ETV Bharat / state

ಪ್ರತಿ ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ಆಚರಿಸಿ: ಸಚಿವೆ ಶಶಿಕಲಾ ಜೊಲ್ಲೆ - ಪ್ರತಿ ಯುಗಾದಿಯನ್ನ ಧಾರ್ಮಿಕ ದಿನವನ್ನಾಗಿ ಆಚರಿಸಿ

ವರ್ಷದ ಮೊದಲ ದಿನವಾದ ಯುಗಾದಿ ಹಬ್ಬವನ್ನು ಧಾರ್ಮಿಕ ದಿನವನ್ನಾಗಿ ಆಚರಿಸಬೇಕು. ಈ ಸಂಬಂಧ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Celebrate the religious day in every Yugadi: Minister Sasikala Jolle
ಸಚಿವೆ ಶಶಿಕಲಾ ಜೊಲ್ಲೆ
author img

By

Published : Mar 23, 2022, 10:20 PM IST

ಬೆಂಗಳೂರು: ಹಿಂದೂಗಳಿಗೆ ಯುಗಾದಿ ಹಬ್ಬದಿಂದ ಹೊಸ ವರ್ಷ ಆರಂಭವಾಗುತ್ತದೆ. ವರ್ಷದ ಮೊದಲ ದಿನವಾದ ಯುಗಾದಿಯನ್ನು ಧಾರ್ಮಿಕ ದಿನವನ್ನಾಗಿ ಆಚರಿಸಬೇಕು. ಈ ಸಂಬಂಧ ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಿಗೆ ಸುತ್ತೋಲೆ ಹೊರಡಿಸುವಂತೆ ಸಚಿವೆ ಶಶಿಕಲಾ ಜೊಲ್ಲೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಜ್ಯದಲ್ಲಿರುವ ಅನೇಕ ಇಲಾಖೆಗಳು ತಮ್ಮ ಇಲಾಖೆಗೆ ಸಂಬಂಧಿಸಿದಂತೆ, ಧ್ಯೇಯೋದ್ದೇಶಗಳನ್ನು ಹೊಂದುವ ಹೆಸರಿನೊಂದಿಗೆ ವರ್ಷದ ಒಂದು ದಿನ ಇಲಾಖೆಯ ದಿನಾಚರಣೆಯನ್ನು ಆಚರಿಸುತ್ತಾರೆ. ಅದೇ ರೀತಿ ಧಾರ್ಮಿಕ ದತ್ತಿ ಇಲಾಖೆಯೂ ಕೂಡ ಧಾರ್ಮಿಕ ಹಿನ್ನೆಲೆ ಮತ್ತು ಮನೋಭಾವವನ್ನು ಹೊಂದಿರುವ ಇಲಾಖೆಯಾಗಿರುವುದರಿಂದ ವರ್ಷದಲ್ಲಿ ಒಂದು ದಿನವನ್ನು ಧಾರ್ಮಿಕ ದಿನವೆಂಬ ಹೆಸರಿನಿಂದ ಆಚರಣೆ ಮಾಡುವುದು ಸೂಕ್ತ.‌ ಆದರೆ ರಾಜ್ಯದ ಕೆಲವು ಭಾಗಗಳಲ್ಲಿ ಚಾಂದ್ರಮಾನ ಯುಗಾದಿಯನ್ನು ಇನ್ನು ಕೆಲವು ಭಾಗಗಳಲ್ಲಿ ಸೌರಮಾನ ಯುಗಾದಿಯನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರಸಕ್ತ ಸಾಲಿನಿಂದ ಪ್ರತಿವರ್ಷ ಶುಭಕೃತ್‌ ನಾಮ ಸಂವತ್ಸರ ಚಾಂದ್ರಮಾನ/ಸೌರಮಾನ ಯುಗಾದಿಯ ದಿನಗಳಂದು ನಮ್ಮ ಇಲಾಖಾ ವ್ಯಾಪ್ತಿಯ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಧಾರ್ಮಿಕ ದಿನಾಚರಣೆಯನ್ನು ಆಚರಿಸುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಮದುವೆ ಲೈಸೆನ್ಸ್​​ ಅಲ್ಲ; ಪತ್ನಿಯ ಇಚ್ಛೆಗೆ ವಿರುದ್ಧದ ಪತಿಯ ಲೈಂಗಿಕ ಕ್ರಿಯೆ ಅತ್ಯಾಚಾರ: ಹೈಕೋರ್ಟ್​

ರಾಜ್ಯ ಧಾರ್ಮಿಕ ದಿನಾಚರಣೆಯ ಮಾರ್ಗಸೂಚಿ:

1. ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ಯುಗಾದಿಯನ್ನು “ಧಾರ್ಮಿಕ ದಿನ"ವನ್ನಾಗಿ ಆಚರಿಸುವುದು.

2. ರಾಜ್ಯದ ಅಭಿವೃದ್ದಿಗಾಗಿ ಇದೇ ಸಂದರ್ಭದಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆಗಳನ್ನು ರಾಜ್ಯದ ದೇವಾಲಯಗಳಲ್ಲಿ ಕೈಗೊಳ್ಳುವುದು.

3. ದೇವಾಲಯಗಳಲ್ಲಿ ಸಕ್ರೀಯವಾಗಿರುವ ಸ್ವಯಂಸೇವಾ ತಂಡಗಳಿಂದ ಭಜನೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಲಭ್ಯತೆಗೆ ಅನುಸಾರವಾಗಿ ಆಯೋಜಿಸುವುದು.

4. ಪ್ರತಿ ದೇವಾಲಯಗಳಲ್ಲಿ ಹೆಚ್ಚಿನ ಭಕ್ತರು ಪಾಲ್ಗೊಳ್ಳುವಂತೆ ಆಡಳಿತ ಮಂಡಳಿಯು ಈ ಸಂದರ್ಭವನ್ನು ಬಳಸಿ ಕಾರ್ಯಕ್ರಮಗಳನ್ನು ರೂಪಿಸುವುದು.

5. ಧಾರ್ಮಿಕ ದಿನಾಚರಣೆಯನ್ನು ಪ್ರತಿ ದೇವಾಲಯಗಳ ಧಾರ್ಮಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ತಿಳಿಯಪಡಿಸುವ ರೀತಿಯಲ್ಲಿ ಕ್ರಿಯಾತ್ಮಕವಾಗಿ ಆಚರಿಸಬೇಕು.

6. ರಾಜ್ಯದ ಶಿಷ್ಟಾಚಾರ ಪಾಲಿಸಿಕೊಂಡು ಕಾರ್ಯಕ್ರಮಗಳನ್ನು ಧಾರ್ಮಿಕ ಮತ್ತು ಸಾಂಸ್ಕೃತಿಕವಾಗಿ ವಿಶಿಷ್ಠ ರೀತಿಯಲ್ಲಿ ಆಯೋಜಿಸಬೇಕು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.