ETV Bharat / state

'ಎಸ್‌ಎಸ್‌ಸಿ ಪರೀಕ್ಷೆಯಿಂದ ಕನ್ನಡ ಕೈಬಿಟ್ಟು ಕೇಂದ್ರದಿಂದ ಅನ್ಯಾಯ' - ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕೇಂದ್ರ ಗೃಹಮಂತ್ರಿ ಅಮಿತ್ ಶಾ ನೇತೃತ್ವದ ಅಧಿಕೃತ ಭಾಷೆಗಳ ಸಂಸತ್ತಿನ ಸಮಿತಿಯು ಇತ್ತೀಚಿಗೆ ರಾಷ್ಟ್ರಪತಿಗಳಿಗೆ ನೀಡಿದ 11ನೇ ವರದಿಯಲ್ಲಿ ಎಲ್ಲಾ ರಾಜ್ಯಗಳಲ್ಲಿ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಬೇಕು ಎಂದು ಶಿಫಾರಸ್ಸು ಮಾಡಿದೆ.

Opposition leader Siddaramayya
ವಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Oct 30, 2022, 7:13 AM IST

ಬೆಂಗಳೂರು: ಕೇಂದ್ರ ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ) ನಾನಾ ಭದ್ರತಾ ಪಡೆಗಳ ಸಿಬ್ಬಂದಿ ಆಯ್ಕೆಗೆ ಜನವರಿಯಲ್ಲಿ ನಡೆಸಲಿರುವ ಪರೀಕ್ಷೆಗಳಿಂದ ಕನ್ನಡವನ್ನು ಕೈಬಿಟ್ಟು ನಾಡಿನ ಯುವ ಸಮೂಹದ ಸಹನೆಯನ್ನು ಕೇಂದ್ರ ಸರ್ಕಾರ ತೀವ್ರವಾಗಿ ಕೆಣಕುತ್ತಿದೆ. ಇದನ್ನು ಇನ್ನು ಸಹಿಸಲು ಸಾಧ್ಯವಿಲ್ಲ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಕೇಂದ್ರ ಗೃಹಮಂತ್ರಿ ಅಮಿತ್ ಶಾ ನೇತೃತ್ವದ ಅಧಿಕೃತ ಭಾಷೆಗಳ ಸಂಸತ್ತಿನ ಸಮಿತಿಯು ಇತ್ತೀಚಿಗೆ ರಾಷ್ಟ್ರಪತಿಗಳಿಗೆ ನೀಡಿದ 11ನೇ ವರದಿಯಲ್ಲಿ ಎಲ್ಲಾ ರಾಜ್ಯಗಳಲ್ಲಿ ಸ್ಥಳೀಯ ಭಾಷೆಗಳಿಗೆ ಆದ್ಯತೆ ನೀಡಬೇಕು ಎಂದು ಶಿಫಾರಸು ಮಾಡಿದೆ. ಕಲಿಕೆಯಲ್ಲಿ ಮಾತೃಭಾಷೆಗಳಿಗೆ ಆದ್ಯತೆ ನೀಡಿದ ಬಳಿಕ ಉದ್ಯೋಗದ ಪ್ರಶ್ನೆ ಬಂದಾಗ ಮಾತ್ರ ಹಿಂದಿಯಲ್ಲೇ ಪ್ರವೇಶ ಪರೀಕ್ಷೆ ಬರೆಯಬೇಕು ಎನ್ನುವುದು ಕಪಟತನವಾಗುತ್ತದೆ ಎಂದಿದ್ದಾರೆ.

ಕನ್ನಡದ ಕೊರಳು ಹಿಸುಕುತ್ತಿದ್ದ ಕೇಂದ್ರದ ನೀತಿ: ಮತ್ತೊಂದೆಡೆ ಇಡೀ ದೇಶದ ಪೊಲೀಸ್ ವ್ಯವಸ್ಥೆಯನ್ನು ಕೇಂದ್ರದ ಹಿಡಿತಕ್ಕೆ ತೆಗೆದುಕೊಳ್ಳುವ ಮೊದಲ ಹಂತವಾಗಿ ಎಲ್ಲಾ ರಾಜ್ಯಗಳ ಪೊಲೀಸ್ ಸಿಬ್ಬಂದಿ ಕೇಂದ್ರ ಸೂಚಿಸುವ ಸಮವಸ್ತ್ರವನ್ನೇ ಧರಿಸಬೇಕು ಎನ್ನುವ ಮಾತುಗಳನ್ನು ಆಡತೊಡಗಿದೆ. ಬ್ಯಾಂಕ್ ಹುದ್ದೆಗಳ ಪ್ರವೇಶ ಪರೀಕ್ಷೆಯಲ್ಲಿ ಕನ್ನಡದ ಕೊರಳು ಹಿಸುಕುತ್ತಿದ್ದ ಕೇಂದ್ರದ ನೀತಿ ವಿರುದ್ಧ ಕನ್ನಡ ನಾಡು ನಿರಂತರವಾಗಿ ಧ್ವನಿ ಎತ್ತಿ ತನ್ನ ಹಕ್ಕನ್ನು ಕಾಪಾಡಿಕೊಳ್ಳುತ್ತಿದೆ ಎನ್ನುವ ಹೊತ್ತಲ್ಲೇ ಇಂತಹ ಹತ್ತಾರು ದಾಳಿಗಳನ್ನು ನಾನಾ ರೀತಿಗಳಲ್ಲಿ ಕೇಂದ್ರ ಮುಂದುವರೆಸಿದೆ. ಬಿಎಸ್‌ಎಫ್, ಕೇಂದ್ರೀಯ ಕೈಗಾರಿಕಾ ಪಡೆ, ಸಚಿವಾಲಯ ಭದ್ರತಾ ಪಡೆ, ಅಸ್ಸಾಂ ರೈಫಲ್ಸ್ ಸೇರಿದಂತೆ ನಾನಾ ಕೇಂದ್ರ ಪಡೆಗಳಿಗೆ ಜನವರಿಯಲ್ಲಿ ನಡೆಯುತ್ತಿರುವ ಪರೀಕ್ಷೆಯನ್ನು ಕೇವಲ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ನಡೆಸುವ ತೀರ್ಮಾನವನ್ನು ಕೇಂದ್ರ ತಕ್ಷಣ ಹಿಂದಕ್ಕೆ ಪಡೆದುಕೊಳ್ಳಬೇಕು. ಕನ್ನಡದಲ್ಲೂ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಹಿಂದಿ ಇಂಗ್ಲೀಷ್'ಗೆ ಮಾತ್ರ ಅವಕಾಶ: ಕರವೇ ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.