾಗೂ ಕಲಾಸಿಪಾಳ್ಯದಲ್ಲಿ ಕಾರ್ಯಾಚರಣೆ ನಡೆಸಿ, ಮಟ್ಕಾ ದಂಧೆ ನಡೆಸುತ್ತಿದ್ದ ಐವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಿಸಿಬಿ ಹೆಚ್ಚುವರಿ ಆಯುಕ್ತ ಸಂದೀಪ್ ಪಾಟೀಲ್ ಹಾಗೂ ಸಿಸಿಬಿ ಅಧಿಕಾರಿ ರವಿ ಅವರ ನೇತೃತ್ವದಲ್ಲಿ ದಾಳಿ ನಡೆಸಿದಾಗ, ಹಲವಾರು ಅಕ್ರಮ ಚಟುವಟಿಕೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಈಹಿನ್ನೆಲೆಯಲ್ಲಿ COTPA ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಅಧಿಕಾರಿಗಳು, ಹುಕ್ಕಾ ಬಾರ್ ಬಾಕ್ಸ್, ಪಾಟ್ಸ್ ಪೈಪ್ ಸೇರಿದಂತೆ ಒಟ್ಟು 1 ಲಕ್ಷದ 78 ಸಾವಿರ ನಗದು ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.