ETV Bharat / state

ಸಿಡಿ ಪ್ರಕರಣ: ಹಿರಿಯ ಅಧಿಕಾರಿ ರಜೆಯಲ್ಲಿದ್ದರೆ ಸಮರ್ಪಕ ತನಿಖೆ ಹೇಗೆ ಸಾಧ್ಯ? ಹೈಕೋರ್ಟ್ ಪ್ರಶ್ನೆ - ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಂಬಂಧ ತನಿಖೆಗೆಂದು ನೇಮಿಸಿರುವ ಹಿರಿಯ ಅಧಿಕಾರಿ ರಜೆಯಲ್ಲಿದ್ದರೆ, ಸಮರ್ಪಕ ತನಿಖೆ ಹೇಗೆ ಸಾಧ್ಯ? ಎಂದು ಹೈಕೋರ್ಟ್ ಪ್ರಶ್ನಿಸಿದೆ.

ಸಿಡಿ ಪ್ರಕರಣ
ಸಿಡಿ ಪ್ರಕರಣ
author img

By

Published : Aug 12, 2021, 10:27 PM IST

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ, ಅನುಭವ ಹಾಗೂ ಹಿರಿತನ ತನಿಖೆಗೆ ನೆರವಾಗಬೇಕೆಂಬ ಉದ್ದೇಶದಿಂದ ಹಿರಿಯ ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತದೆ. ಆದರೆ, ಆ ಹಿರಿಯ ಅಧಿಕಾರಿಯೇ ರಜೆಯಲ್ಲಿದ್ದರೆ ಸಮರ್ಪಕ ತನಿಖೆ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.

ಇದಕ್ಕೆ ಸ್ಪಷ್ಟನೆ ನೀಡಿದ ಎಸ್‌ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ, ಅಧಿಕಾರಿಗಳ ಅನುಪಸ್ಥಿತಿಯಲ್ಲಿ ನಡೆದಿರುವ ತನಿಖೆಯನ್ನು ಮರು ಪರಿಶೀಲಿಸುವ ಅಗತ್ಯವಿಲ್ಲ ಎಂದರು. ಎಸ್‌ಐಟಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಮೂರು ತಿಂಗಳು ತನಿಖೆ ನಡೆದಿದ್ದು, ಸೌಮೇಂದು ಮುಖರ್ಜಿ ತಮ್ಮ ಜವಾಬ್ದಾರಿಯನ್ನು ಬೇರೊಬ್ಬರಿಗೆ ವರ್ಗಾಯಿಸಿಲ್ಲ. ವರದಿ ಸಲ್ಲಿಸುವ ಕೆಲಸವನ್ನು ಮಾತ್ರ ವರ್ಗಾಯಿಸಿದ್ದಾರೆ.

ಇದು ಎಸ್‌ಐಟಿ ಮುಖ್ಯಸ್ಥರು ತನಿಖೆಯ ಉಸ್ತುವಾರಿ ವಹಿಸಿದಂತಾಗುವುದಿಲ್ಲ. ಮುಖರ್ಜಿ ಅವರು ತನಿಖೆ ಸರಿಯಾಗಿ ನಡೆದಿದೆಯೇ, ಇಲ್ಲವೇ ಪರಿಶೀಲಿಸಬೇಕಿತ್ತು ಎಂದು ನ್ಯಾಯಪೀಠ ಹೇಳಿದೆ. ಅಲ್ಲದೆ, ತನಿಖಾ ವರದಿಯನ್ನು ಪರಿಶೀಲಿಸಿ ಪ್ರತ್ಯೇಕ ಪ್ರಮಾಣ ಪತ್ರ ಸಲ್ಲಿಸುವ ಬಗ್ಗೆ ಸಂಜೆ 4 ಗಂಟೆಯೊಳಗೆ ಮುಖರ್ಜಿ ತಮ್ಮ ನಿಲುವನ್ನು ತಿಳಿಸಬೇಕು ಎಂದು ಸೂಚಿಸಿತ್ತು.

ಇದನ್ನೂ ಓದಿ: ತನಿಖೆ ಪ್ರಗತಿಯಲ್ಲಿರುವಾಗ ಮಾಹಿತಿ ಸೋರಿಕೆ ಮಾಡಿದರೆ ತನಿಖಾಧಿಕಾರಿ ವಿರುದ್ಧ ಶಿಸ್ತುಕ್ರಮ: ಸುತ್ತೋಲೆ ಹೊರಡಿಸಿದ ಸರ್ಕಾರ

ಮತ್ತೆ ವಿಚಾರಣೆ ಆರಂಭವಾದ ವೇಳೆ, ಎಸ್‌ಐಟಿ ಪರ ವಕೀಲ ಪಿ.ಪ್ರಸನ್ನ ಕುಮಾರ್, ನ್ಯಾಯಾಲಯಕ್ಕೆ ಹಿಂದೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಹೇಳಿರುವ ಹೇಳಿಕೆಗೆ ಬದ್ಧವಾಗಿರುವುದಾಗಿ ಸೌಮೇಂದು ಮುಖರ್ಜಿ ತಿಳಿಸಿದ್ದಾರೆ. ಎಸ್‌ಐಟಿ ತನಿಖಾ ವರದಿಯನ್ನು ಮರು ಪರಿಶೀಲಿಸಲು ಮುಖರ್ಜಿ ಸಿದ್ಧರಿಲ್ಲ ಎಂದು ತಿಳಿಸಿದರು.

ಸರ್ಕಾರದ ಪರ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಎಸ್‌ಐಟಿ ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ನಡೆದ ತನಿಖೆ ಅಸಮರ್ಪಕವಾಗುವುದಿಲ್ಲ ಎಂದರು. ಇದನ್ನು ಪರಿಗಣಿಸಿದ ನ್ಯಾಯಾಲಯ, ಅರ್ಜಿಯಲ್ಲಿ ಎಸ್‌ಐಟಿಯ ರಚನೆಯನ್ನೇ ಪ್ರಶ್ನಿಸಿರುವುದರಿಂದ ಸೂಕ್ತವಾದ ತನಿಖೆ ನಡೆದಿದೆಯೇ ಎಂಬುದನ್ನು ತಿಳಿಯಬೇಕು. ಹೀಗಾಗಿ ಈ ಎಲ್ಲಾ ಅಂಶಗಳ ಬಗ್ಗೆ ವಿಚಾರಣೆ ನಡೆಸುವ ಅಗತ್ಯವಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ತನಿಖೆಯ ಮೇಲ್ವಿಚಾರಣೆಯನ್ನು ಹೈಕೋರ್ಟ್ ವಹಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸ್ತಕಿ ಅರ್ಜಿಯನ್ನ ಸೆ.3ಕ್ಕೆ ಮುಂದೂಡಿದ ನ್ಯಾಯಾಲಯ, ಪ್ರಕರಣ ಕುರಿತ ಅಂತಿಮ ತನಿಖಾ ವರದಿ ಸಲ್ಲಿಸದಂತೆ ಎಸ್‌ಐಟಿಗೆ ನಿರ್ದೇಶನ ನೀಡಿತು. ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಮುಂದುವರಿಸಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.