ETV Bharat / state

ನಾಳೆಯಿಂದ 2 ದಿನ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ಶತಮಾನೋತ್ಸವ ಕಾರ್ಯಕ್ರಮ: ಸ್ಪೀಕರ್ ಭಾಗಿ - ಉಪ ರಾಷ್ಟ್ರಪತಿಎಂ. ವೆಂಕಯ್ಯ ನಾಯ್ಡು

ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಶನಿವಾರ ಮತ್ತು ಭಾನುವಾರ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದೆ.

ವಿಶ್ವೇಶ್ವರ ಹೆಗಡೆ ಕಾಗೇರಿ
ವಿಶ್ವೇಶ್ವರ ಹೆಗಡೆ ಕಾಗೇರಿ
author img

By

Published : Dec 3, 2021, 9:25 PM IST

ಬೆಂಗಳೂರು: ನಾಳೆಯಿಂದ ಎರಡು ದಿನಗಳ ಕಾಲ ನಡೆಯಲಿರುವ ಸಂಸತ್ತಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಭಾಗವಹಿಸಲಿದ್ದಾರೆ.

ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ಶನಿವಾರ ಮತ್ತು ಭಾನುವಾರ ಕಾರ್ಯಕ್ರಮ ನಡೆಯಲಿದ್ದು, ಉದ್ಘಾಟನೆಯ ಸಂದರ್ಭದಲ್ಲಿ ಉಪ ರಾಷ್ಟ್ರಪತಿಗಳು ಹಾಗೂ ಲೋಕಸಭೆಯ ಸಭಾಧ್ಯಕ್ಷ ಎಂ. ವೆಂಕಯ್ಯ ನಾಯ್ಡು ಉಪಸ್ಥಿತರಿರುತ್ತಾರೆ.

ಈ ಕಾರ್ಯಕ್ರಮದಲ್ಲಿ ವಿಶ್ವೇಶ್ವರ ಹೆಗಡೆ, ಕಾಗೇರಿ ಅವರು, ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಕಾರ್ಯನಿರ್ವಹಣೆ, ಸಾಧನೆಗಳು, ಸದರಿ ಸಮಿತಿಯ ವರದಿಗಳಲ್ಲಿನ ಶಿಫಾರಸುಗಳ ಅನ್ವಯ ಸರ್ಕಾರವು ಜಾರಿಗೆ ತಂದಿರುವ ಅಭಿವೃದ್ಧಿ ಕಾರ್ಯಕ್ರಮಗಳು, ಮುಂತಾದ ವಿಷಯಗಳ ಕುರಿತು ತಮ್ಮ ನಿಲುವನ್ನು ಮಂಡಿಸಲಿದ್ದಾರೆ ಎಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಕೋವಿಡ್​​ ರೂಪಾಂತರಿ Omicron​ ಭೀತಿ: ಮಾರ್ಗಸೂಚಿ ಬಿಡುಗಡೆ ಮಾಡಿದ ಸರ್ಕಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.