ETV Bharat / state

ರಾಜ್ಯ ವಿಧಾನಸಭಾ ಅವಧಿ ಮೇ 24ಕ್ಕೆ ಅಂತ್ಯ: 80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನಕ್ಕೆ ಅವಕಾಶ - ರಾಜೀವ್ ಕುಮಾರ್

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನದ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದರು.

cec-rajiv-kumar-press-conference-on-assembly-elections-in-karnataka
ರಾಜ್ಯ ವಿಧಾನಸಭಾ ಅವಧಿ ಮೇ 24ಕ್ಕೆ ಅಂತ್ಯ: 80 ವರ್ಷ ಮೇಲ್ಪಟ್ಟವರಿಗೆ ಮನೆಯಲ್ಲೇ ಮತದಾನದ ಅವಕಾಶ
author img

By

Published : Mar 11, 2023, 3:14 PM IST

Updated : Mar 11, 2023, 6:34 PM IST

ಬೆಂಗಳೂರು: ರಾಜ್ಯ ವಿಧಾನಸಭಾ ಅವಧಿಯು ಮೇ 24ಕ್ಕೆ ಅಂತ್ಯವಾಗಲಿದೆ. ರಾಜ್ಯದಲ್ಲಿ ಒಟ್ಟು ಜನಸಂಖ್ಯೆ 6.1 ಕೋಟಿ ಇದೆ. ಇದರಲ್ಲಿ ಮಹಿಳೆಯರು 3.01 ಕೋಟಿ ಹಾಗೂ ಪುರುಷರು 3.01 ಕೋಟಿ ಇದ್ದಾರೆ. ಈ ಪೈಕಿ ಒಟ್ಟಾರೆ 5.21 ಕೋಟಿ ಮತದಾರರು ಇದ್ದು, 2.62 ಕೋಟಿ ಪುರುಷ ಮತದಾರರು, 2.59 ಕೋಟಿ ಮಹಿಳೆಯರು ಮತ ಹಕ್ಕು ಹೊಂದಿದ್ದಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದರು.

ರಾಜ್ಯ ವಿಧಾನಸಭಾ ಚುನಾವಣಾ ಸಿದ್ಧತೆಯ ಪರಿಶೀಲನೆಯ ಕುರಿತು ಚುನಾವಣಾ ಆಯೋಗವು ಮಹತ್ವದ ಸುದ್ದಿಗೋಷ್ಠಿ ನಡೆಸಿತು. ರಾಜೀವ್ ಕುಮಾರ್ ಮಾತನಾಡಿ, ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ 36 ಪರಿಶಿಷ್ಟ ಜಾತಿ ಮತ್ತು 15 ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರಗಳಿದ್ದು, ಸಾಮಾನ್ಯ 173 ಕ್ಷೇತ್ರಗಳು ಇದೆ. ಈ ಬಾರಿ 9.17 ಲಕ್ಷ ಹೊಸ ಮತದಾರರು ಇದ್ದು, 1.25 ಲಕ್ಷ 17 ವರ್ಷಕ್ಕೂ ಮೇಲ್ಪಟ್ಟ ಯುವಕರು ಮುಂಚಿತವಾಗಿ ಮತದಾನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಹೇಳಿದರು.

  • All arrangements will be made at the polling station for the convenience of senior citizens & PwD voters. For the first time, home voting facility is also there for 12.15 lakh 80 years + & 5.55 lakh benchmarked PwD voters so they can vote from the comfort of their homes: CEC pic.twitter.com/IT9kNrU27t

    — Election Commission of India #SVEEP (@ECISVEEP) March 11, 2023 " class="align-text-top noRightClick twitterSection" data=" ">

ಇದೇ ವೇಳೆ 42,756 ತೃತೀಯ ಲಿಂಗಿಗಳು ಇದ್ದು, 41,312 ಜನರು ಮತದಾನಕ್ಕಾಗಿ ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ 80 ವರ್ಷಕ್ಕೂ ಮೇಲ್ಪಟ್ಟವರು 12.15 ಲಕ್ಷ ಜನ ಮತದಾರರು ಇದ್ದಾರೆ. ಈ ಹಿಂದೆ 2018ರಲ್ಲಿ ಹಿರಿಯ ಮತದಾರರ ಸಂಖ್ಯೆ 9.17 ಇತ್ತು. ಇದರಲ್ಲಿ ಶೇ.32.5ರಷ್ಟು ಏರಿಕೆ ಕಂಡಿದೆ. ಜೊತೆಗೆ ವಿಶೇಷಚೇತನರ ಮತದಾರರ ಸಂಖ್ಯೆ 5.55 ಲಕ್ಷ ಇದ್ದು, 2018ರಲ್ಲಿ ಇವರ ಸಂಖ್ಯೆ 2.15 ಲಕ್ಷ ಮಾತ್ರ ಇತ್ತು ಎಂದು ವಿವರಿಸಿದರು.

ಎಲ್ಲರೂ ಮತದಾನ ಮಾಡಲು ಅವಕಾಶ ದೊರೆಯಬೇಕು ಎನ್ನುವ ಉದ್ದೇಶದಿಂದ ಮೊದಲ ಬಾರಿಗೆ 80 ವರ್ಷಕ್ಕೂ ಹೆಚ್ಚಿನ ವಯಸ್ಸಿನ ಹಾಗೂ ವಿಶೇಷ ಚೇತನರಿಗೆ ಮೊದಲ ಬಾರಿಗೆ ಮನೆಯಿಂದಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗುವುದು. ಮತದಾನ ಕೇಂದ್ರಗಳಲ್ಲಿ ಇವರಿಗೆ ವಿಶೇಷ ಸೌಲಭ್ಯಗಳನ್ನು ಮಾಡಲಾಗಿದೆ. ಆದರೂ, ಮತದಾನ ಕೇಂದ್ರಕ್ಕೆ ಆಗಮಿಸಲು ಸಾಧ್ಯವಾಗದೇ ಇರುವಂತಹ ಮತದಾರರಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ಪ್ರಕಟಿಸಿದರು.

58,282 ಮತಗಟ್ಟೆ: ವಿಧಾನಸಭಾ ಚುನಾವಣೆಗೆ 224 ಕ್ಷೇತ್ರಗಳಲ್ಲಿ ಒಟ್ಟಾರೆ 58,282 ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು. ಪ್ರತಿ ಪಿಎಸ್‌ಗೆ ಸರಾಸರಿ ಮತದಾರರು 883.50ರಷ್ಟು ಮತದಾರರು ಇರಲಿದ್ದಾರೆ. ಎಲ್ಲ ಮತದಾನ ಕೇಂದ್ರಗಳು ವೆಬ್‌ಕಾಸ್ಟಿಂಗ್ ಸೌಲಭ್ಯವನ್ನು ಹೊಂದಿವೆ. ನಗರ ಪ್ರದೇಶಗಳಲ್ಲಿ 24,063 ಮತ್ತು ಗ್ರಾಮೀಣ ಪ್ರದೇಶದಲ್ಲಿ 34,219 ಮತಗಟ್ಟೆಗಳು ಇರಲಿವೆ. 1,320 ಮತಗಟ್ಟೆಗಳನ್ನು ಸಂಪೂರ್ಣವಾಗಿ ಮಹಿಳಾ ಅಧಿಕಾರಿಗಳೇ ನಿರ್ವಹಿಸುತ್ತಾರೆ. 224 ಯುವ ಅಧಿಕಾರಿಗಳು ನಿರ್ವಣೆಯ, 224 ವಿಶೇಷ ಚೇತನರು ಮತ್ತು 240 ಮಾದರಿ ಮತಗಟ್ಟೆಗಳನ್ನು ಸ್ಥಾಪಿಸಲಾಗುವುದು ಎಂದರು. ದುರ್ಬಲ ಬುಡಕಟ್ಟು ಜನರು ಕೂಡ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕೆಂದು ಆಯೋಗ ಬಯಸುತ್ತಿದೆ. ಈ ನಿಟ್ಟಿನಲ್ಲಿ ಬುಡಕಟ್ಟಿನ 18 ವರ್ಷಕ್ಕಿಂತ ಮೇಲ್ಪಟ್ಟ ಅರ್ಹ 31,517 (ಶೇ.100ರಷ್ಟು) ಜನರ ನೋಂದಣಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಆಯೋಗದಿಂದ ಪಕ್ಷಪಾತ ಇಲ್ಲ: ಚುನಾವಣಾ ಸಂದರ್ಭದಲ್ಲಿ ಯಾವುದೇ ಪಕ್ಷ, ಯಾವುದೇ ಅಭ್ಯರ್ಥಿ ಮಧ್ಯೆ ಪಕ್ಷಪಾತ ಧೋರಣೆ ಚುನಾವಣಾ ಆಯೋಗದಿಂದ ಇರಲ್ಲ. ನ್ಯಾಯ ಸಮ್ಮತವಾಗಿ ಚುನಾವಣಾ ಆಯೋಗ ನಡೆದುಕೊಳ್ಳಲಿದೆ ಎಂದು ಆಯುಕ್ತರು ಸ್ಪಷ್ಟನೆ ನೀಡಿದರು. ಚುನಾವಣೆಯಲ್ಲಿ ಹಣ ಸಾಗಾಟ ವಿಚಾರ ಕುರಿತವಾಗಿ ಪ್ರತಿಕ್ರಿಯೆ ನೀಡಿ, ಹಣ ವರ್ಗಾವಣೆ ಬಗ್ಗೆ ಎಲ್ಲ ಬ್ಯಾಂಕ್​ಗಳಿಗೂ ನಿಗಾ ವಹಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಇದೇ ವೇಳೆ ಇವಿಎಂ ಲೋಪಗಳ ಕುರಿತಂತೆ ಪ್ರತಿಕ್ರಿಯಿಸಿದ ಆಯುಕ್ತರು, ಕಳೆದ ಐದು ಚುನಾವಣೆಯಲ್ಲಿ ಮತಯಂತ್ರಗಳ ಬಗ್ಗೆ ಯಾವುದೇ ಆರೋಪಗಳು ಕೇಳಿ ಬಂದಿಲ್ಲ. ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಒಂದು ಕಾರು ಬಂದರೇ ಏನು ಬದಲಾಗಲ್ಲ. ಎಲ್ಲರ ಮುಂದೆಯೇ ಇವಿಎಂಗಳನ್ನು ಪರಿಶೀಲನೆ ನಡೆಸುತ್ತೇವೆ. ಗುಜರಾತ್​, ಹಿಮಾಚಲ ಪ್ರದೇಶದಿಂದಲೇ ಎಲ್ಲಿಂದ ತಂದರೂ ಮತಯಂತ್ರಗಳು ಬದಲಾಗಲ್ಲ ಎಂದು ತಿಳಿಸಿದರು.

ಬೆಂಗಳೂರು ಸೇರಿ ಸಿಟಿಗಳಲ್ಲಿ ಮತದಾನ ಕಡಿಮೆ- ಅಸಮಾಧಾನ: ಕಳೆದ ವಿಧಾನಸಭೆ ಚುನಾವಣೆ, ಲೋಕಸಭೆ ಎಲೆಕ್ಷನ್​ನಲ್ಲಿ ಮತದಾನ ಕಡಿಮೆ ಆಗಿರುವ ಬಗ್ಗೆ ಮುಖ್ಯ ಚುನಾವಣಾ ಆಯುಕ್ತರು ಕಳವಳ ವ್ಯಕ್ತಪಡಿಸಿದರು. ಈ ಸಲ ಇದನ್ನು ಹೆಚ್ಚು ಮಾಡಬೇಕು ಎಂದು ಮನವಿ ಮಾಡಿದರು. ಈ ಬಗ್ಗೆ ವಿಶೇಷ ಗಮನ ಹರಿಸಲಾಗುವುದು. ಕರ್ನಾಟಕದ ಶಾಲೆಗಳಲ್ಲಿ ಮೂಲ ಸೌಲಭ್ಯ ಇರುವುದರಿಂದ ನಮಗೆ ಯಾವುದೇ ತೊಂದರೆ ಇಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸುಳ್ಳು ಸುದ್ದಿಗಳ ಬಗ್ಗೆ ಆಯುಕ್ತರು ಗರಂ: ಇತ್ತೀಚೆಗೆ ಫೇಕ್​ ನ್ಯೂಸ್​ಗಳ ಸಂಖ್ಯೆ ಜಾಸ್ತಿ ಆಗುತ್ತಿದೆ. ಇದನ್ನು ತಡೆಯಬೇಕಾಗಿದೆ. ಇದೇ ನಮಗೆ ದೊಡ್ಡ ತಲೆನೋವಾಗಿದೆ ಎಂದು ಕೇಂದ್ರ ಮುಖ್ಯ ಚುನಾವಣಾ ಆಯಕ್ತ ರಾಜೀವ್​ ಕುಮಾರ್​ ಅಸಮಾಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ: ಒಂದು ಮತದ ಮೌಲ್ಯ ತೋರಿಸಿದ್ದ ಧ್ರುವನಾರಾಯಣ್.. ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಿ ಕಣ್ಮರೆ

Last Updated : Mar 11, 2023, 6:34 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.