ETV Bharat / state

Delta Plus.. ಕೊರೊನಾ ಲಸಿಕೆ ಜೆನೆರಿಕ್​ ಡ್ರಗ್​ ವ್ಯಾಪ್ತಿಗೆ ತನ್ನಿ: ಸಿದ್ದರಾಮಯ್ಯ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ

ದೇಶದ ಸಮಸ್ತ ಜನರಿಗೆ ಮುಂದಿನ ಮೂರು- ನಾಲ್ಕು ತಿಂಗಳಲ್ಲಿ ಲಸಿಕೆ ಹಾಕುವಷ್ಟು ಪ್ರಮಾಣದಲ್ಲಿ ಉತ್ಪಾದಿಸಲು ಲಸಿಕೆಗಳ ಮೇಲಿನ ಪೇಟೆಂಟುಗಳನ್ನು ಮೊದಲು ಕಿತ್ತು ಹಾಕಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಅಲ್ಲದೆ, ಡೆಲ್ಟಾ ಪ್ಲಸ್​ ವೈರಸ್​ ಎದುರಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಿದ್ಧವಾಗಬೇಕು ಎಂದು ಸಲಹೆ ನೀಡಿದ್ದಾರೆ.

siddaramaiah
ಸಿದ್ದರಾಮಯ್ಯ
author img

By

Published : Jun 24, 2021, 5:00 PM IST

ಬೆಂಗಳೂರು: ಕೊರೊನಾ 2ನೇ ಅಲೆ ಮುಗಿಯುವ ಮೊದಲೇ ಡೆಲ್ಟಾ ಪ್ಲಸ್ ಎಂಬ ಇನ್ನಷ್ಟು ಉಗ್ರವಾದ ಕೊರೊನಾದ ರೂಪಾಂತರಿ ವೈರಸ್​ ದೇಶದಲ್ಲಿ ಮತ್ತೆ ವೇಗವಾಗಿ ಹರಡುವ ಭೀತಿ ಸೃಷ್ಟಿಯಾಗಿದೆ. ಇದನ್ನು ನಿಭಾಯಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ರೀತಿಯ ಕ್ರಮಗಳನ್ನು ಸಮರೋಪಾದಿಯಲ್ಲಿ ತೆಗೆದುಕೊಳ್ಳಬೇಕಾಗಿದೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿರುವ ಅವರು, ಸರ್ಕಾರಗಳು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಲವಾರು ಸಲಹೆ ನೀಡಿದ್ದಾರೆ. ದೇಶದ ಶೇ 80 ರಷ್ಟು ಜನರಿಗೆ ಲಸಿಕೆ ನೀಡುವವರೆಗೆ ಅಂತಾರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸುವುದು ಸೂಕ್ತ. ದೇಶದ ಯಾವ ಯಾವ ಸ್ಥಳಗಳಲ್ಲಿ ಕೊರೊನಾ ವೈರಸ್​ನ ಡೆಲ್ಟಾ ಪ್ಲಸ್ ಪ್ರಬೇಧ ಪತ್ತೆಯಾಗಿದೆಯೊ, ಆ ಸ್ಥಳಗಳ ಕುರಿತು ತೀವ್ರ ನಿಗಾ ವಹಿಸಿ ಇತರರಿಗೆ ಹರಡದಂತೆ ನೋಡಿಕೊಳ್ಳಬೇಕು. ಹೊಸ ಹೊಸ ತಳಿಗಳಾಗಿ ಅತ್ಯಂತ ವೇಗವಾಗಿ ರೂಪಾಂತರ ಹೊಂದುತ್ತಿದೆ.

ಪರಿಸ್ಥಿತಿ ಹೀಗಿರುವಾಗ ಸರ್ಕಾರಗಳು ವ್ಯಾಪಕವಾಗಿ ಮತ್ತು ಉಚಿತವಾಗಿ ಸಾರ್ವಜನಿಕ ಆಂದೋಲನಗಳ ಮೂಲಕ ಲಸಿಕೆಗಳನ್ನು ನೀಡಬೇಕು. ಈಗ ರಾಜ್ಯಗಳ ಬಳಿ 2.5 ಕೋಟಿ ಡೋಸ್ ಲಸಿಕೆಗಳಿವೆ ಎಂದು ಬೇರೆ ಹೇಳುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳ ಬಳಿ ಎಷ್ಟಿವೆ ಎಂದು ಹೇಳುತ್ತಿಲ್ಲ. ಲಸಿಕೆ ಉತ್ಪಾದಕ ಕಂಪನಿಗಳು ಪ್ರತಿದಿನ ಸರ್ಕಾರಕ್ಕೆ ಮತ್ತು ಖಾಸಗಿಯವರಿಗೆ ನೀಡಿದ ಲಸಿಕೆಗಳ ಕುರಿತು ಪ್ರಕಟಣೆಗಳನ್ನು ಹೊರಡಿಸಬೇಕು ಎಂದಿದ್ದಾರೆ.

ಮೂರನೆ ಅಲೆಯ ಕುರಿತು ತಜ್ಞರು ಮಾಡಿರುವ ಶಿಫಾರಸುಗಳಂತೆ, ಖಾಸಗಿ ಆಸ್ಪತ್ರೆಗಳು ಕಂಪನಿಗಳಿಂದ ಲಸಿಕೆಗಳನ್ನು ಸ್ವೀಕರಿಸಿ ಗರಿಷ್ಠ 10 ದಿನಗಳ ಕಾಲ ಮಾತ್ರ ದಾಸ್ತಾನಿರಿಸಿಕೊಳ್ಳಬೇಕೆಂಬ ಕುರಿತು ಆದೇಶ ಹೊರಡಿಸುವಂತೆ ತಿಳಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತುರ್ತಾಗಿ ಮಾಡಬೇಕಾದ ಕೆಲಸ ಇದು ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

50 ರೂಪಾಯಿಗಳಿಗೆ ಲಸಿಕೆ ದೊರೆಯುತ್ತದೆ: ದೇಶದ ಸಮಸ್ತ ಜನರಿಗೆ ಮುಂದಿನ ಮೂರು- ನಾಲ್ಕು ತಿಂಗಳಲ್ಲಿ ಲಸಿಕೆ ಹಾಕುವಷ್ಟು ಪ್ರಮಾಣದಲ್ಲಿ ಉತ್ಪಾದಿಸಲು ಲಸಿಕೆಗಳ ಮೇಲಿನ ಪೇಟೆಂಟುಗಳನ್ನು ಮೊದಲು ಕಿತ್ತು ಹಾಕಬೇಕು ಎಂದು ಅವರು ಸಲಹೆ ನೀಡಿದ್ದಾರೆ. ಸರ್ಕಾರ ಕಾರ್ಪೊರೇಟ್ ಕಂಪನಿಗಳ ಓಲೈಕೆ ಮನಸ್ಥಿತಿಯಿಂದ ಹೊರಬಂದು, ಅವುಗಳ ಮೇಲೆ ಪ್ರಬಲ ಹಿಡಿತ ಸಾಧಿಸಬೇಕು. ಕೊರೊನಾ ಲಸಿಕೆಗಳನ್ನು ‘ಜೆನರಿಕ್ ಡ್ರಗ್’ಗಳ ವ್ಯಾಪ್ತಿಗೆ ತಂದು ಸರ್ಕಾರಗಳೇ ಉತ್ಪಾದನೆ ಮತ್ತು ವಿತರಣೆಗಳನ್ನು ನಿಯಂತ್ರಿಸಬೇಕು. ಹೀಗಾದರೆ ಗರಿಷ್ಠ 50 ರೂಪಾಯಿಗಳಿಗೆ ಲಸಿಕೆ ದೊರೆಯುತ್ತದೆ ಎಂದು ಅವರು ತಿಳಿಸಿದ್ದಾರೆ.

ಮೋದಿಯವರು ಜೂನ್ 30 ರಂದು ‘ಕೋವಿನ್ ಗ್ಲೋಬಲ್ ಕಾನ್‍ಕ್ಲೇವ್’ ನಡೆಸಲು ಉದ್ದೇಶಿಸಿದ್ದಾರೆಂಬ ಮಾಹಿತಿ ಇದೆ. ಈ ಸಮಾವೇಶದಲ್ಲಿ ಭಾರತವು ಕೊರೊನಾವನ್ನು ಎದುರಿಸಿದ ರೀತಿಗಳನ್ನು ತಿಳಿಸುವುದಾಗಿ ಹೇಳಿದ್ದಾರೆ.

ನಾಚಿಕೆಗೇಡಿನ ಸಂಗತಿ: ಇದಂತೂ ಅತ್ಯಂತ ನಾಚಿಕೆಗೇಡಿನ ಮತ್ತು ಅಸೂಕ್ಷ್ಮವಾದ ವಿಷಯ. ಕಳೆದ ಮಾರ್ಚ್ ತಿಂಗಳಿಂದ ದೇಶದಲ್ಲಿ ಏನೇನಾಯಿತು ಎಂದು ಜನರು ಮರೆತು ಬಿಟ್ಟಿದ್ದಾರೆಯೆ? ಹೃದಯವಿರುವ ಮನುಷ್ಯನಿಗೆ ಭೀಕರ ಪಶ್ಚಾತ್ತಾಪ, ಪಾಪಪ್ರಜ್ಞೆಗಳು ಕಾಡಬೇಕಾಗಿತ್ತು. ಅದರ ಬದಲಾಗಿ ಕೊರೊನಾದ ವಿರುದ್ಧ ವಿಜಯ ಸಾಧಿಸಿ ಬಿಟ್ಟಿದ್ದೇವೆ ಎಂಬಂತೆ ವಿಶ್ವದ ಜನರಿಗೆ ತಿಳಿಸಲು ಹೊರಟಿರುವುದನ್ನು ಏನೆನ್ನಬೇಕು? ಇದನ್ನು ನೋಡಿದರೆ ನಮ್ಮ ಪ್ರಧಾನಮಂತ್ರಿಗಳ ಹೃದಯದಲ್ಲಿ ಒಬ್ಬ ಮನುಷ್ಯನಿದ್ದಾನೆ ಎನ್ನಿಸುತ್ತದೆಯೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮೋದಿಯವರು ತಮ್ಮ ಸಾಧನೆಗಳ ಜಾಗತಿಕ ಸಮಾವೇಶ ನಡೆಸುವ ಬದಲು ವಿಶ್ವದ ನಾಯಕರುಗಳನ್ನು ಒತ್ತಾಯಿಸಿ ಕೊರೊನಾ ಲಸಿಕೆಯ ಮೇಲಿನ ಪೇಟೆಂಟುಗಳನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಬೇಕು. ವಿಶ್ವದ ಜನ ಸಮುದಾಯಗಳ ಆರೋಗ್ಯವು ತುರ್ತುಪರಿಸ್ಥಿತಿಯಲ್ಲಿರುವಾಗ, ಕೊರೊನಾದ ನಿರ್ವಹಣೆಯನ್ನು ಆಯಾ ದೇಶಗಳಿಗೆ ಬಿಡುವುದು ಹಾಗೂ ಔಷಧ ಕಂಪನಿಗಳ ಲೂಟಿಗೆ ಅವಕಾಶ ಮಾಡಿಕೊಡುವುದು ಅತ್ಯಂತ ಅಪಾಯಕಾರಿಯಾದ ಸಂಗತಿ ಎಂದು ತಿಳಿಸಬೇಕು.

ಆರ್ಥಿಕ ಪುನಶ್ಚೇತನದ ಪ್ಯಾಕೇಜುಗಳನ್ನು ಘೋಷಿಸಬೇಕು: ಜಾಗತಿಕ ಸಮಸ್ಯೆಗೆ ಜಾಗತಿಕ ಪರಿಹಾರಗಳೇ ಬೇಕಾಗುತ್ತವೆಯೇ ಹೊರತು ಸ್ಥಳೀಯವಾಗಿ ಪರಿಹಾರ ಕಂಡುಕೊಳ್ಳಲಾಗದು. ಆದ್ದರಿಂದ ವಿಶ್ವ ಸಂಸ್ಥೆ ಮತ್ತು ವಿಶ್ವ ಆರೋಗ್ಯ ಸಂಸ್ಥೆಗಳು ಕ್ರಿಯಾಶೀಲಗೊಂಡು ಸದ್ಯದ ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ಸಾಮೂಹಿಕ ಪ್ರಯತ್ನಗಳಾಗಬೇಕೆಂದು ಒತ್ತಾಯಿಸಬೇಕು. ಯಾಕೆಂದರೆ ವಿಶ್ವದ ಯಾವುದೋ ಭಾಗದಲ್ಲಿ ರೂಪಾಂತರಗೊಂಡ ವೈರಸ್​ ಬೆಂಕಿಯಂತೆ ಜಗತ್ತನ್ನು ಆವರಿಸಿ ಬಿಡಬಹುದು. ಹಾಗಾಗಿ ವಿವೇಕವುಳ್ಳ, ವೈಜ್ಞಾನಿಕ ಮನೋಭಾವವುಳ್ಳ ಮನುಷ್ಯರು ಒತ್ತಾಯಿಸಬೇಕಾದ ಕ್ರಮಗಳಿವು. ಇವುಗಳ ಜೊತೆಗೆ ಜಗತ್ತಿನ ಅನೇಕ ದೇಶಗಳು ತೆಗೆದುಕೊಂಡಿರುವ ಆರ್ಥಿಕ ಪುನಶ್ಚೇತನದ ಪ್ಯಾಕೇಜುಗಳನ್ನು ಘೋಷಿಸಬೇಕೆಂದು ಒತ್ತಾಯಿಸುತ್ತೇನೆ.

ತಲೆ ಎತ್ತಿ ನಿಲ್ಲುವಂತೆ ಮಾಡಲಾಗದು: ಪ್ರತಿಯೊಬ್ಬರಿಗೂ ಲಸಿಕೆ, ಹೊಟ್ಟೆಗೆ ಅನ್ನ, ಒಂದಿಷ್ಟು ಆರ್ಥಿಕ ನೆರವು, ಉಚಿತ ಚಿಕಿತ್ಸೆ ನೀಡದಿದ್ದರೆ ಭಾರತ ವಿಶ್ವ ಗುರುವಾಗುವುದಿರಲಿ ಪಾಕಿಸ್ತಾನ, ಬಾಂಗ್ಲಾ, ಶ್ರೀಲಂಕಾ ಮತ್ತಿತರ ದೇಶಗಳ ಎದುರು ತಲೆ ಎತ್ತಿ ನಿಲ್ಲುವಂತೆ ಮಾಡಲಾಗದು ಎಂಬ ತಿಳುವಳಿಕೆಯನ್ನು ಪ್ರಧಾನಿ ಮೋದಿಯವರಿಗೆ ತಿಳಿಸಬೇಕೆಂದು ನಮ್ಮ ರಾಜ್ಯದಿಂದ ಆಯ್ಕೆಯಾದ ಸಂಸದರುಗಳನ್ನು ಮತ್ತು ರಾಜ್ಯದ ಬಿಜೆಪಿ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಅವರು ತಿಳಿಸಿದ್ದಾರೆ.

ಓದಿ: ರೇಖಾ ಕದಿರೇಶ್ ಹತ್ಯೆ: ಇದು ಪಕ್ಕಾ ಪ್ಲಾನ್​​ ಮರ್ಡರ್​​ ಎನ್ನುತ್ತಿವೆ ಪೊಲೀಸ್​ ಮೂಲಗಳು..!

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.