ETV Bharat / state

ಪರಿಷ್ಕೃತ ಮಾರ್ಗಸೂಚಿಯಂತೆ ಗಣೇಶ ಉತ್ಸವ ಆಚರಿಸಿ: ಸಿಎಂ ಮನವಿ - BS Yadiyurappa

ಪ್ರತಿಯೊಬ್ಬರು ಸರ್ಕಾರದ ಮಾರ್ಗಸೂಚಿ ಪಾಲಿಸಿ ಗಣೇಶ ಉತ್ಸವ ಆಚರಿಸಿ ಎಂದು ಸಿಎಂ ಬಿಎಸ್​ವೈ ಮನವಿ ಮಾಡಿದ್ದಾರೆ.

Yadiyurappa
Yadiyurappa
author img

By

Published : Aug 18, 2020, 12:50 PM IST

ಬೆಂಗಳೂರು: ಕೊರೊನಾ ಹಿನ್ನಲೆಯಲ್ಲಿ ಪರಿಷ್ಕೃತ ಮಾರ್ಗಸೂಚಿಗಳನ್ವಯ ಪರಿಸರಸ್ನೇಹಿ ಗಣೇಶೋತ್ಸವ ಆಚರಿಸುವಂತೆ ನಾಡಿನ ಜನತೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ‌.

ಕೊರೊನಾ ಸಾಂಕ್ರಾಮಿಕ ಹಿನ್ನೆಲೆಯಲ್ಲಿ ಜನರ ಧಾರ್ಮಿಕ ಭಾವನೆಗಳಿಗೆ ಸ್ಪಂದಿಸಿ, ಸಾಂಪ್ರದಾಯಿಕ ಗಣೇಶೋತ್ಸವ ಆಚರಣೆಗೆ ಧಕ್ಕೆ ಬಾರದಂತೆ ಸರ್ಕಾರ ಮಾರ್ಗಸೂಚಿಗಳನ್ನು ರೂಪಿಸಿದ್ದು, ಕೊರೊನಾ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಅದಕ್ಕಾಗಿ ಮಾರ್ಗಸೂಚಿ ಪಾಲಿಸಿ ಗಣೇಶ ಉತ್ಸವ ಆಚರಿಸಿ ಎಂದು ಮನವಿ ಮಾಡಿದ್ದಾರೆ.

ಪರಿಷ್ಕೃತ ಮಾರ್ಗಸೂಚಿ:

1. ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿಪೂರ್ವಕವಾಗಿ ದೇವಸ್ಥಾನದಲ್ಲಿ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ಖಾಸಗಿ/ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು.

2. ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸುವುದು.

3. ಪಾರಂಪರಿಕ ಗಣೇಶೋತ್ಸವ, ಗಣೇಶೋತ್ಸವ ಸಮಿತಿ / ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನ್ಸಿಪಲ್ ಕಾರ್ಪೋರೇಷನ್ / ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯತಕ್ಕದ್ದು. ಒಂದು ವಾರ್ಡಿಗೆ / ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪಿಸಲು ಪ್ರೋತ್ಸಾಹಿಸುವುದು.

4. ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು. ಒಮ್ಮೆಲೇ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾದಿಗಳಿಗೆ ಅನುವು ಮಾಡುವುದು.

5. ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕೃತಿಕ / ಸಂಗೀತ, ನೃತ್ಯ ಇನ್ನಿತರ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ.

6. ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆ ಹೊರಡಿಸಿ ತರತಕ್ಕದ್ದಲ್ಲ, ಮಾಡತಕ್ಕದ್ದಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

7. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಮತ್ತು ಸರ್ಕಾರಿ / ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ / ಜಿಲ್ಲಾಡಳಿತ / ಹತ್ತಿರದ ಸ್ಥಳೀಯ ಸಂಸ್ಥೆಗಳು | ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್‌ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್​​ಗಳಲ್ಲಿ ವಿಸರ್ಜಿಸುವುದು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.