ಬೆಂಗಳೂರು: ಆ್ಯಪಲ್, ಒನ್ ಪ್ಲಸ್ ಸೇರಿದಂತೆ ಪ್ರತಿಷ್ಠಿತ ಕಂಪನಿಗಳ ನಕಲಿ ಎಲೆಕ್ಟ್ರಾನಿಕ್ ಬಿಡಿಭಾಗಗಳನ್ನ ಅಸಲಿಯೆಂದು ಮಾರಾಟ ಮಾಡುತ್ತ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿ ಖದೀಮರ ಜಾಲದ ಬಣ್ಣ ಕೊನೆಗೂ ಬಯಲಾಗಿದೆ. ಗ್ರಾಹಕರನ್ನು ವಂಚಿಸುತ್ತಿದ್ದ ಐದು ಅಂಗಡಿಗಳ ಮೇಲೆ ಇಂದು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಎಸ್.ಜೆ ಪಾರ್ಕ್ ಹಾಗೂ ಹಲಸೂರು ಗೇಟ್ ಠಾಣಾ ವ್ಯಾಪ್ತಿಯ ಐದು ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದ್ದು, ಪ್ರತಿಷ್ಠಿತ ಬ್ರ್ಯಾಂಡ್‌ನ ಹೆಸರಿನಲ್ಲಿ ನಕಲಿ ವಸ್ತುಗಳನ್ನ ಮಾರಾಟ ಮಾಡುತ್ತ ಗ್ರಾಹಕರಿಗೆ ಮಂಕುಬೂದಿ ಎರಚುತ್ತಿರುವುದು ಬೆಳಕಿಗೆ ಬಂದಿದೆ.
ದಾಳಿ ವೇಳೆ ಲಕ್ಷಾಂತರ ರೂಪಾಯಿ ಮೌಲ್ಯದ ನಕಲಿ ಬಿಡಿಭಾಗಗಳನ್ನ ವಶಕ್ಕೆ ಪಡೆಯಲಾಗಿದ್ದು, ಅಂಗಡಿಯ ಸಿಬ್ಬಂದಿಯನ್ನ ವಶಕ್ಕೆ ಪಡೆದಿರುವ ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಹೆಚ್ಡಿಕೆ, ಹೆಚ್ಡಿಡಿ ಅವರಿಗೆ ಅವಕಾಶ ನೀಡಿದ್ದೀರಿ, ನನಗೂ ನೀಡಿ: ಸಮುದಾಯಕ್ಕೆ ಡಿಕೆಶಿ ಮನವಿ