ETV Bharat / state

5 ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ: ಸಚಿವ ಆರ್.ಅಶೋಕ್ - ರಾಗಿ ವಿತರಣೆ

ರಾಜ್ಯದಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್ ನಂತೆ ಗರಿಷ್ಠ 20 ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗುತ್ತಿದೆ. ಇದುವರೆಗೆ 4.85 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಮಾರಾಟ ಮಾಡಲು 3,24,476 ರೈತರು ನೋಂದಣಿ ಮಾಡಿಕೊಂಡಿರುತ್ತಾರೆ ಎಂದು ಸಚಿವ ಆರ್ ಅಶೋಕ್ ತಿಳಿಸಿದರು.

Minister R  Ashok
ಸಚಿವ ಆರ್.ಅಶೋಕ್
author img

By

Published : Feb 15, 2023, 11:00 AM IST

ಬೆಂಗಳೂರು: 2022-23ನೇ ಸಾಲಿನಲ್ಲಿ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ರಾಜ್ಯದ ರೈತರಿಂದ 5 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ವಿಧಾನಸಭೆಯ ಕಲಾಪದಲ್ಲಿ ವಿಧಾನಸಭೆಯ ಸದಸ್ಯರಾದ ಮಹದೇವ.ಕೆ ಅವರ ಗಮನ ಸೆಳೆಯುವ ಸೂಚನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರವಾಗಿ ಮಾತನಾಡಿದ ಸಚಿವರು, "ರಾಜ್ಯದಲ್ಲಿ ಸಣ್ಣ ಮತ್ತು ಅತೀ ಸಣ್ಣ ರೈತರಿಂದ ಪ್ರತಿ ಎಕರೆಗೆ 10 ಕ್ವಿಂಟಾಲ್ ನಂತೆ ಗರಿಷ್ಠ 20 ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗುತ್ತಿದೆ. ಇದುವರೆಗೆ 4.85 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ಮಾರಾಟ ಮಾಡಲು 3,24,476 ರೈತರು ನೋಂದಣಿ ಮಾಡಿಕೊಂಡಿರುತ್ತಾರೆ" ಎಂದು ತಿಳಿಸಿದರು.

5 ಲಕ್ಷ ಮೆಟ್ರಿಕ್ ಟನ್ ರಾಗಿ ವಿತರಣೆ: ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲಾಗಿರುವ ಸಂಪೂರ್ಣ ರಾಗಿಯನ್ನು ಸಾರ್ವಜನಿಕ ವಿತರಣಾ ಪದ್ದತಿಯಡಿ ರಾಜ್ಯದಲ್ಲಿನ ಪಡಿತರ ಫಲಾನುಭವಿಗಳಿಗೆ ಕಡ್ಡಾಯವಿರುತ್ತದೆ. ರಾಗಿ ಪ್ರಮುಖ ಆಹಾರವಾಗಿದ್ದು, ಜಿಲ್ಲೆಗಳ ಪಡಿತರ ಫಲಾನುಭವಿಗಳಿಗೆ 10 ತಿಂಗಳ ಅವಧಿಯಲ್ಲಿ 5 ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ವಿತರಿಸಲಾಗುತ್ತದೆ ಎಂದರು.

2021-22ನೇ ಮುಂಗಾರು ಋತುವಿನಲ್ಲಿ, ಕನಿಷ್ಠ ಬೆಂಬಲ ಯೋಜನೆಯಡಿ ರಾಜ್ಯದ 2,67,076 ರೈತರಿಂದ ಒಟ್ಟು 404783.700 ಮೆಟ್ರಿಕ್ ಟನ್ ರಾಗಿಯನ್ನು‌ ಖರೀದಿಸಲಾಗಿದೆ. ಸದರಿ ರಾಗಿಯನ್ನು ಸಾರ್ವಜನಿಕ ವಿತರಣಾ ಪದ್ದತಿಯಡಿ ಪಡಿತರ ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದರು. ರಾಜ್ಯದಲ್ಲಿ 5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವ ರೈತರಿಂದ ಎಂಎಸ್​​ಪಿ ದರದಲ್ಲಿ ರಾಗಿ ಖರೀದಿಸುವ ಮೂಲಕ ರಾಗಿ ಖರೀದಿ ನಿಗದಿತ ಗುರಿ ತಲುಪಲು ಹಾಗೂ ರೈತರಿಗೆ ಅನುಕೂಲ ಮಾಡಿಕೊಡುವ ಬಗ್ಗೆ ಶಾಸಕ ಕೆ.ಮಹದೇವ ಅವರು ಗಮನ ಸೆಳೆದರು.

ಇದನ್ನೂ ಓದಿ: ವಿಧಾನಸಭೆಯಲ್ಲಿ ಸದ್ದು ಮಾಡಿದ ರಾಗಿ ಖರೀದಿ ವಿಚಾರ: ಸ್ಪೀಕರ್ ಕಾಗೇರಿ ಗರಂ

ಸಾಲುಗಟ್ಟಿ ನಿಂತ ಟ್ರ್ಯಾಕ್ಟರ್​ಗಳು: ಕನಿಷ್ಠ ಬೆಂಬಲ ಬೆಲೆ (MSP) ಯೋಜನೆಯಡಿ ರೈತರಿಂದ ರಾಗಿ ಖರೀದಿಯನ್ನು ಮಾಡಲಾಗುತ್ತಿದೆ. ಈ ಹಿನ್ನೆಲೆ ನೋಂದಾಯಿತ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಗೋದಾಮುಗಳಿಗೆ ಬರುತ್ತಿದ್ದು, ಕಿಲೋ ಮೀಟರ್ ಗಟ್ಟಲೆ ಟ್ರ್ಯಾಕ್ಟರ್​ಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಮೋಹನಕುಮಾರಿ ರೈತರ ಸಮಸ್ಯೆಗಳನ್ನು ಅಲಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆ ನೀಡಿದ್ದರು.

ಫೆ.7 ರಂದು ದೊಡ್ಡಬಳ್ಳಾಪುರ ತಾಲೂಕಿನ ಗುಂಡುಂಗೆರೆ ಕ್ರಾಸ್ ಬಳಿಯ ಇರುವ ಕರ್ನಾಟಕ ರಾಜ್ಯ ಉಗ್ರಣ ನಿಗಮದ ಗೋದಾಮುಗಳಲ್ಲಿ ರೈತರಿಂದ ಕನಿಷ್ಠ ಬೆಂಬಲ ಬೆಲೆ ಕೊಟ್ಟು ಖರೀದಿ ಮಾಡಿದ ರಾಗಿಯನ್ನು ದಾಸ್ತಾನು ಮಾಡಲಾಗುತ್ತಿತ್ತು. ದೊಡ್ಡಬಳ್ಳಾಪುರ ತಾಲೂಕಿನ ರೈತರು ಸೇರಿದಂತೆ ನೆಲಮಂಗದ ರೈತರು ಸಹ ರಾಗಿ ದಾಸ್ತಾನು ಮಾಡಲು ಗೋದಾಮುಗಳಿಗೆ ಬಂದಿದ್ದರು. ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಅಕ್ಕ-ಪಕ್ಕ ಜಿಲ್ಲೆಗಳಿಂದ ರೈತರು ಬರುತ್ತಿರುವುದರಿಂದ ದಟ್ಟನೆ ಉಂಟಾಗಿತ್ತು. ರಾಗಿ ದಾಸ್ತಾನು ಮಾಡಲು ಬರುವ ರೈತರು ಎರಡರಿಂದ ಮೂರು ದಿನ ಕಾಯಬೇಕಾದ ಪರಿಸ್ಥಿತಿ ಎದುರಾಗಿತ್ತು. ಇನ್ನು, ಈ ಮಾಹಿತಿ ತಿಳಿದು ಜಿಲ್ಲಾಧಿಕಾರಿಗಳು ಸಹ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದರು. ರೈತರಿಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಮತ್ತು ಕಾರ್ಮಿಕರ ಸಂಖ್ಯೆ ಹೆಚ್ಚಿಸುವಂತೆ ಸೂಚನೆ ನೀಡಿದ್ದರು.

ಇದನ್ನೂ ಓದಿ: ರಾಗಿ ಖರೀದಿ ಕೇಂದ್ರದಲ್ಲಿ ಸಾಲುಗಟ್ಟಿ ನಿಂತ ಟ್ರ್ಯಾಕ್ಟರ್​ಗಳು :ಸ್ಥಳಕ್ಕೆ ತಹಶೀಲ್ಧಾರ್ ಭೇಟಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.