ETV Bharat / state

ಕನ್ನಡದ ಕಣ್ಣಿಗೆ ಸುಣ್ಣ, ಬೇರೆ ಭಾಷೆಗಳಿಗೆ ಬೆಣ್ಣೆ: ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ?: ಹೆಚ್​ಡಿಕೆ ಪ್ರಶ್ನೆ - ಕನ್ನಡ ಭಾಷೆ ಬಗ್ಗೆ ಕೇಂದ್ರ ಸರ್ಕಾರದ ತಾರತಮ್ಯ

ಕೇಂದ್ರದ ವಿರುದ್ಧ ಮಾಜಿ ಸಿಎಂ ಹೆಚ್​ಡಿಕೆ ಟ್ವೀಟ್​ ದಾಳಿ- ಕನ್ನಡ ಭಾಷೆ ಬಗ್ಗೆ ಕೇಂದ್ರ ಸರ್ಕಾರದ ತಾರತಮ್ಯ- ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನೆ

Formee CM H D kumaraswami
ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
author img

By

Published : Jan 7, 2023, 1:50 PM IST

ಬೆಂಗಳೂರು: ಕನ್ನಡ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿ 15 ವರ್ಷಗಳೇ ಆಯಿತು. 13 ವರ್ಷಗಳಲ್ಲಿ ಕನ್ನಡಕ್ಕೆ ಸಿಕ್ಕಿದ ಅನುದಾನ ಕೇವಲ 3 ಕೋಟಿ ರೂ. ತಮಿಳಿಗೆ ಸಿಕ್ಕಿದ್ದು 43 ಕೋಟಿ. ಆದರೆ, ಸಂಸ್ಕೃತಕ್ಕೆ ಇವರು ಕೊಟ್ಟಿದ್ದು ಬರೋಬ್ಬರಿ 643 ಕೋಟಿ. ಕನ್ನಡದ ಕಣ್ಣಿಗೆ ಸುಣ್ಣ, ಬೇರೆ ಭಾಷೆಗಳಿಗೆ ಬೆಣ್ಣೆ. ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ? ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೇಂದ್ರದಿಂದ ಕನ್ನಡಕ್ಕೆ ಆಗುತ್ತಿರುವ ಅನುದಾನದ ಅನ್ಯಾಯದ ವಿರುದ್ಧ ನಾನು ಅನೇಕ ಸಲ ದನಿ ಎತ್ತಿದ್ದೇನೆ. ಬಿಜೆಪಿ, ಕಾಂಗ್ರೆಸ್ ಪಕ್ಷಗಳ ಆಡಳಿತಕ್ಕೆ ಅದು ಕೇಳಲೇ ಇಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಸಂಸ್ಕೃತ, ಹಿಂದಿ ತುಷ್ಟೀಕರಣದಿಂದ ಕನ್ನಡಕ್ಕೆ ಅದೆಷ್ಟು ವಂಚನೆ ಆಗಿದೆ ಎನ್ನುವುದಕ್ಕೆ ಅನುದಾನದ ತಾರತಮ್ಯವೇ ಸಾಕ್ಷಿ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈಗ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ ದೊಡ್ದರಂಗೇಗೌಡ ಅವರೇ ಸಮ್ಮೇಳನದ ತಮ್ಮ ಭಾಷಣದಲ್ಲಿ ಅನುದಾನದ ಅನ್ಯಾಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಎದುರೇ ಬಿಜೆಪಿ ಸರ್ಕಾರದ ಮುಖಕ್ಕೆ ರಾಚುವಂತೆ ಹೇಳಿದ್ದಾರೆ. ಈ ವಿಷಯ ಪ್ರಸ್ತಾಪ ಮಾಡಿದ ಅವರನ್ನು ಮನಸಾರೆ ಅಭಿನಂದಿಸುತ್ತೇನೆ ಎಂದು ಹೇಳಿದ್ದಾರೆ.

  • ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿ 15 ವರ್ಷಗಳೇ ಆಯಿತು.13 ವರ್ಷಗಳಲ್ಲಿ ಕನ್ನಡಕ್ಕೆ ಸಿಕ್ಕಿದ ಅನುದಾನ ಕೇವಲ 3 ಕೋಟಿ ರೂ.!! ತಮಿಳಿಗೆ ಸಿಕ್ಕಿದ್ದು 43 ಕೋಟಿ. ಆದರೆ, ಸಂಸ್ಕೃತಕ್ಕೆ ಇವರು ಕೊಟ್ಟಿದ್ದು ಬರೋಬ್ಬರಿ 643 ಕೋಟಿ!!! ಕನ್ನಡದ ಕಣ್ಣಿಗೆ ಸುಣ್ಣ, ಬೇರೆ ಭಾಷೆಗಳಿಗೆ ಬೆಣ್ಣೆ.
    ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ? 1/5#ಕನ್ನಡ

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 7, 2023 " class="align-text-top noRightClick twitterSection" data=" ">

ಹಿಂದಿ ಹೇರಿಕೆ ಮೂಲಕ ಸದಾ ಕನ್ನಡದ ಮೇಲೆ ಪ್ರಹಾರ ನಡೆಸುತ್ತಲೇ ಇರುವ ಕೇಂದ್ರ ಬಿಜೆಪಿ, ಅವಕಾಶ ಸಿಕ್ಕಾಗಲೆಲ್ಲ ಕನ್ನಡದ ಬೇರುಗಳಿಗೆ ಕೊಡಲಿ ಪೆಟ್ಟು ಕೊಡುತ್ತಿದೆ. ನೆಲ, ಜಲ, ಭಾಷೆ ವಿಷಯದಲ್ಲಿ ಕರ್ನಾಟಕಕ್ಕೆ ಆ ಪಕ್ಷವು ಅನ್ಯಾಯದ ಸರಣಿಯನ್ನೇ ಮುಂದುವರಿಸಿದೆ. ಬೆಳಗಾವಿ ವಿಷಯದಲ್ಲಿ ಕೇಂದ್ರ ಸರ್ಕಾರ ವರ್ತಿಸುತ್ತಿರುವ ರೀತಿ ಕಳವಳಕಾರಿ. ಒಕ್ಕೂಟ ಭಾಷೆಗಳ ನಡುವೆ ಅನುದಾನದಲ್ಲಿ ಮಾತ್ರವಲ್ಲ, ಯಾವ ವಿಷಯದಲ್ಲೂ ತಾರತಮ್ಯ ಎಸಗಬಾರದು. ಈ ವ್ಯವಸ್ಥೆಯಲ್ಲಿ ಆಡಳಿತ ನಡೆಸುವವರಿಗೆ ರಾಜಧರ್ಮ ಪಾಲನೆ ಅತ್ಯಗತ್ಯ. ದೇಶಕ್ಕೆ ಅತಿಹೆಚ್ಚು ತೆರಿಗೆ ತೆರುತ್ತಿರುವ ಕರ್ನಾಟಕದ ವಿಷಯದಲ್ಲಿ ಇಂಥ ರಾಜಧರ್ಮ ಪಾಲನೆ ಆಗುತ್ತಿಲ್ಲ ಎಂದು ಹೆಚ್​ಡಿಕೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿ ನಮ್ಮದು.. ಮಹಾಜನ ವರದಿ ಓದಿರಿ: ಸಾಹಿತ್ಯ ಸಮ್ಮೇಳನಾಧ್ಯಕ್ಷ ದೊಡ್ಡರಂಗೇಗೌಡ ಗುಡುಗು..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.