ಬೆಂಗಳೂರು: ಕೆಪಿಎಲ್ ಮ್ಯಾಚ್ ಫಿಕ್ಸಿಂಗ್ ಪ್ರಕರಣ ಅಗೆದಷ್ಟು ಆಳವಾಗುತ್ತಾ ಹೋಗುತ್ತಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿವಿಧ ಆಟಗಾರರು, ತಂಡದ ಮಾಲೀಕರ ಬಂಧನದ ಬಳಿಕ ಇದೀಗ ಕರ್ನಾಟಕ ರಾಜ್ಯ ಕ್ರಿಕಿಟ್ ಅಸೋಸಿಯೇಷನ್ ಕಾರ್ಯದರ್ಶಿ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದ ಸಿಸಿಬಿ ಪೊಲೀಸರು ಬೆಳಂಬೆಳಗ್ಗೆಯೇ ಕೆಎಸ್ಸಿಎ ಕಾರ್ಯದರ್ಶಿ ಮನೆ ಮೇಲೆ ದಾಳಿ ನಡೆಸಿ, ಹಲವು ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಮ್ಯಾಚ್ ಫಿಕ್ಸಿಂಗ್ ಪ್ರಕರಣ ಸಂಂಬಂಧ ನಿನ್ನೆಯಷ್ಟೇ ಬಳ್ಳಾರಿ ಟರ್ಸ್ಕಸ್ ತಂಡದ ಮಾಲೀಕ ಅರವಿಂದ್ ರೆಡ್ಡಿಯನ್ನು ಸಿಸಿಬಿ ಕಚೇರಿಗೆ ಕರೆಯಿಸಿ ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು.