ETV Bharat / state

ಗೂಗಲ್ ವಿರುದ್ಧ ಸಿಸಿಐ ತನಿಖೆ : ಜ.5ರವರೆಗೆ ಬಲವಂತದ ಕ್ರಮ ಜರುಗಿಸುವುದಿಲ್ಲವೆಂದು ಹೈಕೋರ್ಟ್​ಗೆ ಭರವಸೆ - Indian Competition Commission

ಸಿಸಿಐ ಪರ ವಾದ ಮಂಡಿಸಿದ ಅಡಿಷನಲ್ ಸಾಲಿಸಿಟರ್ ಜನರಲ್ ಎನ್. ವೆಂಕಟರಾಮನ್ ಸಿಸಿಐ ಕ್ರಮವನ್ನು ಸಮರ್ಥಿಸಿದರು. ಅಲ್ಲದೇ, ಮುಂದಿನ ವಿಚಾರಣೆವರೆಗೂ ಗೂಗಲ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸುವುದಿಲ್ಲ ಎಂದು ಭರವಸೆ ನೀಡಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ವಿಚಾರಣೆಯನ್ನು ಜನವರಿ 5ಕ್ಕೆ ಮುಂದೂಡಿತು..

High Court
ಹೈಕೋರ್ಟ್
author img

By

Published : Dec 29, 2021, 7:32 PM IST

ಬೆಂಗಳೂರು : ಪ್ಲೇ ಸ್ಟೋರ್‌ ನಿಯಮಗಳ ಕುರಿತು ತನಿಖೆ ವಿಚಾರಕ್ಕೆ ಸಂಬಂಧಿಸಿದಂತೆ ತಂತ್ರಜ್ಞಾನ ದೈತ್ಯ ಸಂಸ್ಥೆ ಗೂಗಲ್‌ ವಿರುದ್ದ ಜನವರಿ 5ರವರೆಗೆ ಯಾವುದೇ ಬಲವಂತದ ಕ್ರಮ ಜರುಗಿಸುವುದಿಲ್ಲ ಎಂದು ಭಾರತೀಯ ಸ್ಪರ್ಧಾ ಆಯೋಗ (ಸಿಸಿಐ) ಹೈಕೋರ್ಟ್‌ಗೆ ಭರವಸೆ ನೀಡಿದೆ.

ಸಿಸಿಐ ತನಿಖೆಗೆ ಉತ್ತರಿಸಲು ಕಾಲಾವಕಾಶ ಕೋರಿ ಹಾಗೂ ತನಿಖೆಯ ವಿಷಯಕ್ಕೆ ಸಂಬಂಧಿಸಿದಂತೆ ಕೆಲ ನಿರ್ದೇಶನಗಳನ್ನು ಕೋರಿ ಗೂಗಲ್ ಸಲ್ಲಿಸಿರುವ ರಿಟ್ ಅರ್ಜಿಯನ್ನು ಇಂದು ನ್ಯಾಯಮೂರ್ತಿ ಬಿ.ಎಂ ಶ್ಯಾಮ್‌ಪ್ರಸಾದ್ ಅವರಿದ್ದ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಗೂಗಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಪರ ವಾದ ಮಂಡಿಸಿದ ಸುಪ್ರೀಂಕೋರ್ಟ್‌ನ ಹಿರಿಯ ವಕೀಲ ಗೋಪಾಲ್ ಸುಬ್ರಮಣ್ಯಂ, ಸಿಸಿಐ ಹೊರಡಿಸಿರುವ ಆದೇಶದ ಸಿಂಧುತ್ವವನ್ನು ಪ್ರಶ್ನಿಸಿದರು.

ಸಿಸಿಐ ಪರ ವಾದ ಮಂಡಿಸಿದ ಅಡಿಷನಲ್ ಸಾಲಿಸಿಟರ್ ಜನರಲ್ ಎನ್. ವೆಂಕಟರಾಮನ್ ಸಿಸಿಐ ಕ್ರಮವನ್ನು ಸಮರ್ಥಿಸಿದರು. ಅಲ್ಲದೇ, ಮುಂದಿನ ವಿಚಾರಣೆವರೆಗೂ ಗೂಗಲ್ ವಿರುದ್ಧ ಯಾವುದೇ ಬಲವಂತದ ಕ್ರಮ ಜರುಗಿಸುವುದಿಲ್ಲ ಎಂದು ಭರವಸೆ ನೀಡಿದರು. ಹೇಳಿಕೆ ದಾಖಲಿಸಿಕೊಂಡ ಪೀಠ, ವಿಚಾರಣೆಯನ್ನು ಜನವರಿ 5ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ

ಅಲಯನ್ಸ್ ಆಫ್ ಡಿಜಿಟಲ್ ಇಂಡಿಯಾ ಫೌಂಡೇಷನ್ ಎಂಬ ನವೋದ್ಯಮ ಸಂಸ್ಥೆ, ನ್ಯೂ ಪ್ಲೇಸ್ಟೋರ್ ನೀತಿಯನ್ನು ಪ್ರಶ್ನಿಸಿ ಸಿಸಿಐಗೆ ದೂರು ನೀಡಿತ್ತು. ದೂರು ಆಲಿಸಿದ ಸಿಸಿಐ, ಗೂಗಲ್ ಪ್ಲೇ ಸ್ಟೋರ್ ನಿಯಮಗಳ ಬಗ್ಗೆ ತನಿಖೆಗೆ ಆದೇಶಿಸಿತ್ತು. ಅಲ್ಲದೆ, ಕೆಲವು ಪ್ರಶ್ನೆಗಳಿಗೆ ಉತ್ತರಿಸುವಂತೆ ಸೂಚಿಸಿದ್ದ ಸಿಸಿಐ ಡಿಸೆಂಬರ್‌ 31ರೊಳಗೆ ವಿವರಣೆ ನೀಡುವಂತೆ ಗಡುವು ವಿಧಿಸಿತ್ತು.

ಈ ಹಿನ್ನೆಲೆ ಹೈಕೋರ್ಟ್ ಮೆಟ್ಟಿಲೇರಿರುವ ಗೂಗಲ್ ತನಗೆ ಉತ್ತರಿಸಲು 8 ವಾರ ಕಾಲಾವಕಾಶ ನೀಡಬೇಕೆಂದು ಕೋರಿದೆ. ಅಲ್ಲದೆ, ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಐ ಸಮಿತಿಗೆ ನ್ಯಾಯಿಕ ಸದಸ್ಯರನ್ನು ನೇಮಿಸುವಂತೆ ಗೂಗಲ್‌ ಮನವಿ ಮಾಡಿದೆ.

ಓದಿ: ಪಿಯು ಕಾಲೇಜುಗಳಲ್ಲಿ ಸೂರ್ಯ ನಮಸ್ಕಾರ ಆಯೋಜನೆಯೇ ದೊಡ್ಡ ಸವಾಲು : ಆಸಕ್ತಿ ತೋರದ ಕಾಲೇಜುಗಳು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.