ETV Bharat / state

ರಾಜ್ಯದಲ್ಲಿ ಉತ್ಪಾದಿಸುವ ಆಮ್ಲಜನಕ ಇಲ್ಲೇ ಬಳಕೆಗೆ ಕೇಂದ್ರದ ತಾತ್ವಿಕ ಒಪ್ಪಿಗೆ: ಸಚಿವ ಶೆಟ್ಟರ್ - ಬೃಹತ್‌ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌

ಕೊರೊನಾ ರೋಗಿಗಳಿಗೆ ಬಳಕೆಯಾಗುವ ವೈದ್ಯಕೀಯ ಆಮ್ಲಜನಕವನ್ನು ರಾಜ್ಯದಲ್ಲೇ ಉತ್ಪಾದಿಸಲಾಗುತ್ತಿದ್ದು, ಅದನ್ನು ಬೇರೆ ರಾಜ್ಯಗಳಿಗೆ ಕಳುಹಿಸದೆ ನಮ್ಮ ರಾಜ್ಯಕ್ಕೇ ಬಳಕೆ ಮಾಡಿಕೊಳ್ಳುವುದಕ್ಕೆ ಕೇಂದ್ರದಿಂದ ಒಪ್ಪಿಗೆ ಸಿಕ್ಕಿದೆ ಎಂದು ಜಗದೀಶ್​ ಶೆಟ್ಟರ್​ ಹೇಳಿದರು.

Jagadish shettar
Jagadish shettar
author img

By

Published : May 20, 2021, 9:09 AM IST

ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆ ಆಗುವ ವೈದ್ಯಕೀಯ ಆಮ್ಲಜನಕವನ್ನು ರಾಜ್ಯದಲ್ಲೇ ಬಳಕೆ ಮಾಡಲು ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ನೀಡಿದ್ದು, ಅಧಿಕೃತ ಆದೇಶ ಸದ್ಯದಲ್ಲೇ ಹೊರ ಬೀಳಲಿದೆ ಎಂದು ರಾಜ್ಯದ ಆಮ್ಲಜನಕ ಉತ್ಪಾದನೆ ಹಾಗೂ ಸರಬರಾಜು ಉಸ್ತುವಾರಿ ಹೊತ್ತಿರುವ ಬೃಹತ್‌ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ.

ಸಚಿವ ಜಗದೀಶ್​ ಶೆಟ್ಟರ್​

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಉತ್ಪಾದನೆ ಆಗುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಅವಕಾಶ ನೀಡುವಂತೆ ಕೇಂದ್ರ ಸಚಿವರುಗಳಾದ ಪಿಯೂಶ್‌ ಗೋಯೆಲ್‌, ಪ್ರಹ್ಲಾದ್‌ ಜೋಶಿ ಹಾಗೂ ಡಿ.ವಿ.ಸದಾನಂದಗೌಡ ಅವರೊಂದಿಗೆ ಹಲವಾರು ಹಂತದಲ್ಲಿ ಮಾತುಕತೆ ನಡೆಸಿದ್ದೆವು. ಅಲ್ಲದೆ, ಹಲವಾರು ಪತ್ರಗಳನ್ನು ಬರೆಯಲಾಗಿತ್ತು. ಈ ಮಾತುಕತೆ ಮತ್ತು ಸಮಾಲೋಚನೆಗೆ ಫಲ ಸಿಕ್ಕಿದೆ. ರಾಜ್ಯದಲ್ಲಿ ಉತ್ಪಾದನೆ ಆಗುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಕೇಂದ್ರ ತಾತ್ವಿಕ ಒಪ್ಪಿಗೆ ನೀಡಿದೆ. ಸದ್ಯದಲ್ಲೇ ಅಧಿಕೃತ ಘೋಷಣೆ ಹೊರಡಿಸಲಿದೆ ಎಂದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬಹಳಷ್ಟು ನೆರವು ದೊರಕುತ್ತಿದೆ. ಕೇಂದ್ರ ಸರ್ಕಾರ ಬಹರೈನ್ ಮತ್ತು ಕುವೈತ್​ನಿಂದ 180 ಮೆಟ್ರಿಕ್‌ ಟನ್‌ ಆಮ್ಲಜನಕವನ್ನು ರಾಜ್ಯಕ್ಕೆ ನೀಡಿದೆ. ಅಲ್ಲದೆ, ರೈಲು ಮೂಲಕ ಮೇ 11ರಂದು ಜಮ್‌ಶೇಡ್‌ಪುರದಿಂದ 120 ಮೆಟ್ರಿಕ್ ಟನ್, ಮೇ 15ರಂದು ಕಳಿಂಗಾನಗರದಿಂದ 180 ಮೆಟ್ರಿಕ್ ಟನ್ ಆಮ್ಲಜನಕ ಸರಬರಾಜು ಆಗಿದೆ. ಅಲ್ಲದೆ, ಮುಂದಿನ ಒಂದು ವಾರದಲ್ಲಿ ಸುಮಾರು 320 ದ್ರವೀಕೃತ ಆಮ್ಲಜನಕ ರವಾನೆ ಆಗುವ ನಿರೀಕ್ಷೆ ಇದೆ. 200 ಸಿಲಿಂಡರ್‌ಗಳನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಬೆಂಗಳೂರು ನಗರದ ಕ್ಷೇಮಾಭಿವೃದ್ಧಿ ಸಂಘಗಳ ಜೊತೆ ಬಿಬಿಎಂಪಿ ಮುಖ್ಯ ಆಯುಕ್ತ ಸಭೆ

ರಾಜ್ಯದಿಂದ ತೆಲಂಗಾಣಕ್ಕೆ 145 ಮೆಟ್ರಿಕ್ ಟನ್, ಆಂಧ್ರ ಪ್ರದೇಶಕ್ಕೆ 63 ಮೆಟ್ರಿಕ್ ಟನ್ ಮತ್ತು ಮಹರಾಷ್ಟ್ರಕ್ಕೆ 40 ಮೆಟ್ರಿಕ್ ಟನ್​ಗಳಷ್ಟು ರವಾನೆ ಮಾಡಲಾಗುತ್ತಿದೆ. ಇದನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಅನುವು ಮಾಡಿಕೊಡಲು ಕೇಂದ್ರ ಸರ್ಕಾರ ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಅಧಿಕೃತ ಆದೇಶ ಹೊರಬಿದ್ದ ನಂತರ ಬೇರೆ ರಾಜ್ಯಗಳಿಂದ ರಾಜ್ಯಕ್ಕೆ ಹಂಚಿಕೆ ಆಗಿರುವ ಆಮ್ಲಜನಕ ಸಾಗಾಣಿಕೆಯಲ್ಲಿ ಆಗುತ್ತಿರುವ ವಿಳಂಬ ತಪ್ಪುತ್ತದೆ ಎಂದು ಹೇಳಿದರು.

ಆಯಾ ಜಿಲ್ಲೆಗಳಲ್ಲಿರುವ ಸಕ್ರಿಯ ಪ್ರಕರಣಗಳ ಆಧಾರದ ಮೇಲೆ ಆಮ್ಲಜನಕವನ್ನು ಹಂಚಿಕೆ ಮಾಡಲಾಗುತ್ತಿದೆ. ರಾಜ್ಯಕ್ಕೆ 1400ರಿಂದ 1700 ಮೆಟ್ರಿಕ್‌ ಟನ್‌ಗಳಷ್ಟು ಆಮ್ಲಜನಕದ ಅವಶ್ಯಕತೆ ಇದೆ ಎಂದು ತಜ್ಞರು ಹೇಳಿದ್ದಾರೆ. ಕಳೆದ 7 ದಿನಗಳಲ್ಲಿ ಸರಾಸರಿ 880 ಮೆಟ್ರಿಕ್‌ ಟನ್‌ನಷ್ಟು ಬಳಕೆ ಆಗುತ್ತಿದೆ. ಅಲ್ಲದೆ, ನಿನ್ನೆ 66.7 ಮೆಟ್ರಿಕ್‌ ಟನ್​​ನಷ್ಟು ಕೊರತೆಯೂ ಕಂಡುಬಂದಿದೆ ಎಂದು ಮಾಹಿತಿ ನೀಡಿದರು.

ಆಮ್ಲಜನಕ ಉತ್ಪಾದನೆ ಹೆಚ್ಚಳಕ್ಕೆ ಕ್ರಮ:

ರಾಜ್ಯದಲ್ಲಿ ಆಮ್ಲಜನಕ ಉತ್ಪಾದನೆ ಹಾಗೂ ನೈಟ್ರೋಜನ್‌ ಪಿಎಸ್‌ಎ ಉತ್ಪಾದನಾ ಘಟಕಗಳನ್ನು ಆಮ್ಲಜನಕ ಉತ್ಪಾದನೆಗೆ ಪರಿವರ್ತಿಸಲು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ಮತ್ತು ಯಾದಗಿರಿ ಜಿಲ್ಲೆಯಲ್ಲಿ 1000 ಎಲ್‌ಪಿಎಂ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಪ್ರಾರಂಭಿಸಲಾಗಿದೆ. ಕೇಂದ್ರ, ರಾಜ್ಯ ಸರ್ಕಾರಗಳು ಮತ್ತು ಸಾರ್ವಜನಿಕ ಉದ್ದಿಮೆಗಳ ಸಹಕಾರದಿಂದ ಒಟ್ಟಾರೆಯಾಗಿ 104 ಆಮ್ಲಜನಕ ಉತ್ಪಾದನಾ ಘಟಕಗಳನ್ನು ಪ್ರಾರಂಭಿಸಲಿದ್ದೇವೆ. ರಾಯಚೂರಿನಲ್ಲಿ ನೈಟ್ರೋಜನ್‌ ಪಿಎಸ್‌ಎ ಉತ್ಪಾದನಾ ಘಟಕವನ್ನು ಪರಿವರ್ತಿಸಿ ಜಿಲ್ಲಾ ಆಸ್ಪತ್ರೆಗೆ ಅಳವಡಿಸುವ ಕಾರ್ಯ ಅಂತಿಮ ಹಂತದಲ್ಲಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 28, ರಾಜ್ಯ ಸರ್ಕಾರ 40, ಎನ್‌ಹೆಚ್‌ಎಐ, ಡಿಆರ್‌ಡಿಒ ಸಹಕಾರದಲ್ಲಿ 26 ಆಕ್ಸಿಜನ್‌ ಜನರೇಟರ್​ಗಳನ್ನು ರಾಜ್ಯದಲ್ಲಿ ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಇನ್ನು ರಾಜ್ಯಕ್ಕೆ 60 ಸಾವಿರ ಆಕ್ಸಿಜನ್‌ ಕಾನ್ಸನ್ಟ್ರೇಟರ್‌ಗಳನ್ನು ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ. ರಾಜ್ಯ ಸರ್ಕಾರ ಈಗಾಗಲೇ 3 ಸಾವಿರ ಕಾನ್ಸನ್ಟ್ರೇಟರ್‌ಗಳ ಖರೀದಿಗೆ ಟೆಂಡರ್‌ ನೀಡಿದೆ. ಕೇಂದ್ರ ಸರ್ಕಾರ 800 ಕಾನ್ಸನ್ಟ್ರೇಟರ್‌ಗಳನ್ನು ನೀಡಿದ್ದು, ಹಂತ ಹಂತವಾಗಿ ನೀಡುವ ನಿರೀಕ್ಷೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಮನೆಯಲ್ಲೇ ಕುಳಿತು ರ್‍ಯಾಪಿಡ್ ಕೋವಿಡ್ ಟೆಸ್ಟ್ ಮಾಡಿಸಲು ಸಿಕ್ತು ಕಿಟ್: ಯಾರ‍್ಯಾರು ಪರೀಕ್ಷೆಗೆ ಒಳಪಡಬಹುದು?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.