ಬೆಂಗಳೂರು: ಕೊರೊನಾ ಸೋಂಕಿನಿಂದಾಗಿ ಸ್ಥಗಿತಗೊಂಡ ಅಂತಾರಾಷ್ಟ್ರೀಯ ಕ್ರಿಕೆಟ್ ಆರಂಭವಾಗಿದ್ದು, ಸಿಸಿಬಿ ಪೊಲೀಸರು ಸದ್ಯ ಕ್ರಿಕೆಟ್ ಬುಕ್ಕಿಗಳ ಮೇಲೆ ಕಣ್ಣಿಟ್ಟಿದ್ದಾರೆ.
ನಿನ್ನೆಯಿಂದ ಇಂಗ್ಲೆಂಡ್ ಮತ್ತು ವೆಸ್ಟ್ಇಂಡೀಸ್ ಮೊದಲ ಟೆಸ್ಟ್ ಆರಂಭವಾಗಿದ್ದು, ಈ ಸಮಯದಲ್ಲಿ ಕ್ರಿಕೆಟ್ ಬೆಟ್ಟಿಂಗ್ ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇಷ್ಟು ದಿನ ಯಾವುದೇ ಕ್ರಿಕೆಟ್ ಮ್ಯಾಚ್ಗಳಿಲ್ಲದೇ ಬುಕ್ಕಿಗಳು ಸೈಲೆಂಟ್ ಆಗಿದ್ದರು. ಸದ್ಯ ಹಳೇ ಬುಕ್ಕಿಗಳು ಬೆಟ್ಟಿಂಗ್ ದಂಧೆ ನಡೆಸುವ ಸಾಧ್ಯತೆ ಇದೆ. ಅಷ್ಟು ಮಾತ್ರವಲ್ಲದೇ ಕೆಲವರು ಕೊರೊನಾದಿಂದಾಗಿ ಕೆಲಸ ಕಳೆದುಕೊಂಡಿದ್ದಾರೆ. ಹೀಗಾಗಿ ಮೊಬೈಲ್ ಮೂಲಕವೇ ಬೆಟ್ಟಿಂಗ್ ನಡೆಸುವ ಸಾಧ್ಯತೆ ಇದೆ. ಸದ್ಯ ಒಂದು ವೇಳೆ ಬೆಟ್ಟಿಂಗ್ ನಡೆಸಿದರೆ ಸಿಸಿಬಿ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.
ಮಾ.13 ರಂದು ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್ ನಡುವೆ ಪಂದ್ಯ ನಡೆದಿತ್ತು. ತದ ನಂತರ ಕೊರೊನಾ ಇರುವ ಕಾರಣ ಸ್ಥಗಿತವಾಗಿತ್ತು. ಆ ಬಳಿಕ ಇದೇ ಮೊದಲ ಬಾರಿಗೆ ನಿನ್ನೆಯಿಂದ ಅಂತಾರಾಷ್ಟ್ರೀಯ ಪಂದ್ಯ ಶುರುವಾಗಿದೆ.