ಬೆಂಗಳೂರು: ಗ್ಯಾಸ್ ಸಿಲಿಂಡರ್ಗಳನ್ನು ಅಕ್ರಮವಾಗಿ ರೀಫಿಲ್ಲಿಂಗ್ ಮಾಡುತ್ತಿದ್ದ ಅಡ್ಡೆಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ರಾಜು, ಅಮರ್ ಲಕ್ಷಯ್ಯ, ವಿನಯ್, ಪ್ರಕಾಶ್, ತಿಮ್ಮಪ್ಪ ಬಂಧಿತ ಆರೋಪಿಗಳು. ಲಾಕೌಡೌನ್ ಹಿನ್ನೆಲೆಯಲ್ಲಿ ಬಹುತೇಕರು ಮನೆಯಲ್ಲಿದ್ದು, ಗ್ಯಾಸ್ ಸಿಲಿಂಡರ್ ಬಳಕೆ ಹೆಚ್ಚಾಗಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ಆರೋಪಿಗಳು, ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ರೀಫಿಲ್ಲಿಂಗ್ ಮಾಡಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದರು.
ಈ ಕುರಿತಂತೆ ಖಚಿತ ಮಾಹಿತಿ ಪಡೆದ ಸಿಸಿಬಿ ಅಧಿಕಾರಿಗಳು, ಡಿಸಿಪಿ ರವಿಕುಮಾರ್ ಒಳಗೊಂಡ ತಂಡ ಪೀಣ್ಯ, ಕೆಂಗೇರಿ, ಕಾಮಾಕ್ಷಿಪಾಳ್ಯ, ವಿಜಯನಗರ, ಆರ್ಆರ್ ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. 3,73,150 ರೂ. ಬೆಲೆ ಬಾಳುವ 384 ಸಿಲಿಂಡರ್, ರೀಫಿಲ್ಲಿಂಗ್ ರಾಡ್, ತೂಕದ ಯಂತ್ರ ವಶಪಡಿಸಿಕೊಂಡಿದ್ದಾರೆ.