ಬೆಂಗಳೂರು: ನಿಷೇಧಿತ ಇ-ಸಿಗರೇಟ್ ಮಾರಾಟ ಮಾಡುತ್ತಿದ್ದ ಅಡ್ಡೆಗಳ ಮೇಲೆ ಸಿಸಿಬಿ ಪೊಲೀಸರು ತಡರಾತ್ರಿ ದಾಳಿ ನಡೆಸಿದ್ದಾರೆ. ಕೋರಮಂಗಲ, ಬಾಣಸವಾಡಿ, ಪುಲಕೇಶಿನಗರ ಠಾಣಾ ವ್ಯಾಪ್ತಿಯಲ್ಲಿನ ಅಂಗಡಿಗಳಲ್ಲಿ ಇ-ಸಿಗರೇಟ್ ಮಾರಾಟ ನಡೆಯುತ್ತಿತ್ತು. ಕೇರಳ ಮೂಲದ ಆರೋಪಿಗಳು ವಿದೇಶದಿಂದ ಉತ್ಪನ್ನಗಳನ್ನು ಅಮದು ಮಾಡಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಪ್ರಕರಣದಲ್ಲಿ ಕೆಲವರನ್ನು ವಶಕ್ಕೆ ಪಡೆಯಲಾಗಿದ್ದು 50 ಲಕ್ಷ ರೂ.ಗೂ ಅಧಿಕ ಮೌಲ್ಯದ ಇ-ಸಿಗರೇಟ್ ಜಪ್ತಿ ಮಾಡಲಾಗಿದೆ. ಪುಲಕೇಶಿ ನಗರ, ಬಾಣಸವಾಡಿ ಹಾಗೂ ಕೋರಮಂಗಲ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಹೋಟೆಲ್ನಲ್ಲಿ ಬೀಫ್ ಬಿರಿಯಾನಿ ಮಾರಾಟ ಆರೋಪ: ಪೊಲೀಸ್ ಜೊತೆ ಹಿಂಜಾವೇ ದಾಳಿ