ETV Bharat / state

ಕೃಷಿ ಕಾಯಿದೆಗಳ ವಿರುದ್ಧ ಪ್ರತಿಭಟನೆ: ರೈತರ ಜೊತೆ ಮಾತುಕತೆಗೆ ಕೇಂದ್ರ ಸಿದ್ಧ - ಶೋಭಾ ಕರಂದ್ಲಾಜೆ

author img

By

Published : Aug 27, 2021, 4:00 PM IST

ರೈತರಿಗೆ ಅನುಕೂಲವಾಗುವಂತಹ ಕಾಯಿದೆ ಜಾರಿಗೆ ತರಲಾಗಿದೆ. ಹನ್ನೊಂದು ಬಾರಿ ರೈತರ ಜೊತೆ ಮಾತುಕತೆ ನಡೆದಿದೆ. ಈಗಲೂ ಸಹ ಪ್ರತಿಭಟನೆ ನಡೆಸುತ್ತಿರುವ ರೈತರ ಜೊತೆ ಕೇಂದ್ರ ಸರ್ಕಾರ ಮಾತುಕತೆಗೆ ಸಿದ್ದವಿದೆ ಎಂದು ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ

ಬೆಂಗಳೂರು : ಕೃಷಿಗೆ ಸಂಬಂಧಿಸಿದ ಮೂರು ಬಿಲ್​​ಗಳ ಬಗ್ಗೆ ಕೇಂದ್ರ ಸರ್ಕಾರ ಬಹಳ ಸ್ಪಷ್ಟವಿದೆ. ಮೂವತ್ತು ವರ್ಷಗಳಿಂದ ಅನೇಕ ಸಮಿತಿಗಳು ನೀಡಿರುವ ವರದಿಗಳ ಆಧಾರದಲ್ಲಿ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ ಎಂದು ಕೇಂದ್ರ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದ್ದಾರೆ.

ವಿಕಾಸಸೌಧದಲ್ಲಿ ಇಂದು ನಡೆದ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಕಾರ್ಯಚಟುವಟಿಕೆ ಮತ್ತು ಕಾರ್ಯಕ್ಷಮತೆ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾಮಿನಾಥನ್ ವರದಿ ಪ್ರಕಾರ ಎಪಿಎಂಸಿ ಯಲ್ಲಿ ರೈತರಿಗೆ ಅನ್ಯಾಯಗುತ್ತಿದೆ ಅಂತ ಹೇಳಿದ್ದಾರೆ. ಹಾಗಾಗಿ, ರೈತರಿಗೆ ಅನುಕೂಲವಾಗುಂತಹ ಕಾಯಿದೆ ಜಾರಿಗೆ ತರಲಾಗಿದೆ. ಹನ್ನೊಂದು ಬಾರಿ ರೈತರ ಜೊತೆ ಮಾತುಕತೆ ನಡೆದಿದೆ. ಈಗಲೂ ಸಹ ಪ್ರತಿಭಟನೆ ನಡೆಸುತ್ತಿರುವ ರೈತರ ಜೊತೆ ಕೇಂದ್ರ ಸರ್ಕಾರ ಮಾತುಕತೆಗೆ ಸಿದ್ದವಿದೆ ಎಂದರು.

ನಾನೀಗ ಜವಾಬ್ದಾರಿ ಸ್ಥಾನದಲ್ಲಿದ್ದೇನೆ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಎಡವಟ್ಟು ಹೇಳಿಕೆಗೆ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಅವರ ಹೇಳಿಕೆ ನನಗೆ ಯಾಕೆ ಕೇಳುತ್ತಿದ್ದಿರಿ?.‌ ನಾನು ಈಗ ಜವಾಬ್ದಾರಿ ಸ್ಥಾನದಲ್ಲಿದ್ದೇನೆ. ನಾನು ಈಗ ಹೋರಾಟದ ಮೂಲಕ ಪ್ರತಿಕ್ರಿಯಿಸಲು ಆಗುವುದಿಲ್ಲ. ರಾಜ್ಯ ಸರ್ಕಾರ ಹಾಗೂ ಪೊಲೀಸರಿಗೆ ಹೇಳಬಹುದು ಅಷ್ಟೇ ಎಂದು ಹೇಳಿದರು.

ಗೃಹ ಸಚಿವರ ಹೇಳಿಕೆ ಬಗ್ಗೆ ನನ್ನನ್ನ ಯಾಕೆ ಎಳಿಯುತ್ತೀರಾ?. ಅವರಿಂದಲೇ ಸ್ಪಷ್ಟನೆ ಕೇಳಿ. ನಾನು ಜನಾಶೀರ್ವಾದ ಯಾತ್ರೆಯಲ್ಲಿ ಮಧ್ಯರಾತ್ರಿ 12 ರವರೆಗೂ ಓಡಾಡಿದ್ದೇನೆ. ಪ್ರಕರಣಗಳಲ್ಲಿ ನಮ್ಮ ಸರ್ಕಾರ ವಿಫಲ ಆಗಿಲ್ಲ. ಯಾರನ್ನೂ ರಕ್ಷಣೆ ಮಾಡುವ ಅವಶ್ಯಕತೆ ನಮ್ಮ ಸರ್ಕಾರಕ್ಕೆ ಇಲ್ಲ ಎಂದರು.

ಮೈಸೂರು ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಅಲ್ಲಿನ ಕಮೀಷನರ್ ಗೆ ಕಠಿಣ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಆರೋಪಿಗಳಿಗೆ ಶಿಕ್ಷೆಯಾಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ : ಮೈಸೂರು ರೇಪ್​ ಪ್ರಕರಣ: ಉನ್ನತ ಅಧಿಕಾರಿಗಳ ಸಭೆ ನಡೆಸಿದ ಆರಗ ಜ್ಞಾನೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.