ಬೆಂಗಳೂರು: ಕೊರೊನಾ ಮಹಾಮಾರಿಯಿಂದ ಸಂಕಷ್ಟಕ್ಕೆ ಸಿಲುಕಿದ್ದ ಭಾರತದ ಆರ್ಥಿಕತೆಗೆ ಚೈತನ್ಯ ತುಂಬುವ ಉತ್ತಮ ಬಜೆಟ್ ಅನ್ನು ಕೇಂದ್ರ ಸರ್ಕಾರ ನೀಡಿದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಹೇಳಿದರು.
ನಗರಾಭಿವೃದ್ಧಿ, ಕೃಷಿ ಗ್ರಾಮೀಣಾಭಿವೃದ್ಧಿ, ನದಿಗಳ ಜೋಡಣೆ, ಮನೆ-ಮನೆಗೂ ಶುದ್ಧ ಕುಡಿಯುವ ನೀರು, ಪ್ರತಿ ಗ್ರಾಮಕ್ಕೂ 5ಜಿ ಸಂಪರ್ಕ, ಮೂಲ ಸೌಕರ್ಯ ಅಭಿವೃದ್ಧಿಗೆ 20 ಸಾವಿರ ಕೋಟಿ ರೂಪಾಯಿಗಳು, ವಿಶ್ವದರ್ಜೆಯ ಡಿಜಿಟಲ್ ಪಾಠಶಾಲೆ, ದೇಶದ ನೂರು ಜಿಲ್ಲೆಗಳ ನಗರಗಳಿಗೆ ಪೈಪ್ಲೈನ್ ಮೂಲಕ ಗ್ಯಾಸ್ ಸಂಪರ್ಕ, ಬೆಂಗಳೂರು ಮೆಟ್ರೋ ರೈಲು ಮಾರ್ಗ ವಿಸ್ತರಣೆ ಮಾಡುವುದು ಮತ್ತಷ್ಟು ಅನುಕೂಲವಾಗುತ್ತದೆ ಎಂದರು.
ಇದನ್ನೂ ಓದಿ: ಕೇಂದ್ರ ಬಜೆಟ್-2022 : ಜನಸಾಮಾನ್ಯರಿಗೆ ಸಿಕ್ಕಿದ್ದೇನು?
ಬಜೆಟ್ನಲ್ಲಿ ಉತ್ಪಾದನಾ ಕ್ಷೇತ್ರಕ್ಕೆ ನೀಡಲಾಗಿರುವ ಆದ್ಯತೆ ಸೇರಿದಂತೆ ಎಲ್ಲಾ ವಲಯದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗಿದೆ. ಈ ಮೂಲಕ ದೇಶದ ಎಲ್ಲಾ ವರ್ಗದ ಜನರ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಇದಾಗಿದೆ ಎಂದು ತಿಳಿಸಿದರು.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ