ETV Bharat / state

ಸಂಜನಾ ಗಲ್ರಾನಿ ಆಪ್ತ ರಾಹುಲ್​ ಸಿಸಿಬಿ ವಶಕ್ಕೆ: ಅಧಿಕಾರಿಗಳಿಂದ ವಿಚಾರಣೆ - Rahul Investigation

ಸಂಜನಾ ಗಲ್ರಾನಿ ಆಪ್ತ ರಾಹುಲ್ ಸಿಸಿಬಿ ವಶದಲ್ಲಿದ್ದು, ನಗರ ಪೊಲೀಸ್​ ಆಯುಕ್ತ ಕಮಲ್ ಪಂಥ್, ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಹಾಗೂ ಡಿಸಿಪಿ ರವಿಯವರು ವಿಚಾರಣೆ ನಡೆಸುತ್ತಿದ್ದಾರೆ.

ಸಂಜನಾ ಗಲ್ರಾನಿ ಆಪ್ತ ರಾಹುಲ್​
ಸಂಜನಾ ಗಲ್ರಾನಿ ಆಪ್ತ ರಾಹುಲ್​
author img

By

Published : Sep 3, 2020, 6:02 PM IST

ಬೆಂಗಳೂರು: ನಟಿ ಸಂಜನಾ ಗಲ್ರಾನಿ ಆಪ್ತ ರಾಹುಲ್ ಸಿಸಿಬಿ ವಶದಲ್ಲಿದ್ದು, ಸದ್ಯ ನಗರ ಪೊಲೀಸ್​ ಆಯುಕ್ತ ಕಮಲ್ ಪಂಥ್, ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ಹಾಗೂ ಡಿಸಿಪಿ ರವಿಯವರು ವಿಚಾರಣೆ ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನು ಈತನನ್ನು ಪೊಲಿಸ್​ ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ.

ರಾಹುಲ್ ಎಂಜಿ ರೋಡ್​ನ ಪಕ್ಕದಲ್ಲಿ ಕ್ಯಾಸಿನೋ ನಡೆಸುತ್ತಿದ್ದ. ಇನ್ನು ಈತ ದೊಡ್ಡ ಮಟ್ಟದ ಪಾರ್ಟಿಗಳನ್ನು ನಡೆಸುತ್ತಿದ್ದು, ಈ ಪಾರ್ಟಿಗಳಲ್ಲಿ ನಟ-ನಟಿಯರು ಭಾಗಿಯಾಗುತ್ತಿದ್ದರು ಎಂದು ತಿಳಿದುಬಂದಿದೆ. ಸಂಜನಾ ಮನೆಗೆ ಹೆಚ್ಚಾಗಿ ರಾಹುಲ್​ ಭೇಟಿ ನೀಡುತ್ತಿದ್ದನಂತೆ. ಅಷ್ಟೇ ಅಲ್ಲದೆ, ಈತ ನಡೆಸುತ್ತಿದ್ದ ಪಾರ್ಟಿಗಳಲ್ಲಿ ಡ್ರಗ್​ ಸಪ್ಲೈ ಆಗುತ್ತಿತ್ತು ಎಂಬ ಮಾಹಿತಿ ಸದ್ಯ ಲಭ್ಯವಾಗಿದೆ.

ರಾಹುಲ್ ವಿಚಾರಣೆ ನಡೆಸಿದ ಬಳಿಕ, ಆತನ ಹೇಳಿಕೆ ಆಧರಿಸಿ ನಟಿ ಸಂಜನಾಗೆ ಸಿಸಿಬಿ ನೋಟಿಸ್ ಜಾರಿ ಮಾಡಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.