ಬೆಂಗಳೂರು: ಅಧಿಕ ಬಡ್ಡಿ ಆಮಿಷವೊಡ್ಡಿ ಗ್ರಾಹಕರಿಗೆ ವಂಚಿಸಿರುವ ಆರೋಪದಡಿ ವಿಲ್ಸನ್ ಗಾರ್ಡನ್‌ನ ಶುಶೃತಿ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಪ್ರಕರಣಗಳು ದಾಖಲಾಗಿವೆ. ಈ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ಬ್ಯಾಂಕ್ ನಿರ್ದೇಶಕ, ಕೇಂದ್ರ ಕಚೇರಿ ಹಾಗೂ ವಿವಿಧ ಬ್ರಾಂಚ್ಗಳ ಮೇಲೆ ದಾಳಿ ನಡೆಸಿದ್ದು, ಶೋಧ ಕಾರ್ಯ ಮುಂದುವರೆದಿದೆ.
ವಿಲ್ಸನ್ ಗಾರ್ಡನ್, ಪೀಣ್ಯ, ರಾಜಗೋಪಾಲನಗರ, ಚಿಕ್ಕಚಾಲ ಸೇರಿದಂತೆ ನಗರದ ಹದಿನಾಲ್ಕು ಕಡೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಐವರು ಎಸಿಪಿ, ಹದಿನಾಲ್ಕು ಇನ್ಸ್ಪೆಕ್ಟರ್ ಸೇರಿ ಅರವತ್ತಕ್ಕೂ ಹೆಚ್ಚು ಪೊಲೀಸರ ತಂಡ ಕಾರ್ಯಾಚರಣೆಗಿಳಿದಿದೆ.
ಇದನ್ನೂ ಓದಿ: ಬೆಂಗಳೂರಿನ ಶುಶೃತಿ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ವಂಚನೆ ಆರೋಪ.. ದೂರು ದಾಖಲು
ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ ವಿರುದ್ಧ ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು. ಎಲ್ಲಾ ಕೇಸ್ಗಳನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಈಗಾಗಲೇ ಚೇರ್ಮನ್ ಶ್ರೀನಿವಾಸ ಮೂರ್ತಿ ಸೇರಿ ಹಲವರನ್ನು ಬಂಧಿಸಲಾಗಿದೆ.